ಸೋಮವಾರಪೇಟೆ, ಅ. ೧: ಸಮೀಪದ ಹಾನಗಲ್ಲು ಗ್ರಾಮ ಪಂಚಾಯಿತಿ ಗ್ರಾಮಸಭೆ ಅಧ್ಯಕ್ಷ ಲಕ್ಷಿö್ಮÃಪಾಂಡಿಯನ್ ಅವರ ಅಧ್ಯಕ್ಷತೆಯಲ್ಲಿ ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು.

ಪ್ರಸಕ್ತ ಸಾಲಿನಲ್ಲಿ ಸುರಿದ ಧಾರಾಕಾರ ಮಳೆಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಾಫಿ, ಕಾಳುಮೆಣಸು ಹಾಗೂ ಇನ್ನಿತರ ಕೃಷಿ ಬೆಳೆಗಳಿಗೆ ಹಾನಿಯಾಗಿವೆ. ಕೂಡಲೇ ಅರ್ಜಿಯನ್ನು ಪಡೆದುಕೊಂಡು ಪರಿಹಾರ ನೀಡಬೇಕೆಂದು ಕೃಷಿಕರು ಒತ್ತಾಯಿಸಿದರು.

ಅತಿವೃಷ್ಟಿಯಿಂದ ಕೃಷಿ ಬೆಳೆಗಳು ಹಾನಿಗೀಡಾದ ಪ್ರದೇಶಕ್ಕೆ ಅಧಿಕಾರಿಗಳು ಆಗಮಿಸುತ್ತಿಲ್ಲ ಎಂದು ಆರೋಪಿಸಿದರು. ಈಗಾಗಲೇ ಆ್ಯಪ್‌ಗಳ ಮೂಲಕ ಸರ್ವೇ ನಡೆಯುತ್ತಿದೆ. ಕೃಷಿಕರು ಅರ್ಜಿ ಕೊಡುವ ಅವಶ್ಯಕತೆ ಇಲ್ಲ ಎಂದು ಕಂದಾಯ ಅಧಿಕಾರಿ ಹೇಳಿದರು.

ಗ್ರಾಮಸಭೆಗೆ ಕೆಲ ಅಧಿಕಾರಿಗಳು ನಿರಂತರ ಗೈರಾಗುತ್ತಿದ್ದಾರೆ. ಕೃಷಿಕರ ಸಮಸ್ಯೆಗಳನ್ನು ಯಾರೊಂದಿಗೆ ಹೇಳಿಕೊಳ್ಳುವುದು ಎಂದು ಹಾನಗಲ್ಲು ಶೆಟ್ಟಳ್ಳಿ ದಯಾನಂದ ಅಸಮಾಧಾನ ವ್ಯಕ್ತಪಡಿಸಿದರು.

ಗ್ರಾಮೀಣ ಭಾಗದಲ್ಲಿ ನಡೆಯುವ ಕಾಮಗಾರಿ ಕಳಪೆಯಾಗುತ್ತಿವೆ. ದೂರು ನೀಡಿದರೂ ಪ್ರಯೋಜನವಾಗುತ್ತಿಲ್ಲ ಎಂದು ಕಲ್ಕಂದೂರು ಗ್ರಾಮದ ರವೀಶ್ ಅಸಮಾಧಾನ ವ್ಯಕ್ತಪಡಿಸಿದರು. ಕಾಮಗಾರಿ ಪ್ರಾರಂಭದಲ್ಲೇ ಅಂದಾಜುಪಟ್ಟಿಯೊAದಿಗೆ ವಿವರಗಳಿರುವ ಬೋರ್ಡ್ ಹಾಕಬೇಕು. ಸಾರ್ವಜನಿಕರಿಗೂ ಮಾಹಿತಿ ಸಿಗುವಂತಾಗಬೇಕು ಎಂದು ಒತ್ತಾಯಿಸಿದರು. ಈ ಬಗ್ಗೆ ಸಂಬAಧಿಸಿದ ಇಲಾಖೆಗಳಿಗೆ ತಿಳಿಸಲಾಗುವುದು ಎಂದು ಅಧ್ಯಕ್ಷರು ಹೇಳಿದರು.

ಹೊಸಬೀಡು ಅಂಗನವಾಡಿ ಕೇಂದ್ರದಲ್ಲಿ ಆಹಾರ ಸರಬರಾಜಿನಲ್ಲಿ ಸಮಸ್ಯೆಯಾಗುತ್ತಿದೆ ಎಂದು ಪವನ್ ತಿಳಿಸಿದರು. ಗ್ರಾ.ಪಂ. ವ್ಯಾಪ್ತಿಯಲ್ಲಿ ಅಳವಡಿಸಿರುವ ಬೀದಿ ದೀಪಗಳು ಆಗಾಗ್ಗೆ ಕೆಟ್ಟುಹೋಗುತ್ತಿದ್ದು, ಗುಣಮಟ್ಟದ ಬೀದಿ ದೀಪವನ್ನು ಅಳವಡಿಸುವಂತೆ ಸಭೆಯಲ್ಲಿ ಸಾರ್ವಜನಿಕರು ಒತ್ತಾಯಿಸಿದರು.

ಸಭೆಯಲ್ಲಿ ಉಪಾಧ್ಯಕ್ಷ ಮಿಥುನ್ ಹಾನಗಲ್, ನೋಡೆಲ್ ಅಧಿಕಾರಿಯಾಗಿ ಮೀನುಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ಸಚಿನ್, ಪಿಡಿಒ ಅಸ್ಮಾ ಹಾಗೂ ಸದಸ್ಯರು ಭಾಗವಹಿಸಿದ್ದರು.