*ಗೋಣಿಕೊಪ್ಪ, ಅ. ೧: ತಿತಿಮತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವರ್ತುಲದ ಕಾರ್ಯಕರ್ತರು, ಸಹಾಯಕಿಯರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆೆಯ ಸಹಯೋಗದೊಂದಿಗೆ ಪೋಷಣ್ ಅಭಿಯಾನ ಕಾರ್ಯಕ್ರಮ ನಡೆಯಿತು.
ಗರ್ಭಿಣಿಯರಿಗೆ ಸೀಮಂತ, ಮಕ್ಕಳಿಗೆ ಅನ್ನ ಪ್ರಸನ್ನ, ಅಕ್ಷರಾಭ್ಯಾಸ, ನಿವೃತ್ತಿ ಹೊಂದಿದ ಕಾರ್ಯಕರ್ತೆ ಮತ್ತು ಸಹಾಯಕಿಯರಿಗೆ ಬೀಳ್ಕೊಡುಗೆ ಸಮಾರಂಭ ಮತ್ತು ಕೊರೊನಾ ವಾರಿಯರ್ಸ್ ಆಗಿ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ಲತಾ ಅವರಿಗೆ ಸನ್ಮಾನ ಸೇರಿದಂತೆ ವಿವಿಧ ಕಾರ್ಯಕ್ರಮಗಳು ತಿತಿಮತಿ ಸಮುದಾಯ ಭವನದಲ್ಲಿ ನಡೆದವು.
ತಿತಿಮತಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಆಶಾ, ಉಪಾಧ್ಯಕ್ಷ್ಷೆ ವಿಜಯ, ದೇವರಪುರ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶಾರದ, ಉಪಾಧ್ಯಕ್ಷ ಮಹೇಶ್, ತಿತಿಮತಿ ಗ್ರಾ.ಪಂ. ಸದಸ್ಯ ಅನೂಪ್ಕುಮಾರ್, ಪೊನ್ನಂಪೇಟೆ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕೆ.ಆರ್. ರಾಜೇಶ್, ತಿತಿಮತಿ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಮಮತಾ, ದೇವರಪುರ ಪಿ.ಡಿ.ಓ ಚಂದ್ರ ಹಾಗೂ ತಿತಿಮತಿ ವರ್ತುಲದ ಎಲ್ಲಾ ಕಾರ್ಯಕರ್ತರು, ಸಹಾಯಕಿಯರು, ಆರೋಗ್ಯ ಇಲಾಖೆ ಸಿಬ್ಬಂದಿಗಳು ಪಾಲ್ಗೊಂಡಿದ್ದರು.