ಮಡಿಕೇರಿ, ಸೆ. ೩೦ : ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ತಾ ೨ ರಂದು ಜಿಲ್ಲೆಗೆ ಭೇಟಿ ನೀಡಲಿದ್ದಾರೆ.
ಅಂದು ಮಧ್ಯಾಹ್ನ ೩ ಗಂಟೆಗೆ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ತಲಕಾವೇರಿಯಲ್ಲಿ ನಡೆಯುವ ತುಲಾ ಸಂಕ್ರಮಣ ಮಹೋತ್ಸವ ಆಚರಣೆ ಕುರಿತು ಪೂರ್ವಭಾವಿ ಸಭೆ ನಡೆಸಲಿದ್ದಾರೆ. ನಂತರ ಸಂಜೆ ೪ ಗಂಟೆಗೆ ಕೋವಿಡ್-೧೯ ನಿಯಂತ್ರಣ ಹಿನ್ನೆಲೆಯಲ್ಲಿ ಮಡಿಕೇರಿ ದಸರಾ ಆಚರಣೆಯಲ್ಲಿ ಕೈಗೊಳ್ಳಬೇಕಾದ ಅಗತ್ಯ ಕ್ರಮಗಳ ಕುರಿತು ಸಭೆ ನಡೆಸಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ಡಾ. ಬಿ. ಉದಯ ಕುಮಾರ್ ಶೆಟ್ಟಿ ತಿಳಿಸಿದ್ದಾರೆ.