ಮಡಿಕೇರಿ, ಸೆ. ೨೯: ಕೊಡಗು ಜಿಲ್ಲೆ ಸಹಕಾರ ಭಾರತೀಯ ನೂತನ ಜಿಲ್ಲಾ ಕಾರ್ಯಕಾರಿಣಿ ಮಂಡಳಿ ಹಾಗೂ ವಿವಿಧ ತಾಲೂಕು ಮಂಡಳಿಗಳ ಪದಗ್ರಹಣ ಕಾರ್ಯಕ್ರಮ ಅ. ೧ರಂದು ಬೆಳಿಗ್ಗೆ ೧೧ ಗಂಟೆಗೆ ನಗರದ ಜಿಲ್ಲಾ ಸಹಕಾರ ಯೂನಿಯನ್ನ ಸಭಾಂಗಣದಲ್ಲಿ ಜರುಗಲಿದೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಸಹಕಾರ ಭಾರತಿ ರಾಜ್ಯ ಅಧ್ಯಕ್ಷ ಸತೀಶ್ ಚಂದ್ರ ನೆರವೇರಿಸಲಿದ್ದಾರೆ. ಜಿಲ್ಲಾ ಸಹಕಾರ ಯೂನಿಯನ್ ಹಾಗೂ ರಾಜ್ಯ ಸಹಕಾರ ಮಹಾಮಂಡಳಿ ಮಾಜಿ ನಿರ್ದೇಶಕ ಎ.ಕೆ. ಮನು ಮುತ್ತಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ.
ವಿಶ್ವ ಹಿಂದೂ ಪರಿಷತ್ ಕರ್ನಾಟಕ ರಾಜ್ಯ ದಕ್ಷಿಣ ಪ್ರಾಂತ್ ಸಹ ಸೇವಾ ಪ್ರಮುಖ್ ನಾ. ಸೀತಾರಾಮ್, ಸಹಕಾರ ಭಾರತಿ ಕೊಡಗು - ಮೈಸೂರು -ಮಂಡ್ಯ ಪ್ರಭಾರಿ ನಾರಾಯಣ ರಾವ್, ಸಹಕಾರ ಭಾರತಿ ರಾಜ್ಯ ಸಂಘಟನಾ ಕಾರ್ಯದರ್ಶಿ ಮಂಜುನಾಥ್, ಕೆ.ಡಿ.ಸಿ.ಸಿ. ಬ್ಯಾಂಕ್ ಮಾಜಿ ಅಧ್ಯಕ್ಷ ಹಾಗೂ ಹಾಲಿ ನಿರ್ದೇಶಕ ಬಿ.ಡಿ. ಮಂಜುನಾಥ್, ಸಹಕಾರ ಭಾರತಿ ರಾಜ್ಯ ಮಹಿಳಾ ಪ್ರಮುಖ್ ಸುಮನ ಶರಣ್, ಸಹಕಾರ ಭಾರತಿ ಜಿಲ್ಲಾ ಸಂಚಾಲಕ ಹಾಗೂ ಕೊಡಗು- ಮೈಸೂರು- ಮಂಡ್ಯ ಸಹ ಪ್ರಭಾರಿ ಎನ್.ಎ. ರವಿ ಬಸಪ್ಪ ಇವರುಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.