ಮಡಿಕೇರಿ, ಅ. ೩: ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತಿç ಜಯಂತಿಯನ್ನು ಜಿಲ್ಲೆಯ ವಿವಿಧೆಡೆ ಅರ್ಥಪೂರ್ಣವಾಗಿ ಆಚರಿಸಲಾಯಿತು. ಶ್ರಮದಾನದ ಮೂಲಕ ಗಾಂಧಿ ಹಾಗೂ ಶಾಸ್ತಿç ಅವರ ಸ್ಮರಣೆ ಮಾಡಲಾಯಿತು.
ಮಡಿಕೇರಿ: ಜಿಲ್ಲಾಡಳಿತ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ರಾಷ್ಟçಪಿತ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್‌ಬಹದ್ದೂರ್ ಶಾಸ್ತಿç ಅವರ ಜನ್ಮ ವರ್ಷಾಚರಣೆಯನ್ನು ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ಸರಳವಾಗಿ ಆಚರಿಸಲಾಯಿತು.
ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಷ್ಟçಪಿತ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್‌ಬಹದ್ದೂರ್ ಶಾಸ್ತಿç ಅವರ ಭಾವಚಿತ್ರಕ್ಕೆ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಪುಷ್ಪಾರ್ಚನೆ ಮಾಡಿ, ಗೌರವ ನಮನ ಸಲ್ಲಿಸಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ರಾಜು ಮೊಗವೀರ, ತಹಶೀಲ್ದಾರ್ ಮಹೇಶ್, ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಪ್ರಾಧ್ಯಾಪಕರಾದ ಶ್ರೀಧರ ಹೆಗಡೆ, ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷರಾದ ಪೊನ್ನಚ್ಚನ ಶ್ರೀನಿವಾಸ್, ಸ್ಕೌಟ್ಸ್ ಜಿಲ್ಲಾ ಆಯುಕ್ತ ಜಿಮ್ಮಿ ಸ್ವಿಕೇರಾ, ಸ್ಕೌಟ್ಸ್ ಮತ್ತು ಗೈಡ್ಸ್ನ ಸಂಘಟಕರಾದ ದಮಯಂತಿ ಇತರರು ಪುಷ್ಪಾರ್ಚನೆ ಮಾಡಿ, ಗೌರವ ನಮನ ಸಲ್ಲಿಸಿದರು.
ಪ್ರಾಧ್ಯಾಪಕರಾದ ಶ್ರೀಧರ ಹೆಗಡೆ ಅವರು ಮಾತನಾಡಿ ಗಾಂಧೀಜಿ ಅವರ ತತ್ವಗಳು ಇಡೀ ವಿಶ್ವಕ್ಕೆ ಮಾದರಿಯಾಗಿದೆ. ಆ ದಿಸೆಯಲ್ಲಿ ಮಹಾತ್ಮ ಗಾಂಧೀಜಿ ಅವರ ಚಿಂತನೆಯನ್ನು ಅಳವಡಿಸಿಕೊಳ್ಳಬೇಕು ಎಂದರು.
ಸತ್ಯ, ಅಹಿಂಸೆ ಮತ್ತು ಶಾಂತಿ ಮಾರ್ಗದ ಮೂಲಕ ದೇಶಕ್ಕೆ ಸ್ವಾತಂತ್ರö್ಯ ತಂದುಕೊಟ್ಟರು. ಸತ್ಯ ಶೋಧನೆಯಿಂದ ಮಾತ್ರ ಗುರಿ ತಲುಪಲು ಸಾಧ್ಯ ಎಂಬುದನ್ನು ಸಾರಿ ಹೇಳಿದ್ದರು ಎಂದು ಶ್ರೀಧರ ಹೆಗ್ಡೆ ಅವರು ನುಡಿದರು.
ಮಹಾತ್ಮ ಗಾಂಧೀಜಿ ಅವರು ಸ್ವಾತಂತ್ರö್ಯಕ್ಕಾಗಿ ಎಲ್ಲರನ್ನೂ ಒಟ್ಟುಗೂಡಿಸಿ ಸ್ವಾತಂತ್ರö್ಯ ಪಡೆಯಲು ಶ್ರಮಿಸಿದರು. ಸ್ವಾತಂತ್ರö್ಯಕ್ಕಾಗಿ ರಾಷ್ಟçದಾದ್ಯಂತ ಸಂಚರಿಸಿ ಜಾಗೃತಿ ಮೂಡಿಸಿದರು ಎಂದು ಶ್ರೀಧರ ಹೆಗ್ಡೆ ಅವರು ಹೇಳಿದರು.
ವಿದ್ಯಾರ್ಥಿನಿ ಶೀಷಾ ಮಾತನಾಡಿ ಮಹಾತ್ಮ ಗಾಂಧೀಜಿ ಅವರು ವಿಶ್ವದಲ್ಲಿ ನಿರಂತರ ಶಾಂತಿಗಾಗಿ ಶ್ರಮಿಸಿದರು. ಗಾಂಧೀಜಿ ಅವರು ಸತ್ಯದರ್ಶನದ ಮೂಲಕ ದೇಶಕ್ಕೆ ಸ್ವಾತಂತ್ರö್ಯ ತಂದುಕೊಟ್ಟರು. ಗಾಂಧೀಜಿಯವರ ಬದುಕಿನ ಬಗ್ಗೆ ಪ್ರತಿಯೊಬ್ಬರೂ ತಿಳಿದುಕೊಳ್ಳಬೇಕು ಎಂದರು.
ನನ್ನ ಜೀವನವೇ, ನನ್ನ ಸಂದೇಶ ಎಂಬುದನ್ನು ಸಾರಿದರು. ಭಾರತ ಸ್ವಾತಂತ್ರö್ಯಕ್ಕಾಗಿ ಹೋರಾಡಿದರು ಎಂದು ಅವರು ನುಡಿದರು. ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.
ಸ್ಕೌಟ್ಸ್ ಮತ್ತು ಗೈಡ್ಸ್ನ ವಿದ್ಯಾರ್ಥಿನಿಯರು ಮಹಾತ್ಮ ಗಾಂಧೀಜಿಯವರಿಗೆ ಪ್ರಿಯವಾದ ಹಾಡುಗಳನ್ನು ಹಾಡಿದರು. ವಾರ್ತಾಧಿಕಾರಿ ಚಿನ್ನಸ್ವಾಮಿ ಸ್ವಾಗತಿಸಿ, ನಿರೂಪಿಸಿ, ವಂದಿಸಿದರು.ನಾಪೋಕ್ಲು: ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಜಯಂತಿ ಅಂಗವಾಗಿ ಸ್ಥಳೀಯ ಹಿಂದೂ ರುದÀ್ರ ಭೂಮಿಯಲ್ಲಿ ಜಿಲ್ಲಾ ಪಂಚಾಯತ್ ಮತ್ತು ಗ್ರಾಮ ಪಂಚಾಯತ್ ವತಿಯಿಂದ ನಿರ್ಮಿಸಲಾದ ಚಿತಾಗಾರವನ್ನು ಗ್ರಾಮ ಪಂಚಾಯತ್ ಅಧ್ಯಕ್ಷೆ ಎಚ್.ಎಸ್. ಪಾರ್ವತಿ ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಮಾತನಾಡಿದ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಪಾಡಿಯಮ್ಮಂಡ ಮುರುಳಿ ಕರುಂಬಮ್ಮಯ್ಯ ನಾಪೋಕ್ಲು ನಾಡಿನ ಹಿಂದೂಗಳ ಅಂತ್ಯಸAಸ್ಕಾರಕ್ಕೆ ಜಾಗ ಇಲ್ಲದಿರುವ ಸಂದರ್ಭ ಸ್ಥಳೀಯ ಹಿಂದೂ ಸಂಘಟನೆಯ ಪ್ರಮುಖರು ಇಲ್ಲಿ ಶವಸಂಸ್ಕಾರ ಮಾಡಲು ಸರಕಾರದ ವತಿಯಿಂದ ಜಾಗವನ್ನು ಮಂಜೂರು ಮಾಡಿಸಿ ಅನುಕೂಲ ಕಲ್ಪಿಸಿದ್ದಾರೆ. ಆದರೆ ಇಲ್ಲಿ ಚಿತಾಗಾರ ಇಲ್ಲದಿರುವುದನ್ನು ಮನಗಂಡು ನನ್ನ ಅಧಿಕಾರದ ಅವಧಿಯಲ್ಲಿ ಗ್ರಾಮ ಪಂಚಾಯಿತಿಯ ಸಹಯೋಗದೊಂದಿದೆ ಚಿತಾಗಾರವನ್ನು ನಿರ್ಮಿಸಲಾಗಿ ಅದು ಇಂದು ಲೋರ್ಕಾಪಣೆಗೊಂಡಿದೆ ಎಂದರು. ೪ ಲಕ್ಷದ ತೊಂಬತ್ತು ಸಾವಿರ ವೆಚ್ಚದಲ್ಲಿ ಆವರಣ ಗೋಡೆಯನ್ನು ನಿರ್ಮಿಸಲಾಗಿದೆ ಎಂದರು
ಕಾರ್ಯಕ್ರಮ ಉದ್ಘಾಟಿಸಿದ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಎಚ್.ಎಸ್. ಪಾರ್ವತಿ ಯುವಕರ ಸ್ವಚ್ಛತಾ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.
ಗ್ರಾಮ ಪಂಚಾಯತ್ ಸದಸ್ಯ ಅರುಣಾ ಬೇಬ, ಗ್ರಾಮ ಪಂಚಾಯತ್ ಉಪಾಧ್ಯಕ್ಷ ಮಹಮ್ಮದ್ ಖುರೇಶಿ, ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಅರೆಯಡ ಅಶೋಕ, ಗ್ರಾಮ ಪಂಚಾಯತ್ ಸದಸ್ಯ ಶಿವಚಾಳಿಯಂಡ ಜಗದೀಶ್, ಪಾಡಿಯಮ್ಮಂಡ ಮನು ಮಹೇಶ್, ಟಿ.ಎ. ಮಹಮ್ಮದ್ ಅನೀಫ್, ಪ್ರಕಾಶ್, ಕಿಶೋರ್, ಸಚಿನ್, ರಾಧಕೃಷ್ಣ ಮತ್ತಿತರರು ಇದ್ದರು.
ಗ್ರಾಮ ಪಂಚಾಯತ್ ಸದಸ್ಯ ಕಾರ್ಯಕ್ರಮದ ರೂವಾರಿ ಬಿ.ಎಂ. ಪ್ರತೀಫ್‌ರವರು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಗ್ರಾಮ ಪಂಚಾಯತ್ ಪಿ.ಡಿ.ಓ. ಚೊಂದಕ್ಕಿ ವಂದಿಸಿದರು.*ಗೋಣಿಕೊಪ್ಪ: ಕರ್ನಾಟಕ ಪಬ್ಲಿಕ್ ಸ್ಕೂಲ್ ಪೊನ್ನಂಪೇಟೆಯಲ್ಲಿ ಗಾಂಧೀಜಿಯವರ ೧೫೨ನೇ ಮತ್ತು ಲಾಲ್ ಬಹದ್ದೂರ್ ಶಾಸ್ತಿç ಅವರ ೧೧೭ನೇ ಹುಟ್ಟುಹಬ್ಬವನ್ನು ಆಚರಿಸಲಾಯಿತು. ಈ ಸಂದರ್ಭ ಶಾಲಾ ಮುಖ್ಯೋಪಾಧ್ಯಾಯ ಬಿ.ಎಂ. ವಿಜಯ್, ರಘುನಾಥ್, ಸದಸ್ಯ ರಂಗನಾಥ್, ಶಿಕ್ಷಕವೃಂದ ಉಪಸ್ಥಿತರಿದ್ದರು.ಮಡಿಕೇರಿ: ಗಾಂಧಿ ಜಯಂತಿ ಪ್ರಯುಕ್ತ ಮಡಿಕೇರಿ ಬಿಜೆಪಿ ಕಾರ್ಯಕರ್ತರಿಂದ ನಗರದಲ್ಲಿ ಸ್ವಚ್ಛತಾ ಶ್ರಮದಾನ ನಡೆಯಿತು.
ವಾರ್ಡ್ ಸಂಖ್ಯೆ ೯ರ ರಾಣಿಪೇಟೆ, ಮಲ್ಲಿಕಾರ್ಜುನ ನಗರದ ಬಿಜೆಪಿ ಕಾರ್ಯಕರ್ತರು ನಗರಸಭೆ ಸದಸ್ಯರಾದ ಕಲಾವತಿ ಅವರ ನೇತೃತ್ವದಲ್ಲಿ ಸ್ವಚ್ಚತಾ ಶ್ರಮದಾನ ನಡೆಸಿದರು. ನಂತರ ನೆರೆದಿದ್ದ ಕಾರ್ಯಕರ್ತರಿಗೆ ಸಿಹಿಹಂಚಿ ಸಂಭ್ರಮಿಸಲಾಯಿತು.
ಈ ಸಂದರ್ಭ ಬಿಜೆಪಿ ಬೂತ್ ಅಧ್ಯಕ್ಷ ಎಸ್. ಭರತ್, ಪ್ರಮುಖರಾದ ಲೀಲಾವತಿ ಹಾಗೂ ಬಿಜೆಪಿ ಕಾರ್ಯಕರ್ತರು ಹಾಜರಿದ್ದರು.ಮಡಿಕೇರಿ: ಗಾಂಧಿ ಜಯಂತಿ ಪ್ರಯುಕ್ತ ಮಡಿಕೇರಿ ಬಿಜೆಪಿ ಕಾರ್ಯಕರ್ತರಿಂದ ನಗರದಲ್ಲಿ ಸ್ವಚ್ಛತಾ ಶ್ರಮದಾನ ನಡೆಯಿತು.
ವಾರ್ಡ್ ಸಂಖ್ಯೆ ೯ರ ರಾಣಿಪೇಟೆ, ಮಲ್ಲಿಕಾರ್ಜುನ ನಗರದ ಬಿಜೆಪಿ ಕಾರ್ಯಕರ್ತರು ನಗರಸಭೆ ಸದಸ್ಯರಾದ ಕಲಾವತಿ ಅವರ ನೇತೃತ್ವದಲ್ಲಿ ಸ್ವಚ್ಚತಾ ಶ್ರಮದಾನ ನಡೆಸಿದರು. ನಂತರ ನೆರೆದಿದ್ದ ಕಾರ್ಯಕರ್ತರಿಗೆ ಸಿಹಿಹಂಚಿ ಸಂಭ್ರಮಿಸಲಾಯಿತು.
ಈ ಸಂದರ್ಭ ಬಿಜೆಪಿ ಬೂತ್ ಅಧ್ಯಕ್ಷ ಎಸ್. ಭರತ್, ಪ್ರಮುಖರಾದ ಲೀಲಾವತಿ ಹಾಗೂ ಬಿಜೆಪಿ ಕಾರ್ಯಕರ್ತರು ಹಾಜರಿದ್ದರು.ವೀರಾಜಪೇಟೆ: ಮಹಾತ್ಮರು ಕಂಡ ಕನಸು ಸ್ವಚ್ಛತಾ ಆಂದೋಲನ ಎಂದು ೨ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ದಿಂಡಲ್‌ಕೊಪ್ಪ ಶಿವಪುತ್ರ ಹೇಳಿದರು.
ಗಾಂಧಿ ಜಯಂತಿ ಅಂಗವಾಗಿ ತಾಲೂಕು ಕಾನೂನು ಸೇವೆಗಳ ಸಮಿತಿ ಹಾಗೂ ವಕೀಲರ ಸಂಘದ ಆಶ್ರಯದಲ್ಲಿ ನ್ಯಾಯಾಲಯದ ಆವರಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಗಾಂಧೀಜಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದ ಬಳಿಕ ಮಾತನಾಡಿದ ನ್ಯಾಯಾಧೀಶ ದಿಂಡಲ್‌ಕೊಪ್ಪ ಅವರು ಮನುಷ್ಯ ಮತ್ತೊಬ್ಬರ ತಪ್ಪುಗಳನ್ನು ಹುಡುಕುವುದಕಿಂತ ತನ್ನ ತಪ್ಪುಗಳನ್ನು ತಿದ್ದಿಕೊಂಡು ಅರಿತು ಬಾಳುವುದು ಉತ್ತಮ. ಬರಿ ಮಾತಿನಲ್ಲಿಯೇ ಕಾಲಕಳೆಯದೇ ಕೃತಿಗೆ ಹೆಚ್ಚು ಪ್ರಾತಿನಿಧ್ಯ ನೀಡುವಂತಾಗಬೇಕು ಎಂದರು.
ಹಿರಿಯ ಸಿವಿಲ್ ನ್ಯಾಯಾಧೀಶ ಎಂ.ಜಿ. ಲೋಕೇಶ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಸ್ವಾತಂತ್ರ ಎಂಬುದು ಸಂವಿಧಾನದಡಿಯಲ್ಲಿ ನಮಗೆ ನೀಡಿದ ಹಕ್ಕು ಮತ್ತು ಕರ್ತವ್ಯಗಳನ್ನು ಅಥÀðಮಾಡಿಕೊಳ್ಳುವುದು. ಇಂದಿನ ಅಮೃತ ಮಹೋತ್ಸವ ಕಾರ್ಯಕ್ರಮವು ರಾಷ್ಟಿçÃಯ ಕಾನೂನು ಸೇವಾ ಪ್ರಾಧಿಕಾರ ಮತ್ತು ರಾಜ್ಯ ಪ್ರಾಧಿಕಾರದಂತೆ ನವೆಂಬರ್ ೧೪ರ ವರೆಗೆ ಹಮ್ಮಿಕೊಳ್ಳಲಾಗುವುದು. ಸ್ವಾತಂತ್ರದ ಇತಿಹಾಸದ ಬಗ್ಗೆ ಸಾರ್ವಜನಿಕರಿಗೆ ವಿವಿಧ ಕಾನೂನುಗಳ ಅರಿವು ಮೂಡಿಸಲಾಗುವುದು ಎಂದು ತಿಳಿಸಿದ ನ್ಯಾಯಾಧೀಶರು ತಮ್ಮ ತಮ್ಮ ಮನೆಯ ಆವರಣದಲ್ಲಿ ಸ್ವಚ್ಛತೆಯನ್ನು ಕಾಪಾಡಿಕೊಳ್ಳುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದರು.
ವಕೀಲರ ಸಂಘದ ಗೌ. ಕಾರ್ಯದರ್ಶಿ ಎಂ.ಕೆ. ದಿನೇಶ್, ಪ್ರಧಾನ ಸಿವಿಲ್ ನ್ಯಾಯಾಧೀಶರುಗಳಾದ ಎನ್.ವಿ. ಕೋನಪ್ಪ ಮತ್ತು ಸಿ. ಮಹಾಲಕ್ಷಿ ಅವರುಗಳು ಸಭೆಯನ್ನುದ್ದೇಶಿಸಿ ಮಾತನಾಡಿದರು.
ಶಿರಸ್ತೆದಾರ್ ಗೋವಿಂದರಾಜು ಸ್ವಾಗತಿಸಿದರೆ, ಬಿ.ಎಸ್. ಜಯಪ್ಪ ವಂದಿಸಿದರು. ಸಭೆಯ ನಂತರ ನ್ಯಾಯಾಧೀಶರು ವಕೀಲರ ಮುಂದಾಳತ್ವದಲ್ಲಿ ನ್ಯಾಯಾಲಯದ ಆವರಣದ ಸುತ್ತು ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.ಗೋಣಿಕೊಪ್ಪಲು: ಪೊನ್ನಪ್ಪಸಂತೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಲ್ಲೂರು ಗ್ರಾಮದ ಸರಸ್ವತಿ ಯುವಕ ಸಂಘವು ಗ್ರಾಮದಲ್ಲಿ ಸ್ವಚ್ಛತಾ ಕಾರ್ಯವನ್ನು ನಡೆಸಿತು.
ಸಂಘದ ಅಧ್ಯಕ್ಷ ತೀತರಮಾಡ ರಾಜ, ಸರಸ್ವತಿ ಯುವಕ ಸಂಘದ ಉಪಾಧ್ಯಕ್ಷ ಎಂ.ಜಿ. ಹರೀಶ್, ಕಾರ್ಯದರ್ಶಿ ಟಿ.ಎ. ಅರುಣ್, ಗ್ರಾಮದ ಹಿರಿಯರಾದ ಟಿ.ಟಿ. ವಿಜಯ, ಕೆ.ಬಿ. ಮೋಟಯ್ಯ, ಪಿ.ಎಸ್. ಗಣಪತಿ, ಪಿ.ಪಿ. ಸುರೇಶ್, ಸಂಘದ ಪದಾಧಿಕಾರಿಗಳು ಗ್ರಾಮಸ್ಥರು ಈ ಸಂದರ್ಭ ಹಾಜರಿದ್ದರು. ಕಾರ್ಯದರ್ಶಿ ಅರುಣ್ ಸ್ವಾಗತಿಸಿ, ವಂದಿಸಿದರು.ಪೊನ್ನAಪೇಟೆ: ಬಿಜೆಪಿಯ ಪೊನ್ನಂಪೇಟೆ ಮಂಡಲ ವತಿಯಿಂದ ಮಹಾತ್ಮ ಗಾಂಧೀಜಿ ಅವರ ೧೫೨ನೇ ಜಯಂತಿ ಹಾಗೂ ಮಾಜಿ ಪ್ರಧಾನಮಂತ್ರಿ ಲಾಲ್ ಬಹದ್ದೂರ್ ಶಾಸ್ತಿç ಅವರ ೧೧೭ನೇ ಜಯಂತಿಯನ್ನು ಆಚರಿಸಲಾಯಿತು.
ಈ ಸಂದರ್ಭ ವೀರಾಜಪೇಟೆ ಮಂಡಲ ಅಧ್ಯಕ್ಷ ನೆಲ್ಲೀರ ಚಲನ್ ಕುಮಾರ್, ಶಕ್ತಿ ಕೇಂದ್ರದ ಪ್ರಮುಖ ಮೂಕಳೇರ ಮಧುಕುಮಾರ್ ಹಾಗೂ ಕೊಟೇರ ಕಿಶನ್ ಉತ್ತಪ್ಪ, ಪೊನ್ನಂಪೇಟೆ ಬಿಜೆಪಿ ಉಸ್ತುವಾರಿ ಚೋಡುಮಾಡ ಶ್ಯಾಮ್ ಪೂಣಚ್ಚ, ಪೊನ್ನಂಪೇಟೆ ಗ್ರಾ.ಪಂ. ಅಧ್ಯಕ್ಷೆ ಗಿರಿಜಾ ವೆಂಕಟೇಶ್, ಉಪಾಧ್ಯಕ್ಷೆ ದಶಮಿ ಸದಾ, ಸದಸ್ಯರಾದ ರಾಮಕೃಷ್ಣ, ರಮೇಶ್, ಮಚ್ಚಮಾಡ ವಿಮಲ, ೧ನೇ ಬೂತ್ ಅಧ್ಯಕ್ಷ ವಿಜು, ೫ನೇ ಬೂತ್ ಅಧ್ಯಕ್ಷ ಕೆ.ಬಿ. ವಿನು, ೬ನೇ ಬೂತ್ ಅಧ್ಯಕ್ಷ ಮನು, ಬಿಜೆಪಿ ಕಾರ್ಯಕರ್ತರಾದ ಚೆಪ್ಪ್ಪುಡಿರ ರಾಧಿಕಾ, ಸುನಂದಾ ಹಾಗೂ ವೆಂಕಟೇಶ್ ಹಾಜರಿದ್ದರು.ಸೋಮವಾರಪೇಟೆ: ಸಮೀಪದ ಹಾನಗಲ್ಲು ಚಾಣಕ್ಯ ಯುವಕ ಸಂಘದ ವತಿಯಿಂದ ಗಾಂಧಿ ಜಯಂತಿ ಆಚರಿಸಲಾಯಿತು.
ಕಾರ್ಯಕ್ರಮವನ್ನು ಹಾನಗಲ್ಲು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲಕ್ಷಿö್ಮÃ ಪಾಂಡ್ಯನ್ ಉದ್ಘಾಟಿಸಿದರು. ದಿನದ ಅಂಗವಾಗಿ ಹಾನಗಲ್ಲು ಹಿರಿಯ ಪ್ರಾಥಮಿಕ ಶಾಲಾ ಆವರಣವನ್ನು ಶ್ರಮದಾನದ ಮೂಲಕ ಸ್ವಚ್ಛಗೊಳಿಸಲಾಯಿತು.
ಗಾ.್ರಪಂ. ಉಪಾಧ್ಯಕ್ಷ ಮಿಥುನ್ ಹಾನಗಲ್, ಮಾಜಿ ಸೈನಿಕರಾದ ಎಚ್.ಈ. ಸುಬ್ಬಯ್ಯ, ಮಂಜುನಾಥ್, ಸಂಘದ ಅಧ್ಯಕ್ಷ ಎಚ್.ಬಿ. ಕಿಶೋರ್, ಕಾರ್ಯದರ್ಶಿ ಎಚ್.ಆರ್. ಲಿಖಿತ್, ಉಪಾಧ್ಯಕ್ಷ ಪ್ರಜ್ವಲ್, ಉಪಕಾರ್ಯದರ್ಶಿ ಕೀರ್ತನ್ ಇದ್ದರು.ಕುಶಾಲನಗರ: ರಾಷ್ಟçಪಿತ ಮಹಾತ್ಮ ಗಾಂಧಿ ಮತ್ತು ಮಾಜಿ ಪ್ರಧಾನಿ ಲಾಲ್ ಬಹದೂರ್ ಶಾಸ್ತಿçರವರ ಜಯಂತಿಯನ್ನು ಕುಶಾಲನಗರದ ವಿವಿಧೆಡೆ ಸರಳವಾಗಿ ಆಚರಿಸಲಾಯಿತು.
ಕುಶಾಲನಗರ ತಾಲೂಕು ಕಚೇರಿಯಲ್ಲಿ ತಹಶೀಲ್ದಾರ್ ಪ್ರಕಾಶ್ ಮತ್ತು ಸಿಬ್ಬಂದಿಗಳು ಮಹಾತ್ಮ ಗಾಂಧಿ ಮತ್ತು ಲಾಲ್ ಬಹದೂರ್ ಶಾಸ್ತಿç ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ಕಚೇರಿ ಸಿಬ್ಬಂದಿಗಳ ಜೊತೆಗೂಡಿ ಸ್ವಚ್ಛತಾ ಕಾರ್ಯದಲ್ಲಿ ತೊಡಗಿದರು.
ಕುಶಾಲನಗರ ಪಟ್ಟಣ ಪಂಚಾಯಿತಿಯ ಸಭಾಂಗಣದಲ್ಲಿ ಪ.ಪಂ. ಅಧ್ಯಕ್ಷ ಜಯವರ್ಧನ್ ದೀಪ ಬೆಳಗಿಸಿ ಬಾಪೂಜಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ದೇಶಕ್ಕೆ ಸ್ವಾತಂತ್ರ‍್ಯ ತರಲು ಅಹಿಂಸೆಯಿAದ ಬ್ರಿಟೀಷರ ವಿರುದ್ಧ ಹೋರಾಟ ನಡೆಸಿದ ಮಹಾತ್ಮ ಗಾಂಧೀಜಿಯವರ ಪಾತ್ರದ ಬಗ್ಗೆ ಕೊಂಡಾಡಿದರು. ಪಟ್ಟಣ ಪಂಚಾಯಿತಿ ಉಪಾಧ್ಯಕ್ಷೆ ಸುರಯ್ಯ ಬಾನು ಸ್ಥಾಯಿ ಸಮಿತಿ ಅಧ್ಯಕ್ಷರಾದ ಸುರೇಶ್ ಮುಖ್ಯಾಧಿಕಾರಿ ಕೃಷ್ಣಪ್ರಸಾದ್ ಮತ್ತು ಸದಸ್ಯರು ಕಚೇರಿ ಸಿಬ್ಬಂದಿಗಳು ಹಾಜರಿದ್ದರು.
ಸಮಾಜ ಕಲ್ಯಾಣ ಸಚಿವರ ಆಶಯದಂತೆ ಕುಶಾಲನಗರ ಮೆಟ್ರಿಕ್ ಪೂರ್ವ ಬಾಲಕರ ನಿಲಯ ೮ ಗಂಟೆಯಿAದ ೧೨ಗಂಟೆವರೆಗೆ ಸ್ವಚ್ಛತಾ ಹಾಗೂ ಶ್ರಮದಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಗಾಂಧೀಜಿಯವರ ಭಾವ ಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು. ಶ್ರಮದಾನ ಕಾರ್ಯಕ್ರಮಕ್ಕೆ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕಿ ಪ್ರತಿಭಾ ಚಾಲನೆ ನೀಡಿದರು.
ಕುಶಾಲನಗರ ನಗರ ಕಾಂಗ್ರೆಸ್ ಕಚೇರಿಯಲ್ಲಿ ಕಾಂಗ್ರೆಸ್ ನಗರ ಅಧ್ಯಕ್ಷ ಶರೀಫ್ ಇಬ್ರಾಹಿಂ ಮತ್ತು ಕಾರ್ಯಕರ್ತರ ಮಹಾಪೂಜೆ ಮತ್ತು ಲಾಲ್ ಬಹದ್ದೂರ್ ಶಾಸ್ತಿç ಅವರ ಭಾವಚಿತ್ರಗಳಿಗೆ ಪುಷ್ಪನಮನ ಸಲ್ಲಿಸಿದರು.*ಗೋಣಿಕೊಪ್ಪಲು: ಕಾವೇರಿ ಕಾಲೇಜು ಎನ್.ಸಿ.ಸಿ. ಘಟಕ ವತಿಯಿಂದ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತಿç ಅವರ ಹುಟ್ಟು ಹಬ್ಬದ ಆಚರಣೆಗೆ ಗೋಣಿಕೊಪ್ಪಲು ಪ್ರಾಥಮಿಕ ಆರೋಗ್ಯ ಕೇಂದ್ರದ ಒಳರೋಗಿಗಳಿಗೆ ಹಣ್ಣುಹಂಪಲು ವಿತರಿಸಲಾಯಿತು.
ಅವರ ಆದರ್ಶಗಳು ನಮಗೆ ಮಾರ್ಗದರ್ಶನ ನೀಡಲಿ ಎಂದು ಪ್ರಾಂಶುಪಾಲ ಪ್ರೊ ಎಂ.ಬಿ. ಕಾವೇರಪ್ಪ ಹೇಳಿದರು.
ಎನ್.ಸಿ.ಸಿ ಅಧಿಕಾರಿ ಲೆಫ್ಟಿನೆಂಟ್ ಅಕ್ರಂ, ಲೆಫ್ಟಿನೆಂಟ್ ಲೇಪಾಕ್ಷಿ, ಅಧೀಕ್ಷಕ ಸೋಮನಾಥ್, ಉಪನ್ಯಾಸಕರು ಅಜಯ್, ರಜನಿ, ಚಿತ್ರಾವತಿ, ಮತ್ತು ಎನ್.ಸಿ.ಸಿ ಕೆಡೆಟ್‌ಗಳು ಹಾಜರಿದ್ದರು. ಮಡಿಕೇರಿ: ಗ್ರಾಮೀಣಾಭಿವೃದ್ಧಿಯ ಮೂಲಕ ಭವ್ಯ ಭಾರತವನ್ನು ನಿರ್ಮಾಣ ಮಾಡಬೇಕೆಂಬ ಮಹಾತ್ಮಗಾಂಧೀಜಿಯವರ ಕನಸನ್ನು ನನಸು ಮಾಡಲು ಪಣತೊಡುವುದರೊಂದಿಗೆ ಅವರ ಆದರ್ಶಗಳನ್ನು ನಾವೆಲ್ಲರೂ ಪಾಲಿಸುವುದೇ ಗಾಂಧೀಜಿಯವರಿಗೆ ಕೊಡುವ ಗೌರವವಾಗಿದೆ ಎಂದು ಸರ್ಕಾರಿ ಪದವಿ ಕಾಲೇಜಿನ ಇತಿಹಾಸ ಪ್ರಾಧ್ಯಾಪಕ ಬಿ.ಆರ್. ಶಶಿಧರ್ ಹೇಳಿದರು.
ನಗರದ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಗಾಂಧೀಜಯAತಿ ಕಾರ್ಯಕ್ರಮದ ಮುಖ್ಯ ಅಥಿತಿಯಾಗಿ ಭಾಗವಹಿಸಿ ಅವರು ಮಾತನಾಡಿದರು.
ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಇತಿಹಾಸ ಪ್ರಾಧ್ಯಾಪಕ ಡಾ. ಮಹದೇವಯ್ಯ ಮಾತನಾಡಿದರು.
ಅಧ್ಯಕ್ಷೀಯ ಭಾಷಣವನ್ನು ಕಾಲೇಜಿನ ಎನ್.ಸಿ.ಸಿ ಅಧಿಕಾರಿ ಹಾಗೂ ಇತಿಹಾಸ ವಿಭಾಗದ ಮುಖ್ಯಸ್ಥರಾದ ಮೇಜರ್ ಡಾ. ರಾಘವ ಬಿ. ಮಾಡಿದರು.
ಕಾಲೇಜಿನ ಗಣಕ ವಿಜ್ಞಾನ ವಿಭಾಗ ಮುಖ್ಯಸ್ಥ ಎಂ.ಎನ್. ರವಿಶಂಕರ್, ಕಾವೇರಿ ಕಾಲೇಜು ವೀರಾಜಪೇಟೆಯ ವಾಣಿಜ್ಯ ವಿಭಾಗದ ಮುಖ್ಯಸ್ಥ ರಾಘವೇಂದ್ರ ಅವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಎನ್.ಸಿ.ಸಿ ಕೆಡೆಟ್‌ಗಳಾದ ನಿಶ್ಚಿತ ಸಿ.ಸಿ. ಮತ್ತು ನಯನ ಮಹಾತ್ಮ ಗಾಂಧಿಯ ಕುರಿತು ಪ್ರಬಂಧ ಮಂಡಿಸಿದರು.
ಎನ್.ಸಿ.ಸಿ. ಕೆಡೆಟ್ ನಾಯಕರಾದ ಇಂದ್ರಜಿತ್ ಎಂ.ಎಸ್, ಯಶಸ್ವಿ ಸಿ.ಟಿ, ಭೂಮಿಕಾ ಬಿ.ಜಿ, ನಿಶ್ಚಿತ ಸಿ.ಸಿ, ನಯನ, ಆದಿತ್ಯ ಮತ್ತು ಸಂಗಡಿಗರು ಗಾಂಧೀ ಸ್ಮೃತಿಯನ್ನು ಹಾಡಿದರು.
ಕಾಲೇಜಿನ ಎನ್.ಸಿ.ಸಿ ಕೆಡೆಟ್‌ಗಳು ಉಪನ್ಯಾಸಕರು ಹಾಗೂ ಮೌಲ್ಯಮಾಪನಕ್ಕೆ ಹಾಜರಾಗಿದ್ದ ಮಂಗಳೂರು ವಿಶ್ವವಿದ್ಯಾನಿಲಯದ ಕೊಡಗಿನ ಉಪನ್ಯಾಸಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.ಗೋಣಿಕೊಪ್ಪ ವರದಿ: ಗಾಂಧಿ ಜಯಂತಿ ಅಂಗವಾಗಿ ಗೋಣಿಕೊಪ್ಪ ಗ್ರಾ.ಪಂ. ಸದಸ್ಯರು ಬೈಪಾಸ್ ರಸ್ತೆ ಬದಿಯ ಕಸ ತೆಗೆದು ಸ್ವಚ್ಛತೆ ಮಾಡಿದರು. ಅಧ್ಯಕ್ಷೆ ಚೈತ್ರ ಬಿ. ಚೇತನ್ ಸೇರಿದಂತೆ ಸದಸ್ಯರು, ಸಿಬ್ಬಂದಿ ಭಾಗವಹಿಸಿದ್ದರು. ಚೆಟ್ಟಳ್ಳಿ: ಚೆಟ್ಟಳ್ಳಿ ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ಮಹಾತ್ಮ ಗಾಂಧೀಜಿಯ ವರ ೧೫೨ನೇ ಹುಟ್ಟು ಹಬ್ಬವನ್ನು ಚೆಟ್ಟಳ್ಳಿಯ ಶ್ರೀನರೇಂದ್ರ ಮೋದಿ ಸಹಕಾರ ಭವನದಲ್ಲಿ ಆಚರಿಸಲಾಯಿತು. ಈ ಸಂದರ್ಭ ಚೆಟ್ಟಳ್ಳಿ ಬಿಜೆಪಿ ಶಕ್ತಿಕೇಂದ್ರದ ಪದಾಧಿಕಾರಿಗಳು ಹಾಗೂ ಬಿಜೆಪಿ ಕಾರ್ಯಕರ್ತರು ಹಾಜರಿದ್ದರು.*ಗೋಣಿಕೊಪ್ಪ: ಹಳ್ಳಿಗಟ್ಟು ಗ್ರಾಮದ ಶ್ರೀ ಈಶ್ವರ ಪುರುಷ ಸ್ವಸಹಾಯ ಸಂಘ ಹಾಗೂ ಶ್ರೀ ಪಾರ್ವತಿ ಮಹಿಳಾ ಸ್ವ-ಸಹಾಯ ಸಂಘದ ವತಿಯಿಂದ ಗಾಂಧಿ ಜಯಂತಿ ಆಚರಿಸಲಾಯಿತು.
ಶ್ರೀ ಮಹಾವಿಷ್ಣು ದೇವಸ್ಥಾನದ ಆವರಣವನ್ನು ಹಾಗೂ ಸ್ಥಳೀಯ ಅಂಗನವಾಡಿ ಕೇಂದ್ರ ಆವರಣವನ್ನು ಸ್ವಚ್ಛಗೊಳಿಸಲಾಯಿತು. ಈ ಸಂದರ್ಭದಲ್ಲಿ ಸಂಘದ ಸದಸ್ಯರು ಹಾಗೂ ಗ್ರಾಮದ ಪ್ರಮುಖರು ಉಪಸ್ಥಿತರಿದ್ದರು.