ರಾಜ್ಯದಲ್ಲಿ ಕೊರೊನಾ ತುಸು ಇಳಿಕೆ

ಬೆಂಗಳೂರು, ಸೆ. ೨೯: ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು ಕಳೆದ ೨೪ ಗಂಟೆಯಲ್ಲಿ ೫೩೯ ಕೊರೊನಾ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ ೨೯,೭೫,೦೬೭ಕ್ಕೆ ಏರಿಕೆಯಾಗಿದೆ. ಮಹಾಮಾರಿಗೆ ೧೭ ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ ೩೭,೭೮೦ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ. ಬೆಂಗಳೂರಿನಲ್ಲಿ ೨೩೯ ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ ೧೨,೪೫,೯೦೦ಕ್ಕೆ ಏರಿಕೆಯಾಗಿದೆ. ನಗರದಲ್ಲಿ ೬ ಮಂದಿ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ೫೯೧ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿAದ ಚೇತರಿಸಿಕೊಂಡವರ ಸಂಖ್ಯೆ ೨೯,೨೪,೬೯೩ಕ್ಕೆ ಏರಿಕೆಯಾಗಿದೆ. ೧೨,೫೬೫ ಸಕ್ರಿಯ ಪ್ರಕರಣಗಳಿವೆ. ರಾಜ್ಯಾದ್ಯಂತ ೧,೧೧,೫೩೮ ಕೋವಿಡ್ ಟೆಸ್ಟ್ ನಡೆಸಲಾಗಿದ್ದು, ೫೩೯ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. ೦.೪೮ಕ್ಕೆ ಇಳಿದಿದೆ.

ಅಮಿತ್ ಶಾ ಭೇಟಿ ಮಾಡಿದ ಅಮರೀಂದರ್ ಸಿಂಗ್

ನವದೆಹಲಿ, ಸೆ. ೨೯: ಪಂಜಾಬ್ ಮಾಜಿ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಅವರು ಕೇಂದ್ರ ಗೃಹ ಸಚಿವ ಹಾಗೂ ಬಿಜೆಪಿ ನಾಯಕ ಅಮಿತ್ ಶಾ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿದ್ದು, ಕ್ಯಾಪ್ಟನ್ ಕೇಸರಿ ಪಕ್ಷ ಸೇರುತ್ತಾರೆ ಎಂಬ ಊಹಾಪೋಹಗಳಿಗೆ ಮತ್ತಷ್ಟು ಪುಷ್ಟಿ ನೀಡಿದ್ದಾರೆ. ಅಮರೀಂದರ್ ಸಿಂಗ್ ಅವರು ಪಂಜಾಬ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಮಂಗಳವಾರ ರಾಷ್ಟç ರಾಜಧಾನಿಗೆ ಆಗಮಿಸಿದ್ದು, ಇಂದು ಅಮಿತ್ ಶಾ ಭೇಟಿ ಮಾಡಿದ್ದಾರೆ. ಉಭಯ ನಾಯಕರ ಭೇಟಿ ರಾಜಕೀಯ ವಲಯದಲ್ಲಿ ಮಹತ್ವ ಪಡೆದುಕೊಂಡಿದೆ. ಅಮರೀಂದರ್ ಸಿಂಗ್ ಹಾಗೂ ಅಮಿತ್ ಶಾ ಭೇಟಿ ಕೇವಲ ಸೌಜನ್ಯದ ಭೇಟಿ ಎಂದು ಪಂಜಾಬ್ ಮಾಜಿ ತಂಡ ಹೇಳಿಕೊಂಡಿದೆ. ಆದರೆ ಸಿಂಗ್-ಶಾ-ನಡ್ಡಾ ಭೇಟಿಯು ಮುಂದಿನ ದಿನಗಳಲ್ಲಿ ಪಂಜಾಬ್ ಕಾಂಗ್ರೆಸ್ ನಾಯಕ ಬಿಜೆಪಿ ಸೇರುವ ವದಂತಿಗೆ ಮತ್ತಷ್ಟು ಪುಷ್ಟಿ ನೀಡಿದೆ. ಕೆಲವು ವರದಿಗಳ ಪ್ರಕಾರ, ಅಮರೀಂದರ್ ಸಿಂಗ್ ಅವರು ಬಿಜೆಪಿ ಸೇರುತ್ತಿದ್ದು, ಪ್ರಧಾನಿ ನರೇಂದ್ರ ಮೋದಿಯವರ ಸಂಪುಟದಲ್ಲಿ ಕೇಂದ್ರ ಕೃಷಿ ಸಚಿವರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ.

ಉಮೇಶ್ ರೆಡ್ಡಿಗೆ ಗಲ್ಲು ಶಿಕ್ಷೆ ಖಾಯಂ: ಹೈಕೋರ್ಟ್ ತೀರ್ಪು

ಬೆಂಗಳೂರು, ಸೆ. ೨೯: ವಿಕೃತ ಕಾಮಿ, ಸರಣಿ ಹಂತಕ ಉಮೇಶ್ ರೆಡ್ಡಿಗೆ ಕರ್ನಾಟಕ ಹೈಕೋರ್ಟ್ ಗಲ್ಲು ಶಿಕ್ಷೆಯನ್ನು ಖಾಯಂಗೊಳಿಸಿದೆ. ಉಮೇಶ್ ರೆಡ್ಡಿಗೆ ವಿಧಿಸಲಾಗಿರುವ ಗಲ್ಲು ಶಿಕ್ಷೆಯನ್ನು ಜೀವಾವಧಿ ಶಿಕ್ಷೆಯನ್ನಾಗಿ ಮಾರ್ಪಡಿಸಬೇಕು ಎಂದು ಉಮೇಶ್ ರೆಡ್ಡಿ ಪರ ವಕೀಲ ಬಿ.ಎನ್. ಜಗದೀಶ್ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಉಮೇಶ್ ರೆಡ್ಡಿಯ ಕ್ಷಮಾದಾನ ಅರ್ಜಿ ಇತ್ಯರ್ಥ ವಿಳಂಬಿಸಲಾಗಿದೆ. ೧೦ ವರ್ಷಗಳಿಂದ ಆತನನ್ನು ಒಂಟಿಸೆರೆಯಲ್ಲಿಡಲಾಗಿದೆ. ಇದರಿಂದ ಮಾನಸಿಕ ಯಾತನೆ ಅನುಭವಿಸಿದ್ದಾಗಿ ರೆಡ್ಡಿ ಪರ ವಕೀಲರು ವಾದ ಮಂಡಿಸಿದ್ದರು. ಇದಕ್ಕೆ ನ್ಯಾಯಮೂರ್ತಿ ಅರವಿಂದ್‌ಕುಮಾರ್, ನ್ಯಾ, ಪ್ರದೀಪ್ ಸಿಂಗ್ ಯೆರೂರ್ ಅವರನ್ನೊಳಗೊಂಡ ವಿಭಾಗೀಯ ಪೀಠ ವಕೀಲರ ವಾದವನ್ನು ತಳ್ಳಿಹಾಕಿದರು. ಕ್ಷಮಾದಾನ ಅರ್ಜಿಯನ್ನು ರಾಷ್ಟçಪತಿಗಳು ವಿಳಂಬ ಮಾಡಿಲ್ಲ ಎಂದು ಹೇಳಿದ್ದು ಗಲ್ಲು ಶಿಕ್ಷೆಯನ್ನು ಖಾಯಂಗೊಳಿಸಿದೆ. ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಲು ಉಮೇಶ್ ರೆಡ್ಡಿ ಕೇಳಿದ್ದ ೬ ವಾರಗಳ ಕಾಲಾವಕಾಶವನ್ನು ನೀಡಲು ಹೈಕೋರ್ಟ್ ಒಪ್ಪಿದೆ. ಹೀಗಾಗಿ ಇನ್ನು ೬ ವಾರಗಳ ಕಾಲ ಉಮೇಶ್ ರೆಡ್ಡಿಯನ್ನು ಗಲ್ಲಿಗೇರಿಸುವಂತಿಲ್ಲ. ೧೯೯೮ರ ಫೆಬ್ರವರಿ ೨೮ ರಂದು ಜಯಶ್ರೀ ಎಂಬ ಮಹಿಳೆಯ ಮೇಲೆ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ೨೦೦೭ರಲ್ಲಿ ಬೆಂಗಳೂರಿನ ಸೆಷನ್ಸ್ ಕೋರ್ಟ್ ಉಮೇಶ್ ರೆಡ್ಡಿಗೆ ಗಲ್ಲು ಶಿಕ್ಷೆ ವಿಧಿಸಿತ್ತು. ನಂತರ ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ ಗಲ್ಲು ಶಿಕ್ಷೆಯನ್ನು ಎತ್ತಿ ಹಿಡಿದಿದ್ದವು. ಹೀಗಾಗಿ ಉಮೇಶ್ ರೆಡ್ಡಿ ತಾಯಿ ಕ್ಷಮಾದಾನ ಕೋರಿ ರಾಷ್ಟçಪತಿಗೆ ಅರ್ಜಿ ಸಲ್ಲಿಸಿದ್ದು ಅದು ೨೦೧೩ರಲ್ಲಿ ತಿರಸ್ಕರಿಸಲ್ಪಟ್ಟಿತ್ತು.

ಡ್ರಗ್ ಪೆಡ್ಲಿಂಗ್ ಮಾಡುತ್ತಿದ್ದ ನೈಜೀರಿಯಾ ನಟನ ಬಂಧನ

ಬೆAಗಳೂರು, ಸೆ. ೨೯: ಡ್ರಗ್ಸ್ ಪೆಡ್ಲಿಂಗ್ ಮಾಡುತ್ತಿದ್ದ ನೈಜೀರಿಯಾ ನಟನನ್ನು ನಗರದ ಕೆ.ಜಿ. ಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಚಕ್ವಿಮ್ ಮಾಲ್ವಿನ್ ಬಂಧಿತ ಡ್ರಗ್ ಪೆಡ್ಲರ್ ಹಾಗೂ ನಟನಾಗಿದ್ದು, ಬ್ಯುಸಿನೆಸ್ ಮಾಡುವ ವ್ಯಕ್ತಿಗಳಿಗೆ, ಕಾಲೇಜು ವಿದ್ಯಾರ್ಥಿಗಳಿಗೆ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಎಂದು ಬೆಂಗಳೂರು ಪೂರ್ವ ವಿಭಾಗದ ಡಿಸಿಪಿ ಡಾ. ಶರಣಪ್ಪ ಅವರು ತಿಳಿಸಿದ್ದಾರೆ. ಡ್ರಗ್ಸ್ ವಿರುದ್ಧ ಕಾರ್ಯಾಚರಣೆ ನಿರಂತರವಾಗಿ ನಡೆಯುತ್ತಿದೆ. ಖಚಿತ ಮಾಹಿತಿ ಮೇರೆಗೆ ಬಿಡಿಎ ಕಾಂಪ್ಲೆಕ್ಸ್ ಮೇಲೆ ದಾಳಿ ಮಾಡಲಾಗಿದೆ. ಬೆಂಗಳೂರಿನ ಹೆಚ್‌ಬಿಆರ್ ಲೇಔಟ್‌ನಲ್ಲಿರುವ ಕಾಂಪ್ಲೆಕ್ಸ್ ಮೇಲೆ ದಾಳಿ ಮಾಡಿದ್ದೇವೆ. ಆರೋಪಿ ಬಳಿಯಿದ್ದ ೧೦ ಲಕ್ಷ ರೂಪಾಯಿ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಲಾಗಿದೆ ಎಂದು ಶರಣಪ್ಪ ಅವರು ಹೇಳಿದ್ದಾರೆ. ಮುಂಬೈನ ನ್ಯೂಯಾರ್ಕ್ ಫಿಲ್ಮ್ ಅಕಾಡೆಮಿಯಲ್ಲಿ ತರಬೇತಿ ಪಡೆದಿದ್ದ ಚಕ್ವಿಮ್ ಮಾಲ್ವಿನ್ ನೈಜೀರಿಯಾದಲ್ಲಿ ಮೂರು ಚಿತ್ರಗಳಲ್ಲಿ ನಟಿಸಿದ್ದ ಎಂಬ ಮಾಹಿತಿ ಲಭ್ಯವಾಗಿದೆ. ಕನ್ನಡದ ಅಣ್ಣಾಬಾಂಡ್, ಪರಮಾತ್ಮ, ತಮಿಳಿನ ಸಿಂಗA, ವಿಶ್ವರೂಪಂ ಸೇರಿ ೨೦ ಚಿತ್ರಗಳಲ್ಲಿ ಸಹನಟನಾಗಿಯೂ ಆತ ನಟಿಸಿದ್ದ. ಆರೋಪಿ ನಟನಿಂದ ೧೦ ಲಕ್ಷ ಮೌಲ್ಯದ ಹ್ಯಾಶಿಷ್ ಆಯಿಲ್, ಎಂಡಿಎAಎ ಜಪ್ತಿ ಮಾಡಲಾಗಿದೆ.

ಗೊಂದಲ ಬೇಡ, ಎಲ್ಲರಿಗೂ ಕೋವಿಡ್ ಪರಿಹಾರ

ಬೆಂಗಳೂರು, ಸೆ. ೨೯: ಯಾರಿಗೂ ಯಾವುದೇ ಗೊಂದಲ ಬೇಡ, ಕೋವಿಡ್‌ನಿಂದ ಮೃತಪಟ್ಟ ಬಿಪಿಎಲ್ ಕುಟುಂಬಕ್ಕೆ ರಾಜ್ಯ ಸರ್ಕಾರ ೧ ಲಕ್ಷ ರೂಪಾಯಿ ಪರಿಹಾರ ಕೊಡುತ್ತದೆ ಎಂದು ಕಂದಾಯ ಸಚಿವ ಆರ್. ಅಶೋಕ್ ಸ್ಪಷ್ಟನೆ ಕೊಟ್ಟಿದ್ದಾರೆ. ಜೊತೆಗೆ ಪರಿಹಾರ ಪಡೆಯಲು ಏನು ಮಾಡಬೇಕು ಎಂಬುದನ್ನೂ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಬಿಪಿಎಲ್ ಕಾರ್ಡ್ ಹೊಂದಿರುವ ಮಾತನಾಡಿರುವ ಅವರು, ರಾಜ್ಯ ಸರ್ಕಾರ ಜನರ ಪರವಾಗಿ ಇದೆ. ನಮ್ಮದು ಜನಸ್ನೇಹಿ ಸರ್ಕಾರ. ಬಿಪಿಎಲ್ ಕುಟುಂಬದ ದುಡಿಯುವ ಸದಸ್ಯನನ್ನು ಕಳೆದುಕೊಂಡವರಿಗೆ ರೂ. ೧ ಲಕ್ಷ ವಿಪತ್ತು ಪರಿಹಾರ ನಿಧಿಯಿಂದ ಕೊಡುತ್ತೇವೆ. ಕೇಂದ್ರ ಸರ್ಕಾರ ಕೋವಿಡ್‌ನಿಂದ ಮೃತಪಟ್ಟ ಎಲ್ಲರಿಗೂ ರೂ. ೫೦ ಸಾವಿರ ನೀಡುತ್ತದೆ. ಬಿಪಿಎಲ್ ಕಾರ್ಡ್ ಇರುವವರಿಗೆ ಒಟ್ಟು ರೂ. ೧.೫ ಲಕ್ಷ ಪರಿಹಾರ ಸಿಗುತ್ತದೆ ಎಂದು ಭರವಸೆ ಕೊಟ್ಟಿದ್ದಾರೆ. ರಾಜ್ಯ ಸರ್ಕಾರ ಮಂಗಳವಾರ ಪರಿಷ್ಕೃತ ಆದೇಶ ಹೊರಡಿಸಿದ್ದರಿಂದ ಎದ್ದಿದ್ದ ಗೊಂದಲಗಳನ್ನು ವಿಪತ್ತು ಪರಿಹಾರ ಮಂಡಳಿ ಅಧ್ಯಕ್ಷರೂ ಆಗಿರುವ ಕಂದಾಯ ಸಚಿವ ಆರ್. ಅಶೋಕ ಪರಿಹರಿಸಿದ್ದಾರೆ. ಜೊತೆಗೆ ಪರಿಹಾರ ಪಡೆಯಲು ಇರುವ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದ್ದಾರೆ.

ಅಫ್ಘಾನಿಸ್ತಾನದಲ್ಲಿ ಅಮೇರಿಕಾದ ಡ್ರೋನ್ ಹಾರಾಟ

ಕಾಬೂಲ್, ಸೆ. ೨೯: ಅಫ್ಘಾನಿಸ್ತಾನದಲ್ಲಿ ಅಮೇರಿಕಾದ ಡ್ರೋನ್ ಹಾರಾಟ ನಡೆಸುತ್ತಿದ್ದು, ತಾಲಿಬಾನ್ ಎಚ್ಚರಿಕೆ ನೀಡಿದೆ. ಅಫ್ಘಾನಿಸ್ತಾನದ ವಾಯು ಪ್ರದೇಶದಲ್ಲಿ ಅಮೇರಿಕಾ ಡ್ರೋನ್ ಹಾರಾಟವನ್ನು ನಿಲ್ಲಿಸದಿದ್ದರೆ ಮುಂದೆ ಎದುರಾಗುವ ಪರಿಣಾಮವನ್ನು ಎದುರಿಸಬೇಕಾಗುತ್ತದೆ ಎಂದು ಹೇಳಿದೆ. ತಾಲಿಬಾನ್ ಸರ್ಕಾರದ ಈ ಹೇಳಿಕೆಗೆ ಪ್ರತಿಯಾಗಿ ಅಮೇರಿಕಾದ ಅಧಿಕಾರಿಗಳನ್ನು ಸಂಪರ್ಕಿಸಲು ಯತ್ನಿಸಿದಾಗ ಅವರು ಸಂಪರ್ಕಕ್ಕೆ ಸಿಕ್ಕಿಲ್ಲ. ಅಫ್ಘಾನಿಸ್ತಾನದ ವಾಯು ಪ್ರದೇಶದಲ್ಲಿ ಡ್ರೋನ್ ಕಾರ್ಯಾಚರಣೆ ನಡೆಸುವ ಮೂಲಕ ಅಮೆರಿಕ ಅಂತಾರಾಷ್ಟಿçÃಯ ಹಕ್ಕುಗಳ ಮತ್ತು ಕಾನೂನನ್ನು ಉಲ್ಲಂಘಿಸಿದೆ. ಜತೆಗೆ ದೋಹಾ, ಕತಾರ್‌ನಲ್ಲಿ ತಾಲಿಬಾನ್‌ನೊಂದಿಗೆ ಮಾಡಿಕೊಂಡ ಒಪ್ಪಂದ ಪಾಲಿಸುವ ಬದ್ಧತೆಯನ್ನು ಮರೆತಿದೆ ಎಂದು ತಾಲಿಬಾನ್ ಟ್ವೀಟ್ ಮಾಡಿದೆ. ಮುಂದಿನ ದಿನಗಳಲ್ಲಿ ಎದುರಾಗಬಹುದಾದ ನಕಾರಾತ್ಮಕ ಪರಿಣಾಮಗಳನ್ನು ತಡೆಗಟ್ಟುವುದಕ್ಕಾಗಿ ಅಫ್ಘಾನಿಸ್ತಾನವನ್ನು ಅಂರ‍್ರಾಷ್ಟಿçÃಯ ಹಕ್ಕುಗಳು, ಕಾನೂನುಗಳು ಮತ್ತು ಬದ್ಧತೆಯ ವ್ಯಾಪ್ತಿಯಲ್ಲಿ ಅಮೇರಿಕಾ ಸೇರಿದಂತೆ ಎಲ್ಲಾ ರಾಷ್ಟçಗಳು ಪರಿಗಣಿಸಬೇಕು ಎಂದು ತಾಲಿಬಾನ್ ಹೇಳಿದೆ. ಕಾಬೂಲ್ ಬಾಂಬ್ ಸ್ಫೋಟದ ಬೆನ್ನಲ್ಲೇ ಅಫ್ಘಾನಿಸ್ತಾನದ ನಂಗಹಾರ್ ಪ್ರಾಂತ್ಯದಲ್ಲಿ ಇಸ್ಲಾಮಿಕ್ ಸ್ಟೇಟ್ ಸಂಘಟನೆಯ ನೆಲೆಯ ಮೇಲೆ ಅಮೇರಿಕಾದ ಮಿಲಿಟರಿ ಪಡೆ ವಾಯುದಾಳಿ ನಡೆಸಿತ್ತು.