ಕೂಡಿಗೆ, ಸೆ. ೨೯: ಇಲ್ಲಿಗೆ ಸಮೀಪದ ಶಿರಂಗಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮ ಸಭೆಯು ಶಿರಂಗಾಲ ನಾಮದಾರಿ ಸಮುದಾಯದ ಭವನದ ಸಭಾಂಗಣದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಭಾಗೀರತಿ ಅವರ ಅಧ್ಯಕ್ಷತೆಯಲ್ಲಿ ಜರುಗಿತು.
ಮೊದಲಿಗೆ ಸಭೆಯಲ್ಲಿ ಹಾಜರಿದ್ದ ಗ್ರಾಮಸ್ಥರು ವರ್ಷಗಳಲ್ಲಿ ಎರಡೂ ಬಾರಿ ಗ್ರಾಮ ಸಭೆಗಳು ನಡೆಯುತ್ತವೆ. ಸಭೆಯಲ್ಲಿ ಅನೇಕ ಪ್ರಮುಖ ವಿಷಯಗಳು ಪ್ರಸ್ತಾವನೆ ಆಗುತ್ತವೆ. ಸಂಬAಧಿಸಿದ ತಾಲೂಕು ಮಟ್ಟದ ಅಧಿಕಾರಿಗಳು ಸಭೆಗೆ ಬರದೆ ಯಾವುದೇ ಪ್ರಯೋಜನ ಆಗುತ್ತಿಲ್ಲ ಎಂದು ಅಸಮಾಧಾನಗೊಂಡರು.
ಗ್ರಾಮಸ್ಥರ ಪರವಾಗಿ ಶ್ರೀನಿವಾಸ, ಚಂದ್ರಶೇಖರ, ಮಹೇಶ್ ಸೇರಿದಂತೆ ಇತರರು ಮುಂದಿನ ಗ್ರಾಮಸಭೆಗೆ ತಾಲೂಕು ಮಟ್ಟದ ಅಧಿಕಾರಿಗಳು ಬರುವಂತೆ ಒತ್ತಾಯ ಮಾಡಿದರು.
ನಂತರ ಸಭೆಯಲ್ಲಿ ಗ್ರಾಮಸ್ಥರು ಪೌತಿ ಖಾತೆ ಆಂದೋಲನ ಮಾಡುವ ಮೂಲಕ ಗ್ರಾಮದ ಅನೇಕ ರೈತರ ಆರ್‌ಟಿಸಿಗಳನ್ನು ಸರಿಪಡಿಸಲು ಸಹಕಾರ ನೀಡುವಂತೆ ತಿಳಿಸಿದರು.
ಈಗಾಗಲೇ ಮಂಜೂರಾಗಿರುವ ಸ್ಮಶಾನ ಜಾಗವನ್ನು ಗುರುತಿಸಿ ಸರ್ವೆ ಕಾರ್ಯವನ್ನು ನಡೆಸಿ ಗ್ರಾಮ ಪಂಚಾಯಿತಿ ಸುಪರ್ದಿಗೆ ತೆಗೆದುಕೊಳ್ಳುವಂತೆ ಚರ್ಚಿಸಲಾಯಿತು. ರಾಷ್ಟಿçÃಯ ಉದ್ಯೋಗ ಖಾತರಿ ಯೋಜನೆಗಳ ಕಾಮಗಾರಿಗಳ ಗುಣಗಳನ್ನು ಕಾಯ್ದುಕೊಂಡು ಹೋಗುವಲ್ಲಿ ಅಧಿಕಾರಿಗಳು ಹೆಚ್ಚು ಗಮನಹರಿಸ ಬೇಕು ಎಂದು ಸಭೆಯಲ್ಲಿ ಹಾಜರಿದ್ದ ಗ್ರಾಮಸ್ಥರು ತಿಳಿಸಿದರು.
ನಂತರ ಗ್ರಾಮ ಪಂಚಾಯಿತಿ ಸಭಾಂಗಣ ನಿರ್ಮಾಣಕ್ಕೆ ಕ್ರಿಯಾ ಯೋಜನೆ ಕೈಗೊಂಡು ನಿಯಮನು ಸಾರವಾಗಿ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಸಭೆಯಲ್ಲಿ ಗ್ರಾಮಸ್ಥರು ತಿಳಿಸಿದರು.
ಸಭೆಗೆ ಆಗಮಿಸಿದ ಕೃಷಿ, ತೋಟಗಾರಿಕೆ, ಕಂದಾಯ, ನೀರಾವರಿ, ವಿದ್ಯುತ್, ಆರೋಗ್ಯ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಶಿಕ್ಷಣ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇಲಾಖೆಗಳ ಸಮಗ್ರ ಮಾಹಿತಿಯನ್ನು ನೀಡಿದರು.
ಸಭೆಯಲ್ಲಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಧರ್ಮಪ್ಪ ಸೇರಿದಂತೆ ಸದಸ್ಯರು, ನೋಡಲ್ ಅಧಿಕಾರಿ ಶಿರಂಗಾಲ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಸೋಮಯ್ಯ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹರೀಶ್ ಸೇರಿದಂತೆ ಗ್ರಾಮಸ್ಥರು ಭಾಗವಹಿಸಿದ್ದರು.