ಕೂಡಿಗೆ, ಆ. ೨: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬ್ಯಾಡಗೊಟ್ಟ ಗ್ರಾಮದಲ್ಲಿರುವ ದಿಡ್ಡಳ್ಳಿ ಪುನರ್ವಸತಿ ಕೇಂದ್ರದ ಗ್ರಾಮ ಪಂಚಾAಯಿತಿ ಜಾಗದಲ್ಲಿ ಗ್ರಾಮ ವಿಕಾಸ ಯೋಜನೆಯಡಿಯಲ್ಲಿ ೧೦ ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣವಾದ ಕಸ ವಿಲೇವಾರಿ ಘಟಕವನ್ನು ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಉದ್ಘಾಟಿಸಿದರು.
ನಂತರ ಮಾತನಾಡಿದ ಅವರು, ದೇಶದ ಪ್ರಧಾನಿ ನರೇಂದ್ರ ಮೋದಿ ಅವರ ಕನಸಿನ ಕೂಸಾದ ಸ್ವಚ್ಛ ಭಾರತ್ ಯೋಜನೆ ಇದೀಗ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಅನುಷ್ಠಾನಕ್ಕೆ ಬರುವ ಮೂಲಕ ಗ್ರಾಮದ ಪ್ರಗತಿಗೆ ಪೂರಕವಾಗಿದೆ ಎಂದರು.
ಈ ಸಂದರ್ಭ ಕೂಡಿಗೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಂಗಳಾ ಪ್ರಕಾಶ್, ಉಪಾಧ್ಯಕ್ಷೆ ಮೋಹಿನಿ ತಮ್ಮಣೆಗೌಡ ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ತಾಲೂಕು ಕಾರ್ಯನಿರ್ವಾಹಣಾಧಿಕಾರಿ ಜಯಣ್ಣ, ಜಿಲ್ಲಾ ಸ್ವಚ್ಛ ಭಾರತ್ ಯೋಜನೆಯ ಅಧಿಕಾರಿ ಪೆಮ್ಮಯ್ಯ, ಸದಸ್ಯರಾದ ಟಿ.ಪಿ. ಹಮೀದ್, ಗಿರೀಶ್, ಅನಂತ್, ಜಯಶ್ರೀ ರವಿ, ಅಭಿವೃದ್ಧಿ ಅಧಿಕಾರಿ ಎಂ.ಕೆ. ಅಯಿಷಾ ಇಂಜಿನಿಯರ್ ಕೀರ್ತನ ಕುಮಾರ್ ಸೇರಿದಂತೆ ವಿವಿಧ ಘಟಕದ ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು ಹಾಜರಿದ್ದರು.