ಕೂಡಿಗೆ, ಅ. ೧: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬ್ಯಾಡಗೊಟ್ಟ ದಿಡ್ಡಳ್ಳಿ ಪುನರ್ವಸತಿ ಕೇಂದ್ರದಲ್ಲಿ ಮುಖ್ಯ ಮಂತ್ರಿ ಗ್ರಾಮ ವಿಕಾಸ ಯೋಜನೆಯ ಅಡಿಯಲ್ಲಿ ನಿರ್ಮಿಸಲಾಗಿರುವ ಸ್ವಚ್ಛ ಸಂಕೀರ್ಣ, ತ್ಯಾಜ್ಯ ಸಂಪನ್ಮೂಲ ನಿರ್ವಹಣಾ ಘಟಕ ಮತ್ತು ಗ್ರಾಮ ಪಂಚಾಯಿತಿ ಕಾರ್ಯಾಲಯದಲ್ಲಿ ಡಿಜಿಟಲ್ ಗ್ರಂಥಾಲಯವನ್ನು ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ತಾ. ೨ರಂದು (ಇಂದು) ಉದ್ಘಾಟಿಸಲಿದ್ದಾರೆ ಎಂದು ಅಭಿವೃದ್ಧಿ ಅಧಿಕಾರಿ ಎಂ.ಕೆ. ಅಯಿಷಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.