ಕೂಡಿಗೆ, ಅ. ೧: ಕೂಡು ಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಾಮಾನ್ಯ ಸಭೆಯು ಪಂಚಾಯಿತಿ ಅಧ್ಯಕ್ಷೆ ಇಂದಿರಾ ರಮೇಶ್ ಅವರ ಅಧ್ಯಕ್ಷತೆಯಲ್ಲಿ ಗ್ರಾಪಂ ಸಭಾಂಗಣದಲ್ಲಿ ನಡೆಯಿತು.
ಪ್ರಮುಖವಾಗಿ ಕಸವಿಲೇವಾರಿಗೆ ಸಂಭವಿಸಿದ ಚರ್ಚೆಗಳು ನಡೆದು ಈಗಾಗಲೇ ಪ್ರಾರಂಭ ಮಾಡಿರುವ ಕಸ ವಿಲೇವಾರಿ ಘಟಕದ ದಾರಿಯನ್ನು ಸರಿಪಡಿಸಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಸವನ್ನು ಅಲ್ಲಿಗೆ ಹಾಕಿ ಒಣ ಕಸ ಮತ್ತು ಹಸಿ ಕಸವನ್ನು ವಿಂಗಡಣೆ ಮಾಡಿ ಗೊಬ್ಬರ ಮಾಡುವ ಬಗ್ಗೆ ಸುದೀಘ ಚರ್ಚೆಗಳು ನಡೆದು ಹಾಜರಿದ್ದ ಸದಸ್ಯರು ತಮ್ಮ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು.
ಗ್ರಾಮ ಪಂಚಾಯಿತಿಯನ್ನು ಪಟ್ಟಣ ಪಂಚಾಯ್ತಿಯಾಗಿ ಮೇಲ್ದರ್ಜೆಗೆ ಏರಿಸುವ ಸಂಬAಧ ವಿಶೇಷ ಗ್ರಾಮಸಭೆ ನಡೆಸಿ ಅಭಿಪ್ರಾಯ ಸಂಗ್ರಹಿಸಿ ಚರ್ಚಿಸಲು ದಿನಾಂಕ ನಿಗದಿಗೊಳಿಸಲು ಚರ್ಚೆ ನಡೆಯಿತು.
ಪಂಚಾಯಿತಿ ವ್ಯಾಪ್ತಿಯಲ್ಲಿ ಬೀಡಾಡಿ ದನಗಳು, ನಾಯಿಗಳ ಹಾವಳಿ ಹೆಚ್ಚಿದ್ದು ಇವುಗಳ ನಿಯಂತ್ರಣಕ್ಕೆ ಸೂಕ್ತ ಕ್ರಮಕೈಗೊಳ್ಳಲು ಸದಸ್ಯರು ಆಗ್ರಹಿಸಿದರು. ಬಸವನತ್ತೂರು ಗ್ರಾಮದಲ್ಲಿ ಉಂಟಾಗಿರುವ ಕುಡಿವ ನೀರಿನ ಪೂರೈಕೆ ಸಮಸ್ಯೆ ಇತ್ಯರ್ಥ ಪಡಿಸುವ ಸಂಬAಧ ಚರ್ಚೆ ನಡೆಯಿತು.
ಪಂಚಾಯಿತಿ ಅಮೃತ ಗ್ರಾಮ ಯೋಜನೆಗೆ ಆಯ್ಕೆಯಾಗಿದ್ದು ಈ ನಿಟ್ಟಿನಲ್ಲಿ ಪಂಚಾಯಿತಿ ಕೈಗೊಳ್ಳಬೇಕಾದ ಅಗತ್ಯ ಕ್ರಮಗಳು, ಅಭಿವೃದ್ಧಿ ಕಾಮಗಾರಿಗಳು, ಸರಕಾರದ ಯೋಜನೆಗಳ ಸಮರ್ಪಕ ಅನುಷ್ಠಾನ ಸೇರಿದಂತೆ ಸಾರ್ವಜನಿಕರ ಅರ್ಜಿ ಮಂಡನೆ, ಜಮಾ-ಖರ್ಚಿನ ವಿವರ ಮಂಡನೆ, ಬಗ್ಗೆ ಚರ್ಚೆ ನಡೆದವು.
ಗ್ರಾಪಂ ವ್ಯಾಪ್ತಿಯ ವಾರ್ಡ್ ಸಭೆ, ಜಮಾಬಂದಿ, ಗ್ರಾಮಸಭೆ ನಡೆಸುವ ಸಂಬAಧ ದಿನಾಂಕ ಗೊತ್ತುಪಡಿಸಲು ಸದಸ್ಯರ ಅಭಿಪ್ರಾಯ ಸಂಗ್ರಹಿಸ ಲಾಯಿತು. ಸಭೆಯ ಆರಂಭದಲ್ಲಿ ಅಧ್ಯಕ್ಷರು ಸದಸ್ಯರನ್ನು ವಿಶ್ವಾಸಕ್ಕೆ ತೆಗೆದು ಕೊಳ್ಳದೆ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಆರೋಪಿಸಿ ಉಪಾಧ್ಯಕ್ಷ ಭಾಸ್ಕರ್ ನಾಯಕ್ ಮತ್ತು ಸದಸ್ಯರು ಆಕ್ರೋಷ ವ್ಯಕ್ತಪಡಿಸಿದರು. ಸಭೆಗೆ ಬಂದ ಸಾರ್ವಜನಿಕರ ಅರ್ಜಿಗಳ ಬಗ್ಗೆ ಚರ್ಚೆಗಳು ನಡೆದವು. ಸಭೆಯಲ್ಲಿ ಗ್ರಾಪಂ ಉಪಾಧ್ಯಕ್ಷ ಭಾಸ್ಕರ್ ನಾಯಕ್, ಪಿಡಿಓ ಸಂತೋಷ್ ಸೇರಿದಂತೆ ಸದಸ್ಯರು ಇದ್ದರು.