ಸೋಮವಾರಪೇಟೆ, ಸೆ. ೩೦: ತಾಲೂಕಿನ ಗರ್ವಾಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಕೋಟೆಬೆಟ್ಟಕ್ಕೆ ಪ್ರವೇಶ ಶುಲ್ಕ ವಿಧಿಸುತ್ತಿರುವ ಕ್ರಮವನ್ನು ಸ್ಥಗಿತಗೊಳಿಸುವಂತೆ ಗರ್ವಾಲೆ ಗ್ರಾಮ ಪಂಚಾಯಿತಿ ಆಡಳಿತ ಮಂಡಳಿ ಸಾಮಾನ್ಯ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.

ಕೋಟೆಬೆಟ್ಟಕ್ಕೆ ಆಗಮಿಸುವ ಪ್ರವಾಸಿಗರು ಶ್ರೀ ಬೊಟ್ಲಪ್ಪ ಈಶ್ವರ ದೇವಾಲಯದ ಪಾವಿತ್ರö್ಯತೆಗೆ ಧಕ್ಕೆ ತರುತ್ತಿದ್ದು, ಸುತ್ತಮುತ್ತಲಿನ ಪರಿಸರವನ್ನು ಕಲುಷಿತಗೊಳಿಸುತ್ತಿದ್ದಾರೆ ಎಂದು ಆರೋಪಿಸಿ, ಇದಕ್ಕೆ ಕಡಿವಾಣ ಹಾಕುವ ದೃಷ್ಟಿಯಿಂದ ದೇವಾಲಯ ಜೀರ್ಣೋದ್ಧಾರ ಸಮಿತಿ ವತಿಯಿಂದ ಗೇಟ್ ಅಳವಡಿಸಿ, ಪ್ರವಾಸಿಗರಿಂದ ಸುಂಕ ವಸೂಲಾತಿ ಮಾಡುತ್ತಿದ್ದು, ಶುಚಿತ್ವ ಕಾಪಾಡುವಂತೆ ಸೂಚನೆ ನೀಡುತ್ತಿದ್ದಾರೆ.

ಗ್ರಾ.ಪಂ. ವ್ಯಾಪ್ತಿಯ ಪ್ರವಾಸಿ ತಾಣಗಳನ್ನು ಸ್ಥಳೀಯ ಗ್ರಾಮ ಪಂಚಾಯಿತಿ ವತಿಯಿಂದಲೇ ನಿರ್ವಹಣೆ ಮಾಡಬೇಕು. ಹಾಗಾದಾಗ ಗ್ರಾ.ಪಂ.ಗೆ ಹೆಚ್ಚಿನ ಆದಾಯ ಲಭಿಸುತ್ತದೆ ಎಂದು ಶಿರಂಗಳ್ಳಿ ಗ್ರಾಮಾಭಿವೃದ್ಧಿ ಸಮಿತಿಯ ಅಧ್ಯಕ್ಷರು ಸೇರಿದಂತೆ ಇತರರು ಸಂಬAಧಿಸಿದ ಇಲಾಖೆಗಳಿಗೆ ಮನವಿ ಮಾಡಿದ್ದ ಹಿನ್ನೆಲೆ, ಗೊಂದಲ ನಿರ್ಮಾಣವಾಗಿತ್ತು.

ಗರ್ವಾಲೆ ಗ್ರಾಮಾಭಿವೃದ್ಧಿ ಸಮಿತಿ ಹಾಗೂ ದೇವಾಲಯ ಜೀರ್ಣೋದ್ಧಾರ ಸಮಿತಿಗಳ ಪ್ರಮುಖರು ಸಭೆ ಸೇರಿ, ಸುಂಕ ವಸೂಲಾತಿಗೆ ಕ್ರಮ ಕೈಗೊಂಡಿರುವ ಹಿನ್ನೆಲೆ ಈಗಾಗಲೇ ೨ ಬಾರಿ ಸಭೆ ನಡೆದರೂ ಯಾವುದೇ ಪರಿಹಾರ ಕಾಣಲಿಲ್ಲ. ಶಾಸಕ ಅಪ್ಪಚ್ಚುರಂಜನ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲೂ ಸೌಹಾರ್ದಯುತ ಇತ್ಯರ್ಥ ಕಾಣಲಿಲ್ಲ.

ಇದೀಗ ಗರ್ವಾಲೆ ಗ್ರಾ.ಪಂ. ಆಡಳಿತ ಮಂಡಳಿ ಸಾಮಾನ್ಯ ಸಭೆಯಲ್ಲೂ ಈ ಬಗ್ಗೆ ಚರ್ಚೆ ನಡೆದಿದ್ದು, ಗೇಟ್ ಅಳವಡಿಸಿ ಸುಂಕ ವಸೂಲಾತಿ ಮಾಡಲು ಗ್ರಾ.ಪಂ.ನಿAದ ಯಾವುದೇ ಅನುಮತಿ ಪಡೆದಿಲ್ಲ. ಈ ಹಿನ್ನೆಲೆ ತಕ್ಷಣವೇ ಸುಂಕ ವಸೂಲಾತಿಯನ್ನು ಸ್ಥಗಿತಗೊಳಿಸಲು ಕ್ರಮ ಕೈಗೊಳ್ಳಬೇಕೆಂದು ಸಾಮಾನ್ಯ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.

ಸ್ಥಳೀಯ ಸರ್ಕಾರದ ನಿರ್ಣಯವನ್ನು ತಾಲೂಕು ಪಂಚಾಯಿತಿಗೆ ಕಳುಹಿಸಿ, ಮುಂದಿನ ಕ್ರಮ ಕೈಗೊಳ್ಳಲು ತೀರ್ಮಾನಿಸ ಲಾಗಿದೆ. ಇದರೊಂದಿಗೆ ಗ್ರಾ.ಪಂ. ಅಧ್ಯಕ್ಷರು, ಗ್ರಾಮಾಭಿದ್ಧಿ ಸಮಿತಿಗಳ ಪ್ರಮುಖರು, ಕಂದಾಯ, ಅರಣ್ಯ, ಪೊಲೀಸ್ ಇಲಾಖೆಗಳನ್ನು ಒಳಗೊಂಡAತೆ ಸಮಿತಿ ರಚಿಸಿ, ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ ಚರ್ಚಿಸಲು ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಗ್ರಾ.ಪಂ. ಅಧ್ಯಕ್ಷ ನಂಜುAಡ ಅವರು ತಿಳಿಸಿದ್ದಾರೆ.

ಸಭೆಯಲ್ಲಿ ಗ್ರಾ.ಪಂ. ಉಪಾಧ್ಯಕ್ಷೆ ನೇತ್ರಾಬಾಯಿ, ಅಭಿವೃದ್ಧಿ ಅಧಿಕಾರಿ ರಜಿನಿ, ಕಾರ್ಯದರ್ಶಿ ಮನ್ಸೂರ್ ಖಾನ್ ಸೇರಿದಂತೆ ಸದಸ್ಯರುಗಳು ಭಾಗಿಯಾಗಿದ್ದರು.

ನಾಳೆ ಪ್ರತಿಭಟನೆಗೆ ನಿರ್ಧಾರ: ಕೋಟೆಬೆಟ್ಟಕ್ಕೆ ಪ್ರವೇಶ ಕಲ್ಪಿಸುವ ರಸ್ತೆಯಲ್ಲಿ ಸುಂಕ ವಸೂಲಾತಿ ಮಾಡುತ್ತಿರುವುದನ್ನು ತಕ್ಷಣ ಸ್ಥಗಿತಗೊಳಿಸಬೇಕೆಂದು ಆಗ್ರಹಿಸಿ, ಸರ್ಕಾರದ ವತಿಯಿಂದಲೇ ನಿರ್ವಹಣೆ ಮಾಡಿ, ಪ್ರವಾಸಿ ತಾಣಗಳನ್ನು ಅಭಿವೃದ್ಧಿಗೊಳಿಸಬೇಕೆಂದು ಒತ್ತಾಯಿಸಿ ತಾ. ೨ರಂದು ಮಾದಾಪುರ-ಗರ್ವಾಲೆ-ಕೋಟೆಬೆಟ್ಟ ರಸ್ತೆಯ ಶಿರಂಗಳ್ಳಿಯಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಶಿರಂಗಳ್ಳಿ ಗ್ರಾಮಾಭಿವೃದ್ಧಿ ಸಮಿತಿ ಅಧ್ಯಕ್ಷ ಸಚಿನ್ ತಿಳಿಸಿದ್ದಾರೆ.