ವೀರಾಜಪೇಟೆ: ದೀನ್ ದಯಾಳ್ ಉಪಾಧ್ಯಾಯರ ಜನ್ಮದಿನದ ಅಂಗವಾಗಿ ಬಿಜೆಪಿ ಯುವ ಮೋರ್ಚಾ ವತಿಯಿಂದ ಸೇವಾ ಸಮರ್ಪಣ ಅಭಿಯಾನ ಆಚರಿಸಲಾಯಿತು. ಪಟ್ಟಣದ ಪುರಭವನದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಉಜ್ವಲ ಯೋಜನೆ ಅಡಿಯಲ್ಲಿ ಅಡುಗೆ ಅನಿಲ ಪಡೆದುಕೊಂಡ ಫಲಾನುವಿಗಳನ್ನು ಸನ್ಮಾನಿಸಲಾಯಿತು.
ಈ ಸಂದರ್ಭ ತಾಲೂಕು ಪ್ರಧಾನ ಕಾರ್ಯದರ್ಶಿ ವಾಟೇರಿರ ಬೋಪಣ್ಣ, ನಗರ ಅಧ್ಯಕ್ಷ ಟಿ.ಪಿ. ಕೃಷ್ಣ, ಯುವ ಮೋರ್ಚಾ ಜಿಲ್ಲಾ ಕಾರ್ಯದರ್ಶಿ ವಿಷ್ಣು, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಮೂಕೊಂಡ ಶಶಿ ಸುಬ್ರಮಣಿ, ಮಲ್ಲಂಡ ಮಧು ದೇವಯ್ಯ ತಾಲೂಕು ಕಾರ್ಯದರ್ಶಿ ಕವನ್, ಡಿಸಿಸಿ ಬ್ಯಾಂಕ್ ನಿರ್ದೇಶಕ ಪಟ್ರಪಂಡ ರಘು ನಾಣಯ್ಯ ಮತ್ತಿತರರು ಹಾಜರಿದ್ದರು.ಮಡಿಕೇರಿ: ದೀನ್ ದಯಾಳ್ ಉಪಾಧ್ಯಾಯರ ೧೦೫ ವರ್ಷದ ಜಯಂತಿಯನ್ನು ಮಡಿಕೇರಿ ನಗರಸಭೆ ವಾರ್ಡ್ ೧೮ರ ಬೂತ್ ಸಂಖ್ಯೆ ೨೨೧ ರಲ್ಲಿ ಆಚರಿಸಲಾಯಿತು. ಶಾಸಕ ಕೆ.ಜಿ. ಬೋಪಯ್ಯ, ಜಿಲ್ಲಾ ಅಧ್ಯಕ್ಷ ರಾಬಿನ್ ದೇವಯ್ಯ, ಉಪಾಧ್ಯಕ್ಷ ಬಿ.ಕೆ. ಅರುಣ್ಕುಮಾರ್, ನಗರ ಅಧ್ಯಕ್ಷ ಮನು ಮಂಜುನಾಥ್, ೧೮ನೇ ವಾರ್ಡ್ ನಗರಸಭಾ ಸದಸ್ಯ ಉಮೇಶ್ ಸುಬ್ರಮಣಿ ಹಾಗೂ ನಗರಸಭಾ ಸದಸ್ಯರಾದ ಅನಿತಾ ಪೂವಯ್ಯ, ಅಪ್ಪಣ್ಣ, ವಾರ್ಡ್ ಕಮಿಟಿ ಸದಸ್ಯರುಗಳಾದ ಸಂತೋಷ್ ಅನ್ವೇಕರ್, ಅನಿಲ್ ಹಾಗೂ ವಾರ್ಡ್ ಸದಸ್ಯರ ಉಪಸ್ಥಿತಿಯಲ್ಲಿ ಆಚರಿಸಲಾಯಿತು. ವಾರ್ಡ್ನ ಅಧ್ಯಕ್ಷ ಕುಳಿಯಕಂಡ ಸಂಪತ್ ಅವರ ಮನೆಯಲ್ಲಿ ನಾಮಫಲಕವನ್ನು ಅಳವಡಿಸಲಾಯಿತು.
೭೫ನೇ ವರ್ಷದ ಸ್ವಾತಂತ್ರೊö್ಯÃತ್ಸವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಸುದೀರ್ಘ ರಾಜಕೀಯ ಆಡಳಿತದ ಅಂಗವಾಗಿ ಸುತ್ತಮುತ್ತಲಿನ ಪರಿಸರವನ್ನು ರಕ್ಷಿಸಬೇಕು, ಹಿರಿಯರನ್ನು ಗೌರವಿಸುತ್ತಾ ಕಿರಿಯರನ್ನು ಪ್ರೀತಿಸುತ್ತಾ ದೇಶದ ಅಭಿವೃದ್ಧಿಗೆ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕೆಂದು ಹಂಪಿ ಸಿಂಡಿಕೇಟ್ ಸದಸ್ಯ ಪ್ರಶಾಂತ್ ಭೀಮಯ್ಯ ಅವರು ಪ್ರತಿಜ್ಞಾವಿಧಿ ಬೋಧಿಸಿದರು.ಪೆರಾಜೆ: ಜನಸಂಘದ ಸ್ಥಾಪಕ ಪಂಡಿತ್ ದೀನ ದಯಾಳ್ ಉಪಾಧ್ಯಾಯ ಅವರ ೧೦೫ನೇ ಜನ್ಮದಿನವನ್ನು ಭಾರತಿಯ ಜನತಾ ಪಾರ್ಟಿ ಗ್ರಾಮ ಸಮಿತಿ ಪೆರಾಜೆ ಹಾಗೂ ಕೊಡಗು ಜಿಲ್ಲಾ ಕೃಷಿ ಮೋರ್ಚಾದ ವತಿಯಿಂದ ಪಂಚಾಯಿತಿ ಸಭಾಂಗಣದಲ್ಲಿ ಆಚರಿಸಲಾಯಿತು.
ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಜಿ. ಬೋಪಯ್ಯ ಅವರು ಪಂಡಿತ್ ದೀನ ದಯಾಳ್ ಉಪಾಧ್ಯಾಯ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಹಾಗೂ ಪೆರಾಜೆ ಗ್ರಾಮ ಪಂಚಾಯಿತಿ ಸದಸ್ಯ ನಂಜಪ್ಪ ನಿಡ್ಯಮಲೆ ವಹಿಸಿದ್ದರು.
ಈ ಸಂದರ್ಭ ಪಶ್ಚಿಮಘಟ್ಟ ಅರಣ್ಯ ಸಂರಕ್ಷಣಾ ಸಮಿತಿ ಅಧ್ಯಕ್ಷ ಶಾಂತೆಯAಡ ರವಿ ಕುಶಾಲಪ್ಪ, ಬಿಜೆಪಿ ಕಾರ್ಯಕಾರಿಣಿ ಸಮಿತಿ ಸದಸ್ಯ ಮನು ಮುತ್ತಪ್ಪ, ಬಿಜೆಪಿ ಕೊಡಗು ಜಿಲ್ಲಾ ಪ್ರಧಾನ ಕಾರ್ಯದರ್ಶಿ ರವಿ ಕಾಳಪ್ಪ, ಮಡಿಕೇರಿ ತಾಲೂಕು ಬಿಜೆಪಿ ಅಧ್ಯಕ್ಷ ಕಾಂಗೀರ ಸತೀಶ್, ಪ್ರಧಾನ ಕಾರ್ಯದರ್ಶಿ ಪ್ರಸನ್ನ ಕೋಡಿರ ಮತ್ತು ಡೀನ್ ಬೋಪಣ್ಣ, ಮಡಿಕೇರಿ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಕವಿತ ಬೆಳ್ಯಪ್ಪ, ಕಾರ್ಯದರ್ಶಿ ಕುಮುದ, ಮಡಿಕೇರಿ ತಾಲೂಕು ಯುವ ಮೋರ್ಚಾ ಅಧ್ಯಕ್ಷ ಹೇಮಂತ್ ತೋರೆರ, ಕರ್ನಾಟಕ ಅರೆಭಾಷೆ ಅಕಾಡೆಮಿ ಸದಸ್ಯ ಧನಂಜಯ ಅಗೋಳಿಕಜೆ, ತಾಲೂಕು ಪದಾಧಿಕಾರಿಗಳು, ಜಿಲ್ಲಾ ಬಿಜೆಪಿ ಕೃಷಿ ಮೋರ್ಚಾ ಅಧ್ಯಕ್ಷ ನಾಗೇಶ್ ಕುಂದಲ್ಪಾಡಿ ಹಾಗೂ ಇತರರು ಇದ್ದರು.