ಮಡಿಕೇರಿ, ಸೆ. ೨೯: ಕೊಡಗು ಬ್ರಾಹ್ಮಣ ವಿದ್ಯಾಭಿವೃದ್ಧಿ ನಿಧಿಯ ಶತಮಾನೋತ್ಸವದ ಲೋಗೋವನ್ನು ನಗರದ ವಿದ್ಯಾಭಿವೃದ್ಧಿ ನಿಧಿ ಕಚೇರಿಯಲ್ಲಿ ಲೋಕಾರ್ಪಣೆ ಗೊಳಿಸಲಾಯಿತು.

ಬ್ರಾಹ್ಮಣ ವಿದ್ಯಾಭಿವೃದ್ಧಿ ನಿಧಿಯ ಅಧ್ಯಕ್ಷ ಎ. ಗೋಪಾಲಕೃಷ್ಣ, ಶತಮಾನೋತ್ಸವ ಕಟ್ಟಡ ನಿರ್ಮಾಣ ಸಮಿತಿ ಅಧ್ಯಕ್ಷ ಕೇಶವಪ್ರಸಾದ್ ಮುಳಿಯ, ಕಾರ್ಯದರ್ಶಿ ಭರತೇಶ್ ಕಂಡಿಗೆ, ಶತಮಾನೋತ್ಸವ ಆಚರಣಾ ಸಮಿತಿ ಅಧ್ಯಕ್ಷ ಡಾ. ರಾಜಾರಾಮ್, ಕಾರ್ಯದರ್ಶಿ ಮಮತಾಶಾಸ್ತಿç, ನಿಧಿಯ ಕಾರ್ಯದರ್ಶಿ ಬಿ.ಕೆ. ಅರುಣ್ ಕುಮಾರ್, ಶತಮಾನೋತ್ಸವ ಸಮಿತಿ ನಿರ್ದೇಶಕರುಗಳಾದ ಸವಿತಾ ಭಟ್ ಸೇರಿದಂತೆ ವಿವಿಧ ಸಮಿತಿಗಳ ಪ್ರಮುಖರು ಹಾಜರಿದ್ದರು.

ನಿಧಿಯ ಶತಮಾನೋತ್ಸವ ಸಮಾರಂಭವನ್ನು ಡಿಸೆಂಬರ್ ೧೯ ರಂದು ಆಚರಿಸಲು ನಿರ್ಧರಿಸಲಾಗಿದ್ದು ವಿವಿಧ ಕಾರ್ಯಕ್ರಮಗಳು ಮತ್ತು ಪೂರ್ವಭಾವಿಯಾಗಿ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಈ ಕಾರ್ಯಕ್ರಮದ ಹಿನ್ನಲೆಯಲ್ಲಿ ೧೦೦ ವರ್ಷ ಪೂರೈಸಿದ ಸಂಕೇತದ ಲೋಗೋವನ್ನು ಅನಾವರಣ ಮಾಡಲಾಗಿದೆ ಎಂದು ಶತಮಾನೋತ್ಸವ ಸಮಿತಿ ಅಧ್ಯಕ್ಷ ಡಾ. ರಾಜಾರಾಮ್ ಮಾಹಿತಿ ನೀಡಿದರು. ಮಡಿಕೇರಿ, ವೀರಾಜಪೇಟೆ ಹಾಗೂ ಪೊನ್ನಂಪೇಟೆಯಿAದ ಸಮಿತಿಯ ಸದಸ್ಯರು ಹಾಜರಿದ್ದರು.