ಕೂಡಿಗೆ, ಆ. ೩: ಗುಡ್ಡೆಹೊಸೂರಿನಿಂದ ಹಾರಂಗಿಗೆ ಅಕ್ರಮವಾಗಿ ಮದ್ಯ ಸಾಗಾಟ ಮಾಡುತ್ತಿದ್ದ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಕುಶಾಲನಗರ ಗ್ರಾಮಾಂತರ ಪೊಲೀಸರು ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಹಾರಂಗಿಯ ಗೋವಿಂದ ಬಂಧಿತ ಆರೋಪಿ ೪.೫ ಲೀಟರ್ ಮದ್ಯ ಸೇರಿದಂತೆ ಸಾಗಾಟಕ್ಕೆ ಬಳಸಿದ ಬೈಕ್ ಅನ್ನು ವಶಪಡಿಸಿಕೊಳ್ಳಲಾಗಿದೆ.

ಕಾರ್ಯಾಚರಣೆಯಲ್ಲಿ ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣಾಧಿಕಾರಿ ಶಿವಶಂಕರ್, ಸಿಬ್ಬಂದಿಗಳಾದ ಶ್ರೀನಿವಾಸ, ಶರತ್, ಚಾಲಕ ಯೋಗೇಶ್ ಪಾಲ್ಗೊಂಡಿದ್ದರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.