ಚೆಟ್ಟಳ್ಳಿ, ಸೆ. ೨೯: ಚೆಟ್ಟಳ್ಳಿಯ ಬಿಜೆಪಿ ಬೂತ್ ಅಧ್ಯಕ್ಷರ ಮನೆ ಮನೆಗೆ ಶಾಸಕ ಅಪ್ಪಚ್ಚು ರಂಜನ್ ಹಾಗೂ ಬಿಜೆಪಿ ಕಾರ್ಯಕರ್ತರು ಭೇಟಿ ನೀಡಿ ನಾಮಫಲಕಗಳನ್ನು ಅಳವಡಿಸಿದರು.

ಪ್ರಧಾನಿ ಮೋದಿಯವರ ಹುಟ್ಟುಹಬ್ಬದ ಅಂಗವಾಗಿ ೧೫ ದಿನಗಳವರೆಗೆ ಪಕ್ಷದ ಸೇವಾ ಸಂಘಟನೆಯನ್ನು ಹಮ್ಮಿಕೊಳ್ಳುವ ಮೂಲಕ ಎಲ್ಲಾ ಬೂತ್ ಮಟ್ಟದ ಅಧ್ಯಕ್ಷರ ಮನೆಮನೆಗೆ ಭೇಟಿ ನೀಡುವ ಮೂಲಕ ಅವರ ಮನೆಗಳಲ್ಲಿ ಬೂತ್ ಅಧ್ಯಕ್ಷರ ನಾಮಫಲಕಗಳನ್ನು ಅಳವಡಿಸುವ ಕಾರ್ಯ ಮಾಡಲಾಗುತ್ತಿದೆ ಎಂದು ರಂಜನ್ ತಿಳಿಸಿದರು.

ಈ ಸಂದರ್ಭ ಸೋಮವಾರ ಪೇಟೆ ತಾಲೂಕು ಬಿ.ಜೆ.ಪಿ. ಅಧ್ಯಕ್ಷ ಮನುಕುಮಾರ್ ರೈ, ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ಯುವ ಮೋರ್ಚಾದ ಅಧ್ಯಕ್ಷ ಚಂದ್ರಶೇಖರ್, ತಾಲೂಕು ಮಂಡಳ ಕಾರ್ಯದರ್ಶಿ ಗೌತಮ್, ಮೋಕ್ಷಿತ್, ಮೇರಿ ಅಂಬುದಾಸ್, ಚೆಟ್ಟಳ್ಳಿ ಶಕ್ತಿ ಕೇಂದ್ರದ ಅಧ್ಯಕ್ಷ ಹಾಗೂ ಗ್ರಾಮ ಪಂಚಾಯಿತಿ ಸದಸ್ಯ ಬಲ್ಲಾರಂಡ ಕಂಠಿ ಕಾರ್ಯಪ್ಪ, ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಬಲ್ಲಾರಂಡ ಮಣಿ ಉತ್ತಪ್ಪ, ಗ್ರಾಮ ಪಂಚಾಯಿತಿ ಸದಸ್ಯರು, ಬೂತ್ ಅಧ್ಯಕ್ಷರಾದ ಉದಯ ಪೇರಿನ, ಜಗತ್ ನೂಜಿಬೈಲು, ಪೊರಿಮಂಡ ಲೋಕೇಶ್ ದೇವಯ್ಯ, ಕಡ್ಯದ ಉದಯ, ಮಾಯಾಕೃಷ್ಣ, ಅನಿಲ್ ಕುಮಾರ್ ಹಾಗೂ ಇತರರು ಇದ್ದರು.