ಮಡಿಕೇರಿ, ಸೆ.೨೯: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಘಟಕ, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಜಿಲ್ಲಾ ಆಸ್ಪತ್ರೆಯ ರಕ್ತನಿಧಿ ಕೇಂದ್ರ, ಮಡಿಕೇರಿ ರೋಟರಿ ಸಂಸ್ಥೆ ಇವರ ಸಂಯುಕ್ತ ಆಶ್ರಯದಲ್ಲಿ ಅಕ್ಟೋಬರ್ ೧ ರಂದು ಬೆಳಿಗ್ಗೆ ೧೦.೩೦ ಗಂಟೆಗೆ ನಗರದ ರೋಟರಿ ಹಾಲ್‌ನಲ್ಲಿ ಸ್ವಯಂ ಪ್ರೇರಿತ ರಕ್ತದಾನ ದಿನಾಚರಣೆ-೨೦೨೧ ನಡೆಯಲಿದೆ.

ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಶಾಸಕರಾದ ಎಂ.ಪಿ.ಅಪ್ಪಚ್ಚುರAಜನ್, ಕೆ.ಜಿ.ಬೋಪಯ್ಯ, ಎಂ.ಪಿ.ಸುನಿಲ್ ಸುಬ್ರಮಣಿ, ವೀಣಾ ಅಚ್ಚಯ್ಯ, ಕರ್ನಾಟಕ ರಾಜ್ಯ ಪಶ್ಚಿಮ ಘಟ್ಟಗಳ ಸಂರಕ್ಷಣಾ ಕಾರ್ಯಪಡೆ ಸಮಿತಿಯ ಅಧ್ಯಕ್ಷ ಎಸ್.ರವಿಕುಶಾಲಪ್ಪ, ಜಿಲ್ಲಾಧಿಕಾರಿ ಚಾರುಲತಾ ಸೋಮಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರಾ, ಜಿ.ಪಂ.ಸಿಇಒ ಭನ್ವರ್ ಸಿಂಗ್ ಮೀನಾ, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಬೋಧಕ ಆಸ್ಪತ್ರೆಯ ಡೀನ್ ಹಾಗೂ ನಿರ್ದೇಶಕ ಡಾ.ಕೆ.ಬಿ.ಕಾರ್ಯಪ್ಪ, ಜಿಲ್ಲಾ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ಮಂಜುನಾಥ್, ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಶಸ್ತç ಚಿಕಿತ್ಸಕ ಡಾ.ವಿಶಾಲ್, ರೋಟರಿ ಸಂಸ್ಥೆಯ ಅಧ್ಯಕ್ಷ ಎನ್.ಡಿ.ಅಚ್ಚಯ್ಯ, ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ.ಎಸ್.ಗೋಪಿನಾಥ್, ಜಿಲ್ಲಾ ಆಸ್ಪತ್ರೆಯ ರಕ್ತನಿಧಿ ಕೇಂದ್ರದ ವೈದ್ಯಾಧಿಕಾರಿ ಡಾ.ಕರುಂಬಯ್ಯ, ಜಿಲ್ಲಾ ಏಡ್ಸ್ ನಿಯಂತ್ರಣ ಅಧಿಕಾರಿ ಡಾ.ಎನ್.ಆನಂದ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಆರ್.ವೆಂಕಟೇಶ್ ಇತರರು ಪಾಲ್ಗೊಳ್ಳಲಿದ್ದಾರೆ.