ಚೆಟ್ಟಳ್ಳಿ, ಸೆ. ೨೮: ಇತ್ತೀಚೆಗೆ ನಿಧನರಾದ ಚೆಂಬು ಗ್ರಾಮ ಪಂಚಾಯಿತಿ ಸದಸ್ಯೆ ಕಮಲ ಅವರ ನಿವಾಸಕ್ಕೆ ಕೆಪಿಸಿಸಿ ಕಾನೂನು ಘಟಕದ ರಾಜ್ಯಾಧ್ಯಕ್ಷ ಎ.ಎಸ್ ಪೊನ್ನಣ್ಣ ಭೇಟಿ ನೀಡಿ ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದರು.

ಈ ಸಂದರ್ಭ ಮಾತನಾಡಿದ ಎ.ಎಸ್. ಪೊನ್ನಣ್ಣ ಮೃತಪಟ್ಟ ಕಮಲ ಅವರ ಮಗಳ ವಿದ್ಯಾಭ್ಯಾಸದ ಸಂಪೂರ್ಣ ಜವಾಬ್ದಾರಿಯನ್ನು ತಾವು ಹಾಗೂ ಕಾಂಗ್ರೆಸ್ ಪಕ್ಷ ವಹಿಸಿಕೊಳ್ಳುವುದಾಗಿ ಹೇಳಿದರು.

ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಇಸ್ಮಾಯಿಲ್ ಮಾತನಾಡಿ, ಮೃತೆ ಕಮಲಾ ಅವರ ಸದ್ಗತಿ ಕಾರ್ಯದ ಸಂಪೂರ್ಣ ವೆಚ್ಚವನ್ನು ತಾವೇ ಭರಿಸುವುದಾಗಿ ಹೇಳಿದರು.

ಪೊನ್ನಣ್ಣ ಅವರು ದಬ್ಬಡ್ಕ ಗ್ರಾಮಸ್ಥರ ಬೇಡಿಕೆಯಂತೆ ಮೊಬೈಲ್ ನೆಟ್‌ವರ್ಕ್ ಸಮಸ್ಯೆ ಯನ್ನು ಪರಿಹರಿಸುವ ನಿಟ್ಟಿನಲ್ಲಿ, ವೈಯಕ್ತಿಕ ಹಾಗೂ ಪಕ್ಷದ ಕೊಡುಗೆ ಯೊಂದಿಗೆ ಓಎಫ್‌ಸಿ ಕೇಬಲ್ ಅಳವಡಿಸುವ ಕಾರ್ಯಕ್ಕೆ ಚಾಲನೆ ನೀಡಿದರು. ಚೆಂಬು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕುಸುಮಾ ಯೋಗೀಶ್ವರ್, ಉಪಾಧ್ಯಕ್ಷೆ ಶಶಿಕಲಾ ಕಟ್ಟೆಪಾರೆ, ಗ್ರಾಮ ಪಂಚಾಯಿತಿ ಸದಸ್ಯ ಗಿರೀಶ್ ಹೊಸೂರು, ವಲಯ ಕಾಂಗ್ರೆಸ್ ಅಧ್ಯಕ್ಷ ರವಿರಾಜ್ ಹೊಸೂರು, ನಾಪೋಕ್ಲು ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ರಾಜೇಶ್ವರಿ, ವಲಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಭಾರತಿ, ಸಾಮಾಜಿಕ ಜಾಲತಾಣದ ಸೂರಜ್ ಹೊಸೂರು, ಹಿರಿಯ ಮುಖಂಡ ರಾದ ಸೋಮಣ್ಣ ಬಾಲಂಬಿ, ಚೆನ್ನಪ್ಪ ನಡುಬೆಟ್ಟು, ಚೆನಿಯಪ್ಪ ಕುದುರೆಪಾಯ, ಪುರುಷೋತ್ತಮ ಕಟ್ಟೆಪಾರೆ, ರಘುನಾಥ್ ಬಾಲಂಬಿ, ಸುನಿಲ್ ಕಟ್ಟೆಪಾರೆ ಹಾಗೂ ಇತರರು ಉಪಸ್ಥಿತರಿದ್ದರು.