ಮಡಿಕೇರಿ, ಅ. ೨: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಮಡಿಕೇರಿ ವತಿಯಿಂದ ತಾ. ೪ ರಂದು (ನಾಳೆ) ಜಿಲ್ಲಾಮಟ್ಟದ ರಾಷ್ಟಿçÃಯ ಅಪ್ರೆಂಟಿಶಿಪ್ ಮೇಳ ಬೆಳಿಗ್ಗೆ ೧೦ ಗಂಟೆಗೆ ಸರಕಾರಿ ಐ.ಟಿ.ಐ. ಆವರಣದಲ್ಲಿ ನಡೆಯಲಿದೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಸಮಾಜ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ನೆರವೇರಿಸಲಿದ್ದಾರೆ.
ಅಧ್ಯಕ್ಷತೆಯನ್ನು ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್, ವೀರಾಜಪೇಟೆ ಕ್ಷೇತ್ರದ ಶಾಸಕ ಕೆ.ಜಿ. ಬೋಪಯ್ಯ, ಕೊಡಗು-ಮೈಸೂರು ಕ್ಷೇತ್ರದ ಸಂಸದ ಪ್ರತಾಪ್ ಸಿಂಹ, ವಿಧಾನ ಪರಿಷತ್ ಸದಸ್ಯರಾದ ಸುನಿಲ್ ಸುಬ್ರಮಣಿ, ವೀಣಾ ಅಚ್ಚಯ್ಯ ಹಾಗೂ ಕರ್ನಾಟಕ ರಾಜ್ಯ ಪಶ್ಚಿಮಘಟ್ಟಗಳ ಸಂರಕ್ಷಣಾ ಕಾರ್ಯಪಡೆ ಅಧ್ಯಕ್ಷ ಶಾಂತೆಯAಡ ರವಿ ಕುಶಾಲಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ.
ವಿಶೇಷ ಆಹ್ವಾನಿತರಾಗಿ ಜಿಲ್ಲಾಧಿಕಾರಿ ಚಾರುಲತಾ ಸೋಮಲ್, ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರಾ ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭಂವರ್ ಸಿಂಗ್ ಮೀನಾ ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.