ಕೂಡಿಗೆ, ಸೆ. ೩೦: ಶಿರಂಗಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಣಜೂರು ಗ್ರಾಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಮಣಜೂರು ಸಾಂಸ್ಕೃತಿಕ ಭವನದಲ್ಲಿ ಜಾನಪದ ಉತ್ಸವ ನಡೆಯಿತು.

ಉದ್ಘಾಟನೆಯನ್ನು ಶಿರಂಗಾಲ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಭಾಗೀರತಿ ನೆರವೇರಿಸಿದರು. ಕನ್ನಡ ನಾಡಿನ ಸಂಸ್ಕೃತಿಯ ಅಧ್ಯಯನಕ್ಕೆ ಜಾನಪದ ಕಲೆಗಳ ಕೊಡುಗೆ ಅಪಾರವಾದದ್ದು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಿರಂಗಾಲ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಧರ್ಮಪ್ಪ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಶಿರಂಗಾಲ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಸಿ.ಎನ್. ಲೋಕೇಶ್, ಮಾಜಿ ಅಧ್ಯಕ್ಷ ಚಂದ್ರಶೇಖರ್ ಗ್ರಾಮ ಪಂಚಾಯಿತಿ ಸದಸ್ಯರಾದ ಬಸವರಾಜ್, ಕಾಂತರಾಜ್ ಮಾತನಾಡಿದರು.

ವೇದಿಕೆಯಲ್ಲಿ ಮಣಜೂರು ದೇವಾಲಯ ಸಮಿತಿಯ ಅಧ್ಯಕ್ಷ ಟಿ.ಎಂ. ಚಂದ್ರಪ್ಪ, ಕಾರ್ಯದರ್ಶಿ ಶಶಿ, ಶಿರಂಗಾಲ ದೇವಾಲಯ ಸಮಿತಿ ಅಧ್ಯಕ್ಷ ರುದ್ರಪ್ಪ, ಕಾರ್ಯದರ್ಶಿ ಮಹೇಶ್, ಕನ್ನಡ ಸಂಸ್ಕೃತಿ ಇಲಾಖೆಯ ಅಧಿಕಾರಿ ಮಣಜೂರು ಮಂಜುನಾಥ್, ಕಾಲೇಜು ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಕೃಷ್ಣ, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷೆ ಆಶಾ ಇದ್ದರು.

ಕಾರ್ಯಕ್ರಮದಲ್ಲಿ ರಂಗಗೀತೆ, ನಾಟಕ, ಹಾಡುಗಾರಿಕೆ, ಶಾಸ್ತಿçÃಯ ಸಂಗೀತ, ಕೊಳಲುವಾದನ, ಜಾನಪದ ಗೀತೆ, ಭಾವಗೀತೆ, ಜಾನಪದ ಕಲಾ ತಂಡಗಳ ಪ್ರದರ್ಶನ ನಡೆಯಿತು. ಮಹೇಶ್ ಪ್ರಾರ್ಥಿಸಿ, ವಿಶ್ವನಾಥ ಸ್ವಾಗತಿಸಿ, ಕುಮಾರ್ ನಿರೂಪಿಸಿದರು. ಮಣಜೂರು ಮಂಜುನಾಥ್ ವಂದಿಸಿದರು.