ಮಡಿಕೇರಿ, ಅ. ೨ : ಮಹಾತ್ಮ ಗಾಂಧೀಜಿ ಅವರು ಶಾಂತಿ, ಅಹಿಂಸೆ ಯನ್ನು ತಮ್ಮ ಜೀವನದುದ್ದಕ್ಕೂ ಪಾಲಿಸಿಕೊಂಡು ಬಂದವರು. ಅವರ ಆದರ್ಶಗಳನ್ನು ಪ್ರತಿಯೊಬ್ಬರೂ ಅಳವಡಿಸಿಕೊಳ್ಳಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷ ಜಿನರಾಳಕರ್ ಬಿ.ಎಲ್ ಅವರು ಕರೆ ನೀಡಿದರು.
ನಗರದ ನ್ಯಾಯಾಲಯದ ಸಭಾಂಗಣದಲ್ಲಿ ರಾಷ್ಟçಪಿತ ಮಹಾತ್ಮ ಗಾಂಧೀಜಿಯವರ ಜಯಂತಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತಿç ಅವರ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಸ್ವಾತಂತ್ಯೋತ್ಸವದ ಅಮೃತ ಮಹೋತ್ಸವ ಅಂಗವಾಗಿ ರಾಷ್ಟಿçಯ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ತಾ. ೨ ರಿಂದ ನವೆಂಬರ್ ೧೪ ರವೆರೆಗೆ ದೇಶಾದ್ಯಾಂತ ‘ಪ್ಯಾನ್ ಇಂಡಿಯಾ ಔಟ್‌ರೀಚ್ ಜಾಗೃತಿ’ ಕಾರ್ಯಕ್ರಮ ಹಮ್ಮಿಕೊಳ್ಳುವುದರ ಮುಖಾಂತರ ಸಾರ್ವಜನಿಕರಲ್ಲಿ ಕಾನೂನು ಅರಿವು ಮೂಡಿಸಲಾಗು ವುದು ಎಂದು ಅವರು ತಿಳಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರಾ ಅವರು ಮಾತನಾಡಿ ಪ್ರತಿ ವರ್ಷ ಅ. ೨ ರಂದು ರಾಷ್ಟçಪಿತ ಮಹಾತ್ಮ ಗಾಂಧೀಜಿಯವರ ಜಯಂತಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತಿç ಅವರ ಜನ್ಮ ದಿನಾಚರಣೆ ಕಾರ್ಯಕ್ರಮ ಆಚರಿಸಲಾಗುತ್ತಿದ್ದು, ಮಹಾತ್ಮರ ಜೀವನದ ತತ್ವಾದರ್ಶಗಳನ್ನು ಪಾಲಿಸಬೇಕು ಎಂದರು.
ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎನ್. ಸುಬ್ರಮಣ್ಯ ಅವರು ಮಾತನಾಡಿ ಬಡವರಿಗೆ, ಜನಸಾಮಾನ್ಯರಿಗೆ ಹಾಗೂ ವಕೀಲರನ್ನು ನೇಮಿಸಿಕೊಳ್ಳಲಾಗದ ಕಕ್ಷಿದಾರರಿಗೆ ಉಚಿತವಾಗಿ ಕಾನೂನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರಾ ಅವರು ಮಾತನಾಡಿ ಪ್ರತಿ ವರ್ಷ ಅ. ೨ ರಂದು ರಾಷ್ಟçಪಿತ ಮಹಾತ್ಮ ಗಾಂಧೀಜಿಯವರ ಜಯಂತಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತಿç ಅವರ ಜನ್ಮ ದಿನಾಚರಣೆ ಕಾರ್ಯಕ್ರಮ ಆಚರಿಸಲಾಗುತ್ತಿದ್ದು, ಮಹಾತ್ಮರ ಜೀವನದ ತತ್ವಾದರ್ಶಗಳನ್ನು ಪಾಲಿಸಬೇಕು ಎಂದರು.
ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎನ್. ಸುಬ್ರಮಣ್ಯ ಅವರು ಮಾತನಾಡಿ ಬಡವರಿಗೆ, ಜನಸಾಮಾನ್ಯರಿಗೆ ಹಾಗೂ ವಕೀಲರನ್ನು ನೇಮಿಸಿಕೊಳ್ಳಲಾಗದ ಕಕ್ಷಿದಾರರಿಗೆ ಉಚಿತವಾಗಿ ಕಾನೂನು ಮುಖ್ಯ ಧ್ಯೇಯವಾಗಿದೆ. ಪ್ರತಿಯೊಬ್ಬರಿಗೂ ನ್ಯಾಯ ಸಿಗಬೇಕು ಎಂಬುದು ಇದರ ಉದ್ದೇಶವಾಗಿದೆ ಎಂದು ಹೇಳಿದರು.
ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಚಂದ್ರಶೇಖರ್ ಪಿ.ಎಸ್, ಹಿರಿಯ ಸಿವಿಲ್ ಮತ್ತು ಸಿ.ಜೆ.ಎಂ ನ್ಯಾಯಾಧೀಶರಾದ ರೂಪಾ, ಅಪರ ಸಿವಿಲ್ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಧೀಶೆ ಸ್ಮಿತಾ ನಾಗಲಾಪುರ, ವಕೀಲರ ಸಂಘದ ಕಾರ್ಯದರ್ಶಿ ಅರುಣ ಕುಮಾರ, ನ್ಯಾಯಾಲಯದ ಸಿಬ್ಬಂದಿಗಳು ಇತರರು ಇದ್ದರು. ಕೃಷ್ಣವೇಣಿ ಪ್ರಾರ್ಥಿಸಿದರು, ಮುದ್ರಾಸ್ವಾಮಿ ಸ್ವಾಗತಿಸಿ ನಿರೂಪಿಸಿದರು. ಪ್ರಧಾನ ಸಿವಿಲ್ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಧೀಶ ಮನು ಬಿ.ಕೆ. ವಂದಿಸಿದರು