ಸಿದ್ದಾಪುರ, ಸೆ. ೨೯: ರಾಷ್ಟಿçÃಯ ಹೆದ್ದಾರಿ ಯೋಜನೆಯಡಿಯಲ್ಲಿ ರಸ್ತೆ ಅಗಲೀಕರಣದ ಕಾಮಗಾರಿಗೆ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ನೆಲ್ಲಿಹುದಿಕೇರಿ ಪಟ್ಟಣದಲ್ಲಿ ಭೂಮಿಪೂಜೆ ನೆರವೇರಿಸಿ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, ಸೋಮವಾರಪೇಟೆ ತಾಲೂಕಿನಲ್ಲಿ ರೂ. ೧೬ ಕೊಟಿ ವೆಚ್ಚದಲ್ಲಿ ಗ್ರಾಮೀಣ ಭಾಗದಲ್ಲಿ ರಾಷ್ಟಿçÃಯ ಹೆದ್ದಾರಿ ಯೋಜನೆಯಡಿಯಲ್ಲಿ ರಸ್ತೆಗಳನ್ನು ಅಗಲೀಕರಣಗೊಳಿಸಲಾಗುತ್ತಿದೆ ಎಂದರು. ಈ ಹಿನ್ನೆಲೆ ನೆಲ್ಲಿಹುದಿಕೇರಿ ಗ್ರಾಮದ ಪಟ್ಟಣದಲ್ಲಿ ರಸ್ತೆ ಅಗಲೀಕರಣದ ಕಾಮಗಾರಿಗೆ ರೂ. ೨ ಕೋಟಿ ಅನುದಾನ ಬಿಡುಗಡೆಯಾಗಿದ್ದು, ೯ ಮೀಟರ್ ಅಗಲದಲ್ಲಿ ರಸ್ತೆಯನ್ನು ಅಗಲೀಕರಣಗೊಳಿಸಲಾಗುವುದೆಂದರು. ಕಾಮಗಾರಿಯನ್ನು ಗುತ್ತಿಗೆ ಪಡೆದುಕೊಂಡ ಗುತ್ತಿಗೆದಾರರು ಕಳಪೆ ಕಾಮಗಾರಿ ಮಾಡದೇ ರಸ್ತೆಯನ್ನು ಉತ್ತಮ ಗುಣಮಟ್ಟದಲ್ಲಿ ಮಾಡಬೇಕೆಂದು ತಿಳಿಸಿದರು. ಕೊಡಗು ಜಿಲ್ಲೆಯ ಗ್ರಾಮೀಣ ಭಾಗದ ರಸ್ತೆಗಳಿಗೆ ಹಾಗೂ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಅನುದಾನದಲ್ಲಿ ರಸ್ತೆ ಅಭಿವೃದ್ಧಿಗೆ ಸರ್ಕಾರದಿಂದ ಮತ್ತಷ್ಟು ಅನುದಾನ ಬರಲಿದೆ ಎಂದು ಮಾಹಿತಿ ನೀಡಿದರು. ಈ ಸಂದರ್ಭ ನೆಲ್ಲಿಹುದಿಕೇರಿ ಗ್ರಾ.ಪಂ. ಅಧ್ಯಕ್ಷ ಸಾಬೂ ವರ್ಗೀಸ್, ಉಪಾಧ್ಯಕ್ಷೆ ಧಮಯಂತಿ, ಅಭ್ಯತ್ಮಂಗಲ ಸೇವಾ ಸಹಕಾರ ಸಂಘದ ಅಧ್ಯಕ್ಷ ಪಾಲಚಂಡ ಅಚ್ಚಯ್ಯ, ಉಪಾಧ್ಯಕ್ಷ ವಸಂತಕುಮಾರ್ ಹೊಸಮನೆ ಹಾಗೂ ಗ್ರಾ.ಪಂ. ಸದಸ್ಯರುಗಳು, ನೆಲ್ಲಿಹುದಿಕೇರಿ ಶಕ್ತಿ ಕೇಂದ್ರದ ಪ್ರಮುಖರಾದ ಬೆಳ್ಯಪ್ಪ, ಪದ್ಮನಾಭ, ಹಾಗೂ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ವಿ.ಕೆ. ಲೋಕೇಶ್, ಬಿಜೆಪಿ ಪ್ರಮುಖರಾದ ಟಿ.ಸಿ. ಅಶೋಕ್, ಸುರೇಶ್ ನೆಲ್ಲಿಕಲ್ ಇನ್ನಿತರರು ಹಾಜರಿದ್ದರು.