ಕೂಡಿಗೆ, ಸೆ. ೩೦ ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುದುಗೂರು ಗ್ರಾಮದಲ್ಲಿರುವ ಶ್ರೀ ಉಮಾಮಹೇಶ್ವರ ಕ್ಷೇತ್ರದ ಶ್ರೀ ಮಹಾದೇವಿ ಸನ್ನಿಧಿಯಲ್ಲಿ ಅ. ೬ರಿಂದ ೧೪ರ ವರೆಗೆ ನವರಾತ್ರಿ ಪೂಜಾ ಕಾರ್ಯಕ್ರಮವು ನಡೆಯಲಿದೆ.

ನವರಾತ್ರಿ ಹಬ್ಬದ ಅಂಗವಾಗಿ ದೇವಿಯ ಸನ್ನಿಧಿಯಲ್ಲಿ ಪ್ರತಿ ದಿನ ಸಂಜೆ ೭ ಗಂಟೆಯಿAದ ೮ ರವರೆಗೆ ಭಕ್ತ ವೃಂದ ಮೂಲಕ ಶ್ರೀ ಲಲಿತಾ ಸಹಸ್ರನಾಮ ಪಾರಾಯಣದೊಂದಿಗೆ ಕುಂಕುಮಾರ್ಚನೆ ಮಾಡಲಾಗುವುದು ಅಲ್ಲದೆ ೧೨ ರಂದು ಮಂಗಳವಾರ ದೇವಿಯ ಸನ್ನಿಧಿಯಲ್ಲಿ ಬೆಳಿಗ್ಗೆ ಗಣಪತಿ ಹೋಮ, ಶ್ರೀ ಮೃತ್ಯುಂಜಯ ಹೋಮ ನಂತರ ಶ್ರೀ ಚಂಡಿಕಾ ಹೋಮ ಸೇರಿದಂತೆ ವಿವಿಧ ಪೂಜಾ ಕಾರ್ಯಕ್ರಮಗಳು ನಡೆಯಲಿವೆ ಎಂದು ದೇವಾಲಯ ಸಮಿತಿಯ ಅಧ್ಯಕ್ಷ ಟಿ.ಎಂ. ಚಾಮಿ ತಿಳಿಸಿದ್ದಾರೆ.