ಸಿದ್ದಾಪುರ, ಸೆ. ೨೯: ಆತ್ಮಹತ್ಯೆಗೆ ಯತ್ನಿಸಿದ ವೃದ್ಧೆ ಮಹಿಳೆಯೊಬ್ಬರನ್ನು ಯುವಕರು ಸೇರಿ ರಕ್ಷಣೆ ಮಾಡಿದ ಘಟನೆ ನೆಲ್ಯಹುದಿಕೇರಿಯಲ್ಲಿ ಮಂಗಳವಾರ ಸಂಜೆ ನಡೆದಿದೆ. ಅರೆಕಾಡುವಿನ ವೃದ್ಧೆ ಮಹಿಳೆಯೊಬ್ಬರು ತನ್ನ ಮಕ್ಕಳು ತನ್ನನ್ನು ನೋಡಿಕೊಳ್ಳುವುದಿಲ್ಲ ಎಂದು ಆರೋಪಿಸಿ ಸಿದ್ದಾಪುರದ ಕಾವೇರಿ ನದಿಯಲ್ಲಿ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ ಸಂದರ್ಭದಲ್ಲಿ ಯುವಕರು ಕಂಡು ವೃದ್ಧೆಯನ್ನು ರಕ್ಷಿಸಿ ಸಿದ್ದಾಪುರ ಪೊಲೀಸರಿಗೆ ಒಪ್ಪಿಸಿದ್ದಾರೆ. ನಂತರ ಪೊಲೀಸರು ಬುದ್ಧಿವಾದ ಹೇಳಿ ವೃದ್ಧೆಯನ್ನು ಮನೆಗೆ ಕಳುಹಿಸಿಕೊಟ್ಟಿರುತ್ತಾರೆ.