ಸೋಮವಾರಪೇಟೆ, ಸೆ. ೨೯: ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಹಲವಷ್ಟು ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲಿ, ಪರಿಹಾರಕ್ಕೆ ಆಗ್ರಹಿಸಿ ನಗರ ಕಾಂಗ್ರೆಸ್ನಿAದ ಪಟ್ಟಣ ಪಂಚಾಯಿತಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಗುವುದು ಎಂದು ಪಕ್ಷದ ನಗರಾಧ್ಯಕ್ಷ ಎಚ್.ಎ. ನಾಗರಾಜು ತಿಳಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಪಟ್ಟಣದ ಕಕ್ಕೆಹೊಳೆ ಬಳಿಯಲ್ಲಿ ಇಂದಿರಾಗಾAಧಿ ಅಭಿಮಾನಿಗಳ ಸಂಘದ ವತಿಯಿಂದ ನಿರ್ಮಿಸಿದ್ದ ಬಸ್ ನಿಲ್ದಾಣವನ್ನು ಕೆಡವಿ ನೂತನ ಬಸ್ ನಿಲ್ದಾಣ ನಿರ್ಮಿಸುತ್ತಿದ್ದು, ಇದಕ್ಕೆ ಮೂಲ ನಿರ್ಮಾಣ ಇಂದಿರಾಗಾAಧಿ ಅಭಿಮಾನಿಗಳ ಸಂಘ ಎಂದು ಫಲಕ ಅಳವಡಿಸುವಂತೆ ಮನವಿ ಮಾಡಿದ್ದರೂ, ಬಿಜೆಪಿ ಸದಸ್ಯರು ಆಕ್ಷೇಪಿಸುತ್ತಿದ್ದಾರೆ. ಇದು ಖಂಡನೀಯ ಎಂದರು.
ಬಸ್ ನಿಲ್ದಾಣ ನಿರ್ಮಾಣಕ್ಕೆ ಶಾಸಕರು ತಾ. ೫.೬.೨೦೨೧ರಂದು ಭೂಮಿಪೂಜೆ ನೆರವೇರಿಸಿದ್ದಾರೆ. ಸೋಮವಾರಪೇಟೆ, ಸೆ. ೨೯: ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಹಲವಷ್ಟು ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲಿ, ಪರಿಹಾರಕ್ಕೆ ಆಗ್ರಹಿಸಿ ನಗರ ಕಾಂಗ್ರೆಸ್ನಿAದ ಪಟ್ಟಣ ಪಂಚಾಯಿತಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಗುವುದು ಎಂದು ಪಕ್ಷದ ನಗರಾಧ್ಯಕ್ಷ ಎಚ್.ಎ. ನಾಗರಾಜು ತಿಳಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಪಟ್ಟಣದ ಕಕ್ಕೆಹೊಳೆ ಬಳಿಯಲ್ಲಿ ಇಂದಿರಾಗಾAಧಿ ಅಭಿಮಾನಿಗಳ ಸಂಘದ ವತಿಯಿಂದ ನಿರ್ಮಿಸಿದ್ದ ಬಸ್ ನಿಲ್ದಾಣವನ್ನು ಕೆಡವಿ ನೂತನ ಬಸ್ ನಿಲ್ದಾಣ ನಿರ್ಮಿಸುತ್ತಿದ್ದು, ಇದಕ್ಕೆ ಮೂಲ ನಿರ್ಮಾಣ ಇಂದಿರಾಗಾAಧಿ ಅಭಿಮಾನಿಗಳ ಸಂಘ ಎಂದು ಫಲಕ ಅಳವಡಿಸುವಂತೆ ಮನವಿ ಮಾಡಿದ್ದರೂ, ಬಿಜೆಪಿ ಸದಸ್ಯರು ಆಕ್ಷೇಪಿಸುತ್ತಿದ್ದಾರೆ. ಇದು ಖಂಡನೀಯ ಎಂದರು.
ಬಸ್ ನಿಲ್ದಾಣ ನಿರ್ಮಾಣಕ್ಕೆ ಶಾಸಕರು ತಾ. ೫.೬.೨೦೨೧ರಂದು ಭೂಮಿಪೂಜೆ ನೆರವೇರಿಸಿದ್ದಾರೆ. ಗುತ್ತಿಗೆದಾರರು ಉಚಿತವಾಗಿ ನಿರ್ಮಿಸುತ್ತಿರುವುದು ಸರಿಯಷ್ಟೇ. ಆದರೆ ನಮಗೆ ಬಂದ ಮಾಹಿತಿ ಪ್ರಕಾರ ನಿಲ್ದಾಣದ ಮೇಲ್ಭಾಗದಲ್ಲಿ ಎರಡು ಮಳಿಗೆಯನ್ನೂ ನಿರ್ಮಿಸಿ ಮುಂಗಡ ಠೇವಣಿ ಇಲ್ಲದೇ ಇವರುಗಳಿಗೆ ನೀಡುವ ಹುನ್ನಾರ ನಡೆಯುತ್ತಿದೆ ಎಂದು ಆರೋಪಿಸಿದ ನಾಗರಾಜ್, ಹಳೆ ನಿಲ್ದಾಣದ ಕಲ್ಲುಗಳನ್ನು ಪೊಲೀಸ್ ಠಾಣೆ ಮುಂಭಾಗದ ಕಾಮಗಾರಿಗೆ ಬಳಸಿಕೊಳ್ಳಲಾಗಿದೆ. ಮರಗಳು ನಮ್ಮ ಬಳಿಯಿದ್ದು, ಕೇಳಿದರೆ ವಾಪಸ್ ಕೊಡಲು ಸಿದ್ಧರಿದ್ದೇವೆ ಎಂದರು.
ಬಸ್ ನಿಲ್ದಾಣಕ್ಕೆ ಶಾಸಕ ಅಪ್ಪಚ್ಚುರಂಜನ್ ಅವರ ಹೆಸರಿಟ್ಟರೆ ನಮ್ಮದೇನೂ ಅಭ್ಯಂತರವಿಲ್ಲ. ಆದರೆ ಮೂಲ ನಿರ್ಮಾಣ ಇಂದಿರಾ ಗಾಂಧಿ ಅಭಿಮಾನಿಗಳ ಸಂಘ ಎಂದು ಸಣ್ಣದಾಗಿಯಾದರೂ ಹಾಕಬೇಕು. ಮೂಲ ನಿರ್ಮಾಣಗಾರರನ್ನು ಕಡೆಗಣಿಸಬಾರದು ಎಂದು ಒತ್ತಾಯಿಸಿದರು.
ಪೊಲೀಸ್ ಇಲಾಖೆ ಕೊರೊನಾ ಮಾರ್ಗಸೂಚಿ ಹೆಸರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ದೌರ್ಜನ್ಯ ನಡೆಸುತ್ತಿದ್ದು, ಇದರ ವಿರುದ್ಧ ಪ್ರತಿಭಟನೆ ನಡೆಸಲಾಗುವುದು. ಪಟ್ಟಣ ಪಂಚಾಯಿತಿಯಲ್ಲಿ ಎಸ್ಸಿ ಎಸ್ಟಿ ಮೀಸಲು ಅನುದಾನ ಸಮರ್ಪಕ ಬಳಕೆಯಾಗುತ್ತಿಲ್ಲ.
ಹೈಟೆಕ್ ಮಾರುಕಟ್ಟೆ ಅವ್ಯವಸ್ಥೆಯಿಂದ ಕೂಡಿದೆ. ಮೂಲಭೂತ ಸೌಕರ್ಯಗಳೂ ಸಮರ್ಪಕವಾಗಿಲ್ಲ. ಇವೆಲ್ಲವುಗಳ ಬಗ್ಗೆ ತಾ.೧೨.೧೦.೨೦೨೧ರಂದು ಕಾಂಗ್ರೆಸ್ನಿAದ ಪಂಚಾಯಿತಿಗೆ ಮುತ್ತಿಗೆ ಹಾಕಲಾಗುವುದು ಎಂದರು.
ಗೋಷ್ಠಿಯಲ್ಲಿ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಹೆಚ್. ಮಂಜುನಾಥ್, ಕಾಂಗ್ರೆಸ್ ಸೇವಾದಳ ಅಧ್ಯಕ್ಷ ಬಿ. ಬಸವರಾಜು, ಎಸ್ಸಿ ಎಸ್ಟಿ ಘಟಕದ ಕಾರ್ಯದರ್ಶಿ ರಾಜಪ್ಪ, ಕಚೇರಿ ಕಾರ್ಯದರ್ಶಿ ಹೆಚ್.ಜಿ. ರಘು, ನಗರ ಪ್ರಧಾನ ಕಾರ್ಯದರ್ಶಿ ಮಹಮ್ಮದ್ ಬೇಟು ಉಪಸ್ಥಿತರಿದ್ದರು.