ಮಡಿಕೇರಿ, ಅ. ೧: ಕೊಡಗು ಪ್ರೆಸ್ ಕ್ಲಬ್ ಆಶ್ರಯದಲ್ಲಿ ತಾ. ೫ ರಂದು ಪತ್ರಿಕಾ ಭವನದಲ್ಲಿ ಕೊಡಗು ಜಿಲ್ಲೆಯಲ್ಲಿ ಪ್ರವಾಸೋದ್ಯಮ ವಿಷಯದ ಸಾಧಕ ಹಾಗೂ ಬಾಧಕ ಕುರಿತು ಆಹ್ವಾನಿತ ಗಣ್ಯರೊಂದಿಗೆ ಸಂವಾದ ಆಯೋಜಿಸಲಾಗಿದೆ.

ಅಂದು ಬೆಳಿಗ್ಗೆ ೧೦.೩೦ ಗಂಟೆಗೆ ಕೊಡಗು ಪ್ರೆಸ್‌ಕ್ಲಬ್ ಅಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮವನ್ನು ಕೊಡಗು ಜಿಲ್ಲಾ ಪತ್ರಕರ್ತರ ಸಂಘ ಅಧ್ಯಕ್ಷೆ ಬಿ.ಆರ್. ಸವಿತಾ ರೈ ಉದ್ಘಾಟಿಸಲಿದ್ದಾರೆಂದು ಕಾರ್ಯಕ್ರಮ ಸಂಚಾಲಕರಾಗಿರುವ ಕೊಡಗು ಪ್ರೆಸ್‌ಕ್ಲಬ್ ಸಂಘಟನಾ ಕಾರ್ಯದರ್ಶಿ ಎಂ.ಎನ್. ಚಂದ್ರಮೋಹನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಂವಾದದಲ್ಲಿ ಕೊಡಗು ಜಿಲ್ಲಾ ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷ ಎಂ.ಬಿ. ದೇವಯ್ಯ, ಪ್ರಧಾನ ಕಾರ್ಯದರ್ಶಿ ಅಂಬೆಕಲ್ ನವೀನ್ ಕುಶಾಲಪ್ಪ, ಕೊಡಗು ಜಿಲ್ಲಾ ಪ್ರವಾಸೋದ್ಯಮ ಅವಲಂಬಿತರ ಒಕ್ಕೂಟ ಅಧ್ಯಕ್ಷ ಕೆ.ಕೆ. ಮಂಜುನಾಥ್‌ಕುಮಾರ್, ಹೊಟೇಲ್, ಲಾಡ್ಜ್ ಹಾಗೂ ರೆಸ್ಟೋರೆಂಟ್ ಅಸೋಸಿಯೇಷನ್ ಅಧ್ಯಕ್ಷ ಬಿ.ಆರ್. ನಾಗೇಂದ್ರ ಪ್ರಸಾದ್, ಸಲಹೆಗಾರ ಜಿ. ಚಿದ್ವಿಲಾಸ್, ಹೋಂಸ್ಟೇ ಅಸೋಸಿಯೇಷನ್ ಉಪಾಧ್ಯಕ್ಷೆ ಮೋಂತಿ ಗಣೇಶ್, ಕೊಡಗು ಹಿತರಕ್ಷಣಾ ಸಮಿತಿ ಅಧ್ಯಕ್ಷ ಚೊಟ್ಟೆಕ್‌ಮಾಡ ರಾಜೀವ್ ಬೋಪಯ್ಯ, ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷ ಕಾಡ್ಯಮಾಡ ಮನು ಸೋಮಯ್ಯ, ಕೊಡವ ರೈಡರ್ಸ್ ಕ್ಲಬ್ ಸಂಚಾಲಕ ಅಜ್ಜಿಕುಟ್ಟಿರ ಪೃಥ್ವಿ ಸುಬ್ಬಯ್ಯ, ಟ್ರಾವಲ್ ಕೂರ್ಗ್ ಅಸೋಸಿಯೇಷನ್ ಅಧ್ಯಕ್ಷ ಚೈಯ್ಯಂಡ ಸತ್ಯ ಗಣಪತಿ, ಕೊಡಗು ಟೂರಿಸಂ ಅಸೋಸಿಯೇಷನ್ ಅಧ್ಯಕ್ಷ ಮಾದೇಟಿರ ತಿಮ್ಮಯ್ಯ, ಉದ್ಯಮಿ ಚೋಕಂಡ ಸೂರಜ್ ಸೋಮಯ್ಯ, ಕೊಡಗು ಸಂರಕ್ಷಣಾ ಒಕ್ಕೂಟ ಸಂಚಾಲಕ ಚಮ್ಮಟೀರ ಪ್ರವೀಣ್ ಉತ್ತಪ್ಪ ಪಾಲ್ಗೊಳ್ಳಲಿದ್ದಾರೆ. ಸಾಹಿತಿ, ಹಿರಿಯ ಪತ್ರಕರ್ತ ಭಾರದ್ವಾಜ್ ಕೆ. ಆನಂದತೀರ್ಥ ಸಮಾರೋಪ ಭಾಷಣ ಮಾಡಲಿದ್ದಾರೆ.