ಸೋಮವಾರಪೇಟೆ, ಅ. ೧: ಬಿಳಿ ಫಲಕದ ಸ್ವಂತ ವಾಹನಗಳಲ್ಲಿ ಬಹಳಷ್ಟು ಮಂದಿ ಬಾಡಿಗೆ ಮಾಡುತ್ತಿರುವುದರಿಂದ, ಸರ್ಕಾರಕ್ಕೆ ತೆರಿಗೆ ಕಟ್ಟಿ ನಿಯತ್ತಾಗಿ ಬಾಡಿಗೆ ಮಾಡುತ್ತಿರುವ ಹಳದಿ ಬಣ್ಣದ ವಾಹನಗಳ ಚಾಲಕರಿಗೆ ಸಮಸ್ಯೆ ಯಾಗಿದೆ. ಕಾನೂನು ಬಾಹಿರವಾಗಿ ನಡೆಯುತ್ತಿರುವ ಇಂತಹ ಕ್ರಮಕ್ಕೆ ಕಡಿವಾಣ ಹಾಕಬೇಕು ಎಂದು ಆಗ್ರಹಿಸಿ ಕರ್ನಾಟಕ ಟ್ಯಾಕ್ಸಿ ಡ್ರೆöÊರ್ಸ್ ಆರ್ಗನೈಜೇಷನ್ ವತಿಯಿಂದ ಪೊಲೀಸ್ ಇಲಾಖೆಗೆ ಮನವಿ ಸಲ್ಲಿಸಲಾಯಿತು.
ಬಿಳಿ ಫಲಕದ ವಾಹನಗಳಲ್ಲಿ ಬಾಡಿಗೆ ಮಾಡುತ್ತಿರುವವರು ಸರ್ಕಾರಕ್ಕೆ ತೆರಿಗೆ ವಂಚಿಸುತ್ತಿದ್ದು, ಕಾನೂನು ಬಾಹಿರ ಟ್ಯಾಕ್ಸಿಗಳ ಮೇಲೆ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳಬೇಕೆಂದು ಸಂಘಟನೆಯ ಪದಾಧಿಕಾರಿಗಳು ಒತ್ತಾಯಿಸಿದರು. ವೈಟ್ ಬೋರ್ಡ್ ಟ್ಯಾಕ್ಸಿ ಚಾಲಕರು ಲಘು ವಾಹನಗಳ ಮೂಲಕ ಬಾಡಿಗೆ ಮಾಡುತ್ತಿರುವುದು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇದರಿಂದಾಗಿ ಸರ್ಕಾರಕ್ಕೆ ತೆರಿಗೆ ಪಾವತಿಸುವ ಹಳದಿ ಬೋರ್ಡ್ ಟ್ಯಾಕ್ಷಿಗಳು ಬಾಡಿಗೆ ಇಲ್ಲದೆ ನಷ್ಟ ಅನುಭವಿಸುತ್ತಿವೆ. ಇದರಿಂದಾಗಿ ಟ್ಯಾಕ್ಸಿ ಚಾಲನೆಯನ್ನೇ ನಂಬಿಕೊAಡಿರುವ ಹಲವಾರು ಕುಟುಂಬಗಳಿಗೆ ತೊಂದರೆಯಾಗಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆ, ಬ್ಯಾಂಕ್ಗಳಿಗೆ ವಾಹನಗಳ ಮಾಸಿಕ ಕಂತು ತುಂಬುವುದು, ತೆರಿಗೆ ಹಾಗೂ ವಿಮೆ ಕಟ್ಟಲು ಪರದಾಡುವಂತಾಗಿದೆ ಎಂದು ಸಂಘಟನೆಯ ಜಿಲ್ಲಾಧ್ಯಕ್ಷ ವಿನ್ಸೆಂಟ್ ಬಾಬು ಹೇಳಿದರು.
ಇದನ್ನು ಗಂಭೀರವಾಗಿ ಪರಿಗಣಿಸಿ, ಸರ್ಕಾರದ ಬೊಕ್ಕಸಕ್ಕೆ ಆಗುತ್ತಿರುವ ನಷ್ಟ ತಡೆಗಟ್ಟಲು ಹಾಗೂ ಹಳದಿ ಬೋರ್ಡ್ ವಾಹನ ಚಾಲಕರು ಹಾಗೂ ಮಾಲೀಕರ ಜೀವನ ಸರಿಪಡಿಸಲು ಕೂಡಲೇ ಇಲಾಖೆ ತಂಡಗಳನ್ನು ರಚಿಸಿ ವೈಟ್ ಬೋರ್ಡ್ ಟ್ಯಾಕ್ಸಿಗಳ ಮೇಲೆ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳಬೇಕೆಂದು ಆಗ್ರಹಿಸಿದರು.
ಈ ಸಂಬAಧಿತ ಮನವಿಯನ್ನು ಇನ್ಸ್ಪೆಕ್ಟರ್ ಬಿ.ಜಿ. ಮಹೇಶ್ ಅವರಿಗೆ ಸಲ್ಲಿಸಲಾಯಿತು. ಈ ಸಂದರ್ಭ ತಾಲೂಕು ಘಟಕದ ಅಧ್ಯಕ್ಷ ಬಿ.ವಿ. ರವಿ, ಕಾರ್ಯದರ್ಶಿ ಕೆ.ಆರ್. ಮಂಜುನಾಥ್, ಜಿಲ್ಲಾ ಗೌರವಾಧ್ಯಕ್ಷ ರಫೀಕ್, ಕುಶಾಲನಗರ ತಾಲೂಕು ಘಟಕದ ಅಧ್ಯಕ್ಷ ಕೆ.ಎಸ್. ಶಿವ, ಕೆ.ಎನ್. ದೀಪಕ್ ಮತ್ತಿತರರು ಇದ್ದರು.