ಮಡಿಕೇರಿ, ಅ.೧: ಸುರಕ್ಷಿತ ರಕ್ತದಾನವು ಮತ್ತೊಬ್ಬರ ಜೀವ ಉಳಿಸಲು ಸಹಕಾರಿ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅಭಿಪ್ರಾಯಪಟ್ಟಿದ್ದಾರೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಘಟಕ, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಜಿಲ್ಲಾ ಆಸ್ಪತ್ರೆಯ ರಕ್ತನಿಧಿ ಕೇಂದ್ರ, ಮಡಿಕೇರಿ ರೋಟರಿ ಸಂಸ್ಥೆ ಇವರ ಸಂಯುಕ್ತ ಆಶ್ರಯದಲ್ಲಿ ನಗರದ ರೋಟರಿ ಹಾಲ್‌ನಲ್ಲಿ ನಡೆದ ಸ್ವಯಂ ಪ್ರೇರಿತ ರಕ್ತದಾನ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ದೇಹದ ಅಂಗಾAಶಗಳು ಮತ್ತು ಅಂಗಾAಗಗಳಿಗೆ ಪೋಷಣೆಯನ್ನು ಒದಗಿಸುವುದರಿಂದ ರಕ್ತವು ಮಾನವ ಜೀವನದ ಅತ್ಯಗತ್ಯ ಅಂಶವಾಗಿದೆ. ಸುರಕ್ಷಿತ ರಕ್ತದಾನವು ಪ್ರತೀ ವರ್ಷ ಎಲ್ಲಾ ವಯಸ್ಸಿನ ಅನೇಕ ಜೀವಗಳನ್ನು ಉಳಿಸಲು ಸಹಾಯ ಮಾಡುತ್ತದೆ ಎಂದು ಅವರು ನುಡಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಆರ್.ವೆಂಕಟೇಶ್ ಮಾತನಾಡಿ ೧೮ ರಿಂದ ೬೦ ವರ್ಷದೊಳಗಿನ ವಯಸ್ಕರು ವರ್ಷಕ್ಕೊಮ್ಮೆ ರಕ್ತ ನೀಡಿದರೆ ದೈಹಿಕವಾಗಿ ಮತ್ತು ಮಾನಸಿಕವಾಗಿ ಸದೃಢರಾಗಿರಬಹುದು ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದರು. ರಕ್ತ ದಾನವು ಶ್ರೇಷ್ಠ ದಾನವಾಗಿದೆ. ರಕ್ತ ನೀಡುವುದರಿಂದ ಇತರರ ಜೀವ ಉಳಿಸಬಹುದು, ಜೊತೆಗೆ ರಕ್ತವು ದೇಹಕ್ಕೆ ಮತ್ತೊಮ್ಮೆ ಸೇರ್ಪಡೆ ಯಾಗಲಿದೆ ಎಂದರು.
ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ.ಎನ್.ಆನಂದ್ ಮಾತನಾಡಿ ವ್ಯಕ್ತಿಯ ಜೀವನದಲ್ಲಿ ರಕ್ತದ ಅವಶ್ಯಕತೆ ಹಾಗೂ ಮಹತ್ವವನ್ನು ಅರಿತುಕೊಳ್ಳಲು ರಾಷ್ಟಿçÃಯ ಸ್ವಯಂ ಪ್ರೇರಿತ ದಿನವನ್ನು ಭಾರತದಲ್ಲಿ ಪ್ರತಿ ವರ್ಷ ಅಕ್ಟೋಬರ್ ೧ ರಂದು ಆಚರಿಸಲಾಗುತ್ತಿದೆ.
ಸ್ವಯಂ ಪ್ರೇರಿತ ರಕ್ತದಾನ ಮಹತ್ವದ ಬಗ್ಗೆ ಜಾಗೃತಿ ಮೂಡಿಸಿ, ಸ್ವಯಂ ಪ್ರೇರಿತ ರಕ್ತದಾನ ಗುರಿಯನ್ನು ಸಾಧಿಸುವುದು. ಗಂಭೀರ ಮತ್ತು ತುರ್ತು ಅವಶ್ಯಕತೆಗೆ ದಾನ ಮಾಡಿದ ರಕ್ತವನ್ನು ರಕ್ತ ಬ್ಯಾಂಕ್‌ಗಳಲ್ಲಿ ಸಂಗ್ರಹಿಸುವುದು, ಯಾವುದೇ ತುರ್ತು ಮತ್ತು ಗಂಭೀರ ಅವಶ್ಯಕತೆಗಾಗಿ ರಕ್ತವನ್ನು ರಕ್ತ ಬ್ಯಾಂಕ್‌ಗಳಲ್ಲಿ ಸಂಗ್ರಹಿಸಲಾಗುತ್ತದೆ. ಆರೋಗ್ಯವಂತ ವ್ಯಕ್ತಿಯಾಗಿದ್ದರೂ ರಕ್ತದಾನ ಮಾಡಲು ಆಸಕ್ತಿ ಇಲ್ಲದ ಜನರನ್ನು ಪ್ರೇರೇಪಿ ಸುವುದು ಮತ್ತು ಪ್ರೋತ್ಸಾಹಿಸುವುದು ಅತ್ಯಗತ್ಯ ಎಂದರು. ೨೦೨೦-೨೧ ನೇ ಸಾಲಿನಲ್ಲಿ ೧೯೬೭ ಮಂದಿಯ ರಕ್ತ ಪರೀಕ್ಷೆ ಮಾಡಿ ಇರಿಸಿಕೊಳ್ಳಲಾಗಿದೆ ಎಂದರು.
ಮಡಿಕೇರಿ ರೋಟರಿ ಸಂಸ್ಥೆಯ ಅಧ್ಯಕ್ಷ ಅಚ್ಚಯ್ಯ ಮಾತನಾಡಿ ರೋಟರಿ ಕ್ಲಬ್ ವತಿಯಿಂದ ೧೦ ಮಂದಿ ರಕ್ತದಾನ ಮಾಡಿದ್ದಾರೆ ಎಂದು ಹೇಳಿದರು. ಹೆಚ್ಚು ರಕ್ತದಾನ ಮಾಡಿದವರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ರಕ್ತದಾನ ಮಾಡಿದವರಿಗೆ ಪ್ರಮಾಣ ಪತ್ರ ವಿತರಿಸಲಾಯಿತು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರ, ಉಪ ವಿಭಾಗಾಧಿಕಾರಿ ಈಶ್ವರ್ ಕುಮಾರ್ ಖಂಡೂ, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕ ಡಾ.ಕಾರ್ಯಪ್ಪ, ತಾಲೂಕು ಆರೋಗ್ಯಾಧಿಕಾರಿ ಡಾ.ಮಂಜುನಾಥ್, ಡಾ.ಮಂಜುನಾಥ್, ಡಾ.ವಿಶಾಲ್ ಕುಮಾರ್, ಡಾ.ಮಹೇಶ್, ರೋಟರಿ ಸಂಸ್ಥೆಯ ಕಾರ್ಯದರ್ಶಿ ಮತ್ತು ಸದಸ್ಯರು ಇತರರು ಇದ್ದರು.
ಸಭೆಯ ಬಳಿಕ ಜಿಲ್ಲಾಧಿಕಾರಿ ಚಾರುಲತಾ ಸೋಮಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರ, ಉಪ ವಿಭಾಗಾಧಿಕಾರಿ ಈಶ್ವರ್ ಕುಮಾರ್ ಖಂಡೂ, ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ.ಎನ್.ಆನಂದ್, ತಾಲೂಕು ವೈದ್ಯಾಧಿಕಾರಿ ಡಾ.ಮಂಜುನಾಥ್, ಆರೋಗ್ಯ ಇಲಾಖೆ ಸಿಬ್ಬಂದಿಗಳು ಹಾಗೂ ರೋಟರಿ ಸಂಸ್ಥೆಯ ಪ್ರತಿನಿಧಿಗಳು ಸೇರಿದಂತೆ ಒಟ್ಟು ೩೭ ಮಂದಿ ಸ್ವಯಂ ಪ್ರೇರಿತವಾಗಿ ಶುಕ್ರವಾರ ರಕ್ತದಾನ ಮಾಡಿದರು.