ಶಾಸಕ ಅಪ್ಪಚ್ಚು ರಂಜನ್ ಮಡಿಕೇರಿ, ಸೆ. ೨೮: ಐತಿಹಾಸಿಕ ನಾಡಹಬ್ಬ ಮಡಿಕೇರಿ ದಸರಾ ಉತ್ಸವಕ್ಕೆ ಸರಕಾರದಿಂದ ರೂ.೧ ಕೋಟಿ ಅನುದಾನ ಬಿಡುಗಡೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಸಿರು ನಿಶಾನೆ ತೋರಿದ್ದಾರೆ. ಇದರಲ್ಲಿ ೨೫ ಲಕ್ಷವನ್ನು ದಸರಾ ಉತ್ಸವಕ್ಕೆ, ಉಳಿದ ೭೫ ಲಕ್ಷವನ್ನು ಮೂಲಭೂತ ಸೌಕರ್ಯಕ್ಕೆ ವಿನಿಯೋಗಿಸುವಂತೆ ಅವರು ಸಲಹೆ ನೀಡಿದ್ದಾರೆ ಎಂದು ಶಾಸಕ ಅಪ್ಪಚ್ಚು ರಂಜನ್ ತಿಳಿಸಿದ್ದಾರೆ.

ಮಡಿಕೇರಿ ದಸರಾ ಉತ್ಸವಕ್ಕೆ ೧ ಕೋಟಿ ಅನುದಾನವನ್ನು ಮಂಜೂರು ಮಾಡುವಂತೆ ತಾನು ಸಲ್ಲಿಸಿದ್ದ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿಗಳು, ಈ ಸಂಬAಧ ಅನುದಾನ ಬಿಡುಗಡೆಗಾಗಿ ಆರ್ಥಿಕ ಇಲಾಖೆಗೆ ನಿರ್ದೇಶನ ನೀಡಿದ್ದು, ಸದ್ಯದಲ್ಲೇ ಹಣ ಬಿಡುಗಡೆಯಾಗುವ ನಿರೀಕ್ಷೆಯಿದೆ ಎಂದು ರಂಜನ್ ‘ಶಕ್ತಿ’ಗೆ ತಿಳಿಸಿದ್ದಾರೆ.