ಕುಶಾಲನಗರ, ಅ.೧: ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಹಾಗೂ ಕುಶಾಲನಗರ ಗೌಡ ಸಮಾಜದ ಆಶ್ರಯದಲ್ಲಿ ತಾ. ೩ ರಿಂದ ಮೂರು ದಿನಗಳ ಅರೆಭಾಷೆ ಸಂಸ್ಕೃತಿ ಶಿಬಿರ ಆಯೋಜಿಸಲಾಗಿದೆ ಎಂದು ಕುಶಾಲನಗರ ಗೌಡ ಸಮಾಜದ ಅಧ್ಯಕ್ಷ ಕೂರನ ಪ್ರಕಾಶ್ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಕುಶಾಲನಗರ ಗೌಡ ಸಮಾಜದಲ್ಲಿ ಶಿಬಿರ ಏರ್ಪಡಿಸಲಾಗಿದ್ದು, ಬೆಳಿಗ್ಗೆ ೧೦ ಗಂಟೆಗೆ ನಡೆಯುವ ಕಾರ್ಯಕ್ರಮದಲ್ಲಿ ಕೂರನ ಪ್ರಕಾಶ್ ಶಿಬಿರಕ್ಕೆ ಚಾಲನೆ ನೀಡಲಿರುವುದಾಗಿ ಹೇಳಿದ್ದಾರೆ.
ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಲಕ್ಷ್ಮಿನಾರಾಯಣ ಕಜೆಗದ್ದೆ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ನ್ಯಾಯವಾದಿ ತೆಕ್ಕಡೆ ನೇಮಿರಾಜ್ ಮತ್ತು ಸಾಹಿತಿ ಭಾರದ್ವಾಜ್ ಕೆ. ಆನಂದ ತೀರ್ಥ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.
ತಾ. ೫ರಂದು ಶಿಬಿರದ ಸಮಾರೋಪ ಸಮಾರಂಭ ಆಯೋಜಿಸಲಾಗಿದ್ದು, ಲಕ್ಷಿö್ಮÃನಾರಾಯಣ ಕಜೆಗದ್ದೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ನಿವೃತ್ತ ಶಿಕ್ಷಕ ಪೆರುಬಾಯಿ ಚಿನ್ನಪ್ಪ, ಪದ್ಮಾವತಿ, ಗೌಡ ಮಹಿಳಾ ಒಕ್ಕೂಟದ ಮಾಜಿ ಅಧ್ಯಕ್ಷೆ ಕುದುಪಜೆ ಶಾಂತಿ ಭೋಜಪ್ಪ ಹಾಗೂ ಪತ್ರಕರ್ತ ಸುನಿಲ್ ಪೊನ್ನೇಟಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು. ಕುಲ್ಲಚೆಟ್ಟಿ ಕಾಶಿ ಪೂವಯ್ಯ ಮತ್ತು ಕಡ್ಯದ ಪಾರ್ವತಿ ಸಂಪನ್ಮೂಲ ವ್ಯಕ್ತಿಗಳಾಗಿ ಶಿಬಿರವನ್ನು ನಡೆಸಿಕೊಡಲಿದ್ದಾರೆ ಎಂದು ತಿಳಿಸಿದ್ದಾರೆ.