ಸುಂಟಿಕೊಪ್ಪ, ಅ.೩: ಐಗೂರು ಗ್ರಾಮ ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಹಾಗೂ ಗ್ರಾಮೀಣಾ ಅಭಿವೃದ್ಧಿ ಪಂಚಾಯತ್‌ರಾಜ್ ಇಲಾಖೆ ವತಿಯಿಂದ ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿಯಲ್ಲಿ ನಿರ್ಮಿಸಲಾಗಿರುವ ವೈಜ್ಞಾನಿಕ ಘನತ್ಯಾಜ್ಯ ನಿರ್ವಹಣಾ ಸ್ವಚ್ಛ ಸಂಕೀರ್ಣವನ್ನು ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಉದ್ಘಾಟಿಸಿದರು.

ಘನತ್ಯಾಜ್ಯ ನಿರ್ವಹಣಾ ಸ್ವಚ್ಛ ಸಂಕೀರ್ಣವನ್ನು ಉದ್ಘಾಟಿಸಿ ಮಾತನಾಡಿದ ಅವರು, ಗಾಂಧೀಜಿ ಅವರು ಸ್ವಚ್ಛ ಗ್ರಾಮಕ್ಕೆ ಪ್ರಮುಖ ಆದ್ಯತೆ ನೀಡಿದರು. ಆರೋಗ್ಯ ಕಾಪಾಡಿ ಕೊಳ್ಳಬೇಕಾದರೆ ವಾತಾವರಣವನ್ನು ಸ್ವಚ್ಛವಾಗಿಟ್ಟುಕೊಳ್ಳÀಬೇಕು. ಕಸ ಹಾಗೂ ತ್ಯಾಜ್ಯ ವಸ್ತುಗಳನ್ನು ಬೇಕಾಬಿಟ್ಟಿ ರಸ್ತೆಬದಿ ಪ್ರವಾಸಿಗರು ಎಸೆಯುತ್ತಿರುವ ಸಂಬAಧ ಗ್ರಾಮ ಪಂಚಾಯಿತಿ ಕ್ರಮಕೈಗೊಳ್ಳಬೇಕು. ಮನೆಯಿಂದಲೇ ಸ್ವಚ್ಛತೆ ಕಾಪಾಡಿಕೊಳ್ಳುವುದನ್ನು ಪ್ರತಿಯೊಬ್ಬರು ಮೈಗೂಡಿಸಿಕೊಳ್ಳ ಬೇಕು. ಮಡಿಕೇರಿ ವಿಧಾನಸಭಾ ಕ್ಷೇತ್ರದಲ್ಲಿ ೫ ಗ್ರಾಮ ಪಂಚಾಯಿತಿ ಗಳನ್ನು ಕೇಂದ್ರ ಹಾಗೂ ರಾಜ್ಯ ಸರಕಾರದ ಅಮೃತ ಯೋಜನೆಯಡಿಯಲ್ಲಿ ಸೇರ್ಪಡೆಗೊಳಿಸಲಾಗಿದ್ದು, ಅದರಲ್ಲಿ ಐಗೂರು ಗ್ರಾಮ ಪಂಚಾಯಿತಿ ಒಳಗೊಂಡಿದೆ ರಸ್ತೆ, ಕುಡಿಯುವ ನೀರು, ವಿದ್ಯುತ್, ಕೆರೆ ನಿರ್ಮಾಣ ಹಾಗೂ ಮೂಲಭೂತ ಸೌಕರ್ಯಗಳು ಗ್ರಾಮೀಣ ಪ್ರದೇಶಗಳಲ್ಲಿ ಈ ಯೋಜನೆಯಡಿಯಲ್ಲಿ ಅನುಷ್ಠಾನ ಗೊಳ್ಳಲಿದೆ ಗ್ರಾಮದ ಸರ್ವಾಂಗೀಣ ಅಭಿವೃದ್ಧಿ ಆಗಲಿದೆ ಎಂದರು.

ಕಾರ್ಯಕ್ರಮದಲ್ಲಿ ಐಗೂರು ಗ್ರಾ.ಪಂ.ಅಧ್ಯಕ್ಷೆ ಪಾರ್ವತಿ, ತಾಲೂಕು ಪಂಚಾಯಿತಿ ಪ್ರಭಾರ ಇಓ ಜಯಣ್ಣ, ಜಿ.ಪಂ.ಅಭಿಯAತರ ವಿರೇಂದ್ರ, ಸ್ವಚ್ಛ ಭಾರತ್ ಆಂದೋಲನದ ಜಿ.ಪಂ.ನೋಡೆಲ್ ಅಧಿಕಾರಿ ಪೆಮ್ಮಯ್ಯ, ಗ್ರಾ.ಪಂ. ಉಪಾಧ್ಯಕ್ಷೆ ಜಾನಕಿ ಮೇದಪ್ಪ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಯಾದವ್, ಸದಸ್ಯರುಗಳಾದ ವಿನು, ಪೂರ್ಣಿಮ, ಜೈನುದ್ದೀನ್, ಲಿಂಗೇರಿ ರಾಜೇಶ್, ಗೌರಮ್ಮ ಪವಿತ್ರ, ಸ್ತಿçÃಶಕ್ತಿ ಮತ್ತು ಸ್ವಸಹಾಯ ಸಂಘದ ಸದಸ್ಯರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.