ಕಣಿವೆ, ಅ. ೩ : ಅರೆಭಾಷಿಕರ ಆಚಾರ ವಿಚಾರಗಳು ನಶಿಸಿಹೋಗ ದಂತೆ ಪ್ರತಿಯೊಬ್ಬರು ಎಚ್ಚರ ವಹಿಸಬೇಕು ಎಂದು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಲಕ್ಷಿö್ಮನಾರಾಯಣ ಕಜೆಗದ್ದೆ ಕರೆ ನೀಡಿದರು.
ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಕುಶಾಲನಗರದ ಗೌಡ ಸಮಾಜದ ಸಹಯೋಗದೊಂದಿಗೆ ಮೂರು ದಿನಗಳ ಕಾಲ ಹಮ್ಮಿಕೊಂಡಿರುವ ಅರೆಭಾಷೆ ಸಂಸ್ಕೃತಿ ಶಿಬಿರದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಅರೆಭಾಷೆ ಆಚಾರ - ವಿಚಾರಗಳನ್ನು ಇತರೆ ಭಾಷಿಕರಿಗೂ ಪರಿಚಯಿಸುವ ಕೆಲಸವಾಗಬೇಕಿದೆ ಎಂದರು.
ಮುಖ್ಯ ಅತಿಥಿಯಾಗಿದ್ದ ಸಾಹಿತಿ ಭಾರದ್ವಾಜ್ ಆನಂದ ತೀರ್ಥ ಮಾತನಾಡಿ, ನಮಗೆ ನಮ್ಮ ಪರಂಪರೆಯ ಬೇರುಗಳ ಬಗ್ಗೆ ಅರ್ಥ ವಾಗದೇ ಇದ್ದಲ್ಲಿ ಉಳಿಗಾಲವಿಲ್ಲ ಎಂದು ಎಚ್ಚರಿಸಿದರು.
ಅರೆಭಾಷೆ ಗೌಡ ಜನಾಂಗದಲ್ಲಿ ಪೂರ್ವಜರು ಕಂಡುಕೊAಡಿದ್ದ ಬಹುತೇಕ ಪದ್ಧತಿಗಳು ಅವನತಿಯತ್ತ ಸಾಗುತ್ತಿದೆ. ಇದು ಆತಂಕಕಾರಿ ಬೆಳವಣಿಗೆ ಎಂದು ನ್ಯಾಯವಾದಿ ತೆಕ್ಕಡೆ ನೇಮಿರಾಜ್ ಹೇಳಿದರು. ಶಿಬಿರದ ಸಂಪನ್ಮೂಲ ವ್ಯಕ್ತಿ ಕುಲ್ಲಚೆಟ್ಟಿ ಕಾಶಿ ಪೂವಯ್ಯ ದೀಪ ಬೆಳಗಿಸಿ ಪೂಜೆ ಸಲ್ಲಿಸಿದರು. ಕುಶಾಲನಗರ ಗೌಡ ಸಮಾಜದ ಅಧ್ಯಕ್ಷ ಕೂರನ ಪ್ರಕಾಶ್ ಕಾರ್ಯಕ್ರಮ ಉದ್ಘಾಟಿಸಿದರು.
ಸಂಪನ್ಮೂಲ ವ್ಯಕ್ತಿಯಾಗಿ ಕಡ್ಯದ ಪಾರ್ವತಿ, ಕುಶಾಲನಗರದ ಗೌಡ ಸಮಾಜ, ಗೌಡ ಯುವಕ ಸಂಘ, ಮಹಿಳಾ ಸ್ವಸಹಾಯ ಸಂಘ ಸೇರಿದಂತೆ ವಿವಿಧ ಸಂಘಟನೆಗಳ ಪ್ರಮುಖರು, ಸದಸ್ಯರು ಜನಾಂಗ ಬಾಂಧವರು ಹಾಜರಿದ್ದರು.