ಮಡಿಕೇರಿ, ಸೆ. ೩೦: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ತಂಬಾಕು ನಿಯಂತ್ರಣ ಕೋಶ ವತಿಯಿಂದ ಜಿಲ್ಲಾ ತರಬೇತಿ ಕೇಂದ್ರದಲ್ಲಿ ತಂಬಾಕು ಉತ್ಪನ್ನಗಳ ಸೇವನೆಯಿಂದ ಉಂಟಾಗುವ ದುಷ್ಪರಿಣಾಮ ಮತ್ತು ಕೋಟ್ಪಾ ೨೦೦೩ ಕಾಯ್ದೆಯ ಬಗ್ಗೆ ಕೊಡಗು ಜಿಲ್ಲೆಯ ಆರೋಗ್ಯ ಇಲಾಖೆಯವರಿಗೆ ತರಬೇತಿ ಕಾರ್ಯಾಗಾರ ನಡೆಯಿತು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ವೆಂಕಟೇಶ್ ಮಡಿಕೇರಿ, ಸೆ. ೩೦: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ತಂಬಾಕು ನಿಯಂತ್ರಣ ಕೋಶ ವತಿಯಿಂದ ಜಿಲ್ಲಾ ತರಬೇತಿ ಕೇಂದ್ರದಲ್ಲಿ ತಂಬಾಕು ಉತ್ಪನ್ನಗಳ ಸೇವನೆಯಿಂದ ಉಂಟಾಗುವ ದುಷ್ಪರಿಣಾಮ ಮತ್ತು ಕೋಟ್ಪಾ ೨೦೦೩ ಕಾಯ್ದೆಯ ಬಗ್ಗೆ ಕೊಡಗು ಜಿಲ್ಲೆಯ ಆರೋಗ್ಯ ಇಲಾಖೆಯವರಿಗೆ ತರಬೇತಿ ಕಾರ್ಯಾಗಾರ ನಡೆಯಿತು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ವೆಂಕಟೇಶ್ ಸೇವನೆಯಿಂದಾಗುವ ದುಷ್ಪರಿಣಾಮ ಕುರಿತು ಉಪನ್ಯಾಸ ನೀಡಿದರು.

ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸಮಾಜ ಕಾರ್ಯಕರ್ತ ಆರ್. ಮಂಜುನಾಥ್ ಅವರು ಕೋಟ್ಪಾ ೨೦೦೩ ಬಗ್ಗೆ ಆರೋಗ್ಯ ಇಲಾಖೆಯವರಿಗೆ ತರಬೇತಿ ನೀಡಿದರು. ಎನ್‌ಸಿಡಿ ವಿಭಾಗದ ಆಪ್ತ ಸಮಾಲೋಚಕ ದಿನೇಶ್ ಕುಮಾರ್ ತಂಬಾಕು ವ್ಯಸನ ಮುಕ್ತ ಕೇಂದ್ರದ ಕುರಿತು ಮಾಹಿತಿ ನೀಡಿದರು. ಆರೋಗ್ಯ ಇಲಾಖೆಯ ಇತರೆ ಸಿಬ್ಬಂದಿಗಳು ಉಪಸ್ಥಿತರಿದ್ದರು. ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸಮಾಜ ಕಾರ್ಯಕರ್ತ ಆರ್. ಮಂಜುನಾಥ್ ಸ್ವಾಗತಿಸಿ, ನಿರೂಪಿಸಿದರು. ಗಣಕಯಂತ್ರ ತಜ್ಞರಾದ ವರ್ಷ ವಂದಿಸಿದರು.