ಮಡಿಕೇರಿ, ಅ. ೨: ಕೊಡಗು ಅರಣ್ಯ ವೃತ್ತದ ವತಿಯಿಂದ ರಾಷ್ಟಿçÃಯ ಹಸಿರು ಪಡೆ ಇಕೋ-ಕ್ಲಬ್, ಸಾರ್ವಜನಿಕ ಶಿಕ್ಷಣ ಇಲಾಖೆ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್, ಸ್ಕೌಟ್ಸ್ ಮತ್ತು ಗೈಡ್ಸ್, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಇವರ ಸಹಯೋಗದಲ್ಲಿ ೬೭ನೇ ವನ್ಯಜೀವಿ ಸಪ್ತಾಹದ ಪ್ರಯುಕ್ತ ತಾ. ೪ ರಂದು ಬೆಳಿಗ್ಗೆ ೭.೩೦ ಗಂಟೆಗೆ ಮಡಿಕೇರಿ ಅರಣ್ಯ ಭವನದಿಂದ ಹೊರಟು ಮಡಿಕೇರಿ ವೃಕ್ಷೆÆÃದ್ಯಾನದವರೆಗೆ ನಡಿಗೆ ಜಾಥಾ ನಡೆಯಲಿದೆ ಎಂದು ಮಡಿಕೇರಿ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ತಿಳಿಸಿದ್ದಾರೆ.