ಕೂಡಿಗೆ, ಅ. ೩: ಇಲ್ಲಿಗೆ ಸಮೀಪದ ಶಿರಂಗಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ೨೦೨೦-೨೧ ನೇ ಸಾಲಿನ ಜಮಾಬಂದಿ ಕಾರ್ಯಕ್ರಮ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಅಧ್ಯಕ್ಷೆ ಭಾಗೀರತಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು
ಗ್ರಾಮ ಪಂಚಾಯಿತಿ ಅನುದಾನದ ಶೇ. ೨೫% ರಷ್ಟು ಖರ್ಚಿನ ವಿವರ, ೧೪ ನೇ ಹಣಕಾಸು ಯೋಜನೆಯ ಕಾಮಗಾರಿಗಳ ಪಟ್ಟಿ ಮತ್ತು ನಡೆದ ಕಾಮಗಾರಿಗಳ ಬಗ್ಗೆ ಸಭೆಗೆ ಮಾಹಿತಿಯನ್ನು ಅಭಿವೃದ್ಧಿ ಅಧಿಕಾರಿ ಹರೀಶ್ ಮಾಹಿತಿ ನೀಡಿದರು.
೧೫ನೇ ಹಣಕಾಸು ಯೋಜನೆ ಮತ್ತು ಸಂಪೂರ್ಣ ಸ್ವಚ್ಛತಾ ಆಂದೋಲನ ಯೋಜನೆಯ ವಿವರ ಮತ್ತು ರಾಷ್ಟಿçÃಯ ಉದ್ಯೋಗ ಖಾತರಿ ಯೋಜನೆಯ ಕಾಮಗಾರಿಗಳಿಗೆ ಸಭೆಯಲ್ಲಿ ಅನುಮೋದನೆ ದೊರೆಯಿತು. ಅದರ ಮುಖೇನ ಆಯಾ ವಾರ್ಡ್ಗಳಲ್ಲಿ ಪ್ರಮುಖ ಕಾಮಗಾರಿಗಳನ್ನು ಕೈಗೊಳ್ಳಲು ತೀರ್ಮಾನಿಸಲಾಯಿತು. .
ಸಭೆಯಲ್ಲಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಎನ್.ಎನ್. ಧರ್ಮಪ್ಪ ಸದಸ್ಯರುಗಳಾದ ಸರಿತಾ, ಗೀತಾ, ಎಸ್.ಎ. ಪ್ರದೀಪ್, ಲಕ್ಷಿö್ಮ ಎಂ.ಆರ್., ಲತಾಬಾಯಿ ಹಾಜರಿದ್ದರು.