ಡ್ರಗ್ಸ್ ಪ್ರಕರಣ: ಶಾರುಖ್ ಖಾನ್ ಪುತ್ರ ಸೇರಿ ಮೂವರು ಎನ್ಸಿಬಿ ವಶಕ್ಕೆ
ಮುಂಬೈ, ಅ. ೪: ಮುಂಬೈ ಕರಾವಳಿಯಲ್ಲಿ ಕ್ರೂಸ್ ಹಡಗಿನಲ್ಲಿ ನಿಷೇಧಿತ ಮಾದಕ ವಸ್ತುಗಳನ್ನು ವಶಪಡಿಸಿಕೊಂಡ ಪ್ರಕರಣಕ್ಕೆ ಸಂಬAಧಿಸಿದAತೆ ಬಂಧನಕ್ಕೊಳಗಾಗಿದ್ದ ಬಾಲಿವುಡ್ ನಟ ಶಾರುಖ್ ಖಾನ್ ಅವರ ಪುತ್ರ ಆರ್ಯನ್ ಖಾನ್, ಅರ್ಬಾಜ್ ಮರ್ಚೆಂಟ್ ಮತ್ತು ಮುನ್ಮುನ್ ಧಮೇಚಾ ಅವರನ್ನು ತಾ. ೭ ರವರೆಗೆ ಎನ್ಸಿಬಿ ವಶಕ್ಕೆ ನೀಡಲಾಗಿದೆ. ಡ್ರಗ್ಸ್ ಪ್ರಕರಣ ಸಂಬAಧ ಬಂಧಿತ ಎಲ್ಲಾ ಎಂಟು ಆರೋಪಿಗಳ ವೈದ್ಯಕೀಯ ಪರೀಕ್ಷೆಯ ನಂತರ ಸೋಮವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಆರೋಪಿಗಳ ವಿಚಾರಣೆ ನಡೆಸಿದ ಕೋರ್ಟ್, ಹೆಚ್ಚಿನ ವಿಚಾರಣೆಗಾಗಿ ಆರ್ಯನ್ ಖಾನ್, ಅರ್ಬಾಜ್ ಮರ್ಚೆಂಟ್ ಮತ್ತು ಮುನ್ಮುನ್ ಧಮೇಚಾ ಅವರನ್ನು ತಾ. ೭ ರವರೆಗೆ ಎನ್ಸಿಬಿ ವಶಕ್ಕೆ ನೀಡಿದೆ. ಶಾರುಖ್ ಪುತ್ರ ಆರ್ಯನ್ ಅವರ ಫೋನಿನಲ್ಲಿ ‘ಆಘಾತಕಾರಿ, ದೋಷಾರೋಪಣೆ ಮಾಡುವ ವಸ್ತು’ ಪತ್ತೆಯಾಗಿದೆ. ಹೆಚ್ಚಿನ ವಿಚಾರಣೆಗಾಗಿ ಆರ್ಯನ್ ಅವರನ್ನು ತಾ. ೧೧ ರವರೆಗೆ ತಮ್ಮ ವಶಕ್ಕೆ ನೀಡುವಂತೆ ಎನ್ ಸಿಬಿ ಮನವಿ ಮಾಡಿತ್ತು. ಎನ್ಸಿಬಿ ನಡೆಸಿದ ಪ್ರಾಥಮಿಕ ತನಿಖೆಯು ಆರ್ಯನ್ ಮೊಬೈಲ್ನಲ್ಲಿ ವಾಟ್ಸಾಪ್ ಚಾಟ್ಗಳ ರೂಪದಲ್ಲಿ ದೋಷಪೂರಿತ ವಸ್ತುಗಳನ್ನು ಹೊಂದಿದೆ ಎಂದು ಬಹಿರಂಗಪಡಿಸುತ್ತದೆ ಮತ್ತು ಹೀಗೆ ಬಂಧಿತ ಆರೋಪಿಗಳೊಂದಿಗೆ (ಆರ್ಯನ್ ಖಾನ್ ಮತ್ತು ಇನ್ನಿಬ್ಬರು) ನಿಯಮಿತವಾಗಿ ಪೂರೈಕೆದಾರರು ಮತ್ತು ಪೆಡ್ಲರ್ಗಳೊಂದಿಗಿನ ನಂಟನ್ನು ಇದು ಸ್ಪಷ್ಟವಾಗಿ ತೋರಿಸುತ್ತದೆ ಎಂದು ಎನ್ಸಿಬಿ ತನ್ನ ರಿಮಾಂಡ್ ನೋಟ್ನಲ್ಲಿ ಹೇಳಿದೆ.
ಪ್ರಿಯಾಂಕ ಗಾಂಧಿ ಬಂಧನ ಖಂಡಿಸಿ ಕೆಪಿಸಿಸಿ ಪಂಜಿನ ಮೆರವಣಿಗೆ
ಬೆಂಗಳೂರು, ಅ. ೪: ಉತ್ತರ ಪ್ರದೇಶ ಉಪ ಮುಖ್ಯಮಂತ್ರಿ ಕೇಶವ ಪ್ರಸಾದ್ ಮೌರ್ಯ ಅವರ ಭೇಟಿಯ ವಿರುದ್ಧ ರೈತರು ನಡೆಸುತ್ತಿದ್ದ ಪ್ರತಿಭಟನೆಯಲ್ಲಿ ಎಂಟು ಮಂದಿ ಮೃತಪಟ್ಟ ಲಖಿಂಪುರ-ಖೇರಿಗೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಭೇಟಿ ನೀಡಿ ಸಾಂತ್ವನ ಹೇಳಲು ಅವಕಾಶ ನೀಡದೇ ಬಂಧಿಸಿರುವ ಯೋಗಿ ಆದಿತ್ಯನಾಥ್ ನೇತೃತ್ವದ ಬಿಜೆಪಿ ಸರ್ಕಾರದ ವಿರುದ್ಧ ಪ್ರದೇಶ ಕಾಂಗ್ರೆಸ್ ಹಾಗೂ ಯುವ ಕಾಂಗ್ರೆಸ್ ನಿಂದ ನಗರದಲ್ಲಿಂದು ಪಂಜಿನ ಮೆರವಣಿಗೆ ನಡೆಯಿತು. ಬಿಜೆಪಿ ಸರ್ಕಾರದ ವಿರುದ್ಧ ಯುವ ಕಾರ್ಯಕರ್ತರು, ಮಹಿಳಾ ಕಾಂಗ್ರೆಸ್ ವಿಭಾಗದ ಪ್ರತಿನಿಧಿಗಳು ಒಳಗೊಂಡAತೆ ಹಲವು ಪ್ರಮುಖ ನಾಯಕರು, ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ಕೆಪಿಸಿಸಿಯಿಂದ ರಾಜಭವನದವರೆಗೆ ಆಯೋಜಿಸಲಾಗಿದ್ದ ಪಂಜಿನ ಮೆರವಣಿಗೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ರಾಮಲಿಂಗಾ ರೆಡ್ಡಿ, ಸಲೀಂ ಅಹಮದ್, ದೃವನಾರಾಯಣ್, ಕೆಪಿವೈಸಿಸಿ ಅಧ್ಯಕ್ಷ ಎಂ.ಎಸ್. ರಕ್ಷಾ ರಾಮಯ್ಯ ಮತ್ತಿತರರರು ಪಾಲ್ಗೊಂಡಿದ್ದರು. ಕಾಂಗ್ರೆಸ್ ನಾಯಕರು ಬಿಜೆಪಿ ವಿರುದ್ಧ ಭಿತ್ತಿಪತ್ತ ಪ್ರದರ್ಶಿಸಿ ಘೋಷಣೆ ಕೂಗಿದರು. ಬಳಿಕ ಇಂಡಿಯನ್ ಎಕ್ಸ್ಪ್ರೆಸ್ ಸರ್ಕಲ್ ಬಳಿ ಪೊಲೀಸರು ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್, ರಕ್ಷಾ ರಾಮಯ್ಯ ಮತ್ತಿತರರನ್ನು ಬಂಧಿಸಿ ಕರೆದೊಯ್ದರು. ಬಳಿಕ ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ ನೇತೃತ್ವದ ನಿಯೋಗ ರಾಜಭವನಕ್ಕೆ ತೆರಳಿ ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ನೇತೃತ್ವದಲ್ಲಿ ಸಚಿವರಾಗಿರುವ ಆರೋಪಿಗಳನ್ನು ಬಂಧಿಸಿ ಕ್ರಮ ಜರುಗಿರುಸುವಂತೆ ರಾಜ್ಯಪಾಲರಿಗೆ ಮನವಿ ಸಲ್ಲಿಸಿತು. ದೇಶ ೭೫ನೇ ಸ್ವಾತಂತ್ರ್ಯೋತ್ಸವ ಆಚರಿಸುತ್ತಿರುವ ಸಂದರ್ಭದಲ್ಲಿ ಕ್ರಾಂತಿಯ ಸಂಕೇತವಾದ ಪಂಜು ಹಿಡಿದಿದ್ದ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ವಿರುದ್ಧ ಘೋಷಣೆ ಮೊಳಗಿಸಿದರು. ರೈತರ ಮೇಲೆ ಕಾರು ಹರಿಸಿ ಅವರ ಸಾವಿಗೆ ಕಾರಣವಾದ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾ ಅವರ ವಿರುದ್ಧ ಕಠಿಣ ಕ್ರಮಗಳಡಿ ಪ್ರಕರಣ ದಾಖಲಿಸಿ ಬಂಧಿಸಬೇಕು ಎಂದು ಆಗ್ರಹಿಸಿದರು.
ರಾಜ್ಯದ ರೈತರ ಆದಾಯ ದ್ವಿಗುಣಗೊಳಿಸಲು ಉನ್ನತ ಮಟ್ಟದ ಸಮಿತಿ
ಬೆಂಗಳೂರು, ಅ. ೪: ೨೦೨೩ರ ವೇಳೆಗೆ ರಾಜ್ಯದಲ್ಲಿ ರೈತರ ಆದಾಯ ದ್ವಿಗುಣಗೊಳಿಸಲು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು ಮತ್ತು ಅಭಿವೃದ್ಧಿ ಆಯುಕ್ತರ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಮಿತಿಯನ್ನು ರಚಿಸಲಾಗಿದೆ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಹೇಳಿದ್ದಾರೆ. ಬೆಂಗಳೂರಿನ ಜಿಕೆವಿಕೆಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತರ ಆದಾಯ ದ್ವಿಗುಣಗೊಳಿಸುವ ಕುರಿತು ಸಮಗ್ರ ಕೃಷಿ ಪದ್ಧತಿಯ ವಿಸ್ತರಣೆ ಹಾಗೂ ಜನಪ್ರಿಯತ ಕಾರ್ಯಕ್ರಮವನ್ನು ಅಳವಡಿಸಲು ಆರ್ಕೆವಿವೈ ಯೋಜನೆಯಡಿ ರೂ. ೭೨೩೪ ಕೋಟಿ ಅನುದಾನವನ್ನು ಒದಗಿಸಲಾಗಿದ್ದು ಮುಂಬರುವ ೨ ವರ್ಷಗಳಲ್ಲಿ ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಸಮಗ್ರ ಕೃಷಿ ಪದ್ಧತಿಯ ಮಾದರಿಯನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಈ ಬಗ್ಗೆ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ರೈತರ ಆದಾಯ ದ್ವಿಗುಣಗೊಳಿಸುವ ಕುರಿತು ನಡೆದ ಸಭೆಯಲ್ಲಿ ಚರ್ಚಿಸಲಾಗಿದೆ ಎಂದರು. ೨೦೨೧ ಏಪ್ರಿಲ್ ೧ ರಿಂದ ಸೆ. ೩೦ ರವರೆಗೆ ಕೃಷಿ ವಿಚಕ್ಷಣಾದಳ ೧೩೯೪ ಕ್ವಿಂಟಾಲ್ ಪ್ರಮಾಣದ ರೂ. ೪೧೫.೭೮ ಲಕ್ಷ ಮೌಲ್ಯದ ಬಿತ್ತನೆ ಬೀಜಗಳನ್ನು ಜಪ್ತಿ ಮಾಡಿದ್ದು, ೮೦೩೯ ಟನ್ ಪ್ರಮಾಣದ ರೂ. ೧೪೫.೩೨ ಲಕ್ಷ ಮೌಲ್ಯದ ರಸಗೊಬ್ಬರಗಳನ್ನು ೫೭೨೪ ಮತ್ತು ೪೫೯೨ ಕೆ.ಜಿ. ಪ್ರಮಾಣದ ರೂ. ೬೪೦ ಲಕ್ಷ ಮೌಲ್ಯದ ಕೀಟನಾಶಕಗಳನ್ನು ಜಪ್ತಿ ಮಾಡಲಾಗಿದೆ. ಒಟ್ಟಾರೆಯಾಗಿ ೨೦೨೧-೨೨ನೇ ಸಾಲಿನಲ್ಲಿ ರೂ. ೬೨೬೧೫ ಲಕ್ಷ ಮೌಲ್ಯದ ವಿವಿಧ ಬಿತ್ತನೆ ಬೀಜ ರಸಗೊಬ್ಬರ ಹಾಗೂ ಕೀಟನಾಶಕಗಳನ್ನು ವಿವಿಧ ಜಿಲ್ಲೆಗಳಲ್ಲಿ ಒಪ್ತಿ ಮಾಡಲಾಗಿದೆ ಎಂದು ತಿಳಿಸಿದರು.
ಡಿಸೆಂಬರ್ನಲ್ಲಿ ಬೆಳಗಾವಿ ಅಧಿವೇಶನ
ಬೆಂಗಳೂರು, ಅ. ೪: ಕೊನೆಗೂ ರಾಜ್ಯ ಸರ್ಕಾರ ಬೆಳಗಾವಿ ಅಧಿವೇಶನ ನಡೆಸಲು ಮನಸು ತೋರಿದ್ದು ಇದೇ ಡಿಸೆಂಬರ್ನಲ್ಲಿ ಈ ಬಾರಿಯ ಚಳಿಗಾಲ ಅಧಿವೇಶನ ನಡೆಯಲಿದೆ. ಈ ಬಗ್ಗೆ ವಿಧಾನ ಸೌಧದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಸ್ಪಷ್ಟಪಡಿಸಿ, ಡಿಸೆಂಬರ್ ತಿಂಗಳಿನಲ್ಲಿ ಅಧಿವೇಶನವನ್ನು ಬೆಳಗಾವಿಯಲ್ಲಿ ನಡೆಸಲು ಅಭಿಪ್ರಾಯ ವ್ಯಕ್ತವಾಗಿದೆ. ಸರ್ಕಾರದಿಂದಲೂ ಕೂಡ ಬೆಳಗಾವಿಯಲ್ಲಿ ಅಧಿವೇಶನ ನಡೆಸಲು ಚಿಂತನೆ ಇದೆ ಎಂದರು. ಕ್ಷೇತ್ರದ ಜನರು ತಮ್ಮ ಸಮಸ್ಯೆಗಳನ್ನು ಸದನದಲ್ಲಿ ಶಾಸಕರು ವ್ಯಕ್ತಪಡಿಸಬೇಕೆಂದು ಚುನಾಯಿಸಿ ಕಳುಹಿಸಿದ್ದಾರೆ. ಕಾಂಗ್ರೆಸ್ ನವರು ಮುಕ್ತವಾಗಿ ಎಲ್ಲ ಅವಕಾಶ ಬಳಸಿಕೊಂಡಿದ್ದಾರೆ. ಒಂದು ಬಾರಿಯೂ ಕೂಡ ಸದನವನ್ನು ಐದುಹತ್ತು ನಿಮಿಷ ಮುಂದೂಡುವ ಪ್ರಸಂಗ ಬರಲಿಲ್ಲ. ಸದನದ ಸಮಯ ವ್ಯರ್ಥವಾಗುವುದಕ್ಕೆ ಯಾವ ಸದಸ್ಯರೂ ಬಿಡಲಿಲ್ಲ. ಇದು ಬಹಳ ಒಳ್ಳೆಯ ಬೆಳವಣಿಗೆ. ಇಂತಹ ಬೆಳವಣಿಗೆ ಸಭಾಧ್ಯಕ್ಷನಾಗಿರುವುದಕ್ಕೆ ಸಂತೋಷವಾಗಿದೆ ಎಂದು ಸ್ಪೀಕರ್ ಹೇಳಿದರು.
ಎಸಿ ರೂಮ್ನಲ್ಲಿ ಕುಳಿತು ಜನರ ಸಮಸ್ಯೆ ಪರಿಹರಿಸುವುದು ಅಸಾಧ್ಯ
ಬೆಂಗಳೂರು, ಅ. ೪: ಜನಪ್ರತಿನಿಧಿಗಳು ಎಸಿ ಕೊಠಡಿಯಲ್ಲಿ ಕುಳಿತು ನಕ್ಷೆ ನೋಡಿ ಜನರ ಸಮಸ್ಯೆ ಪರಿಹರಿಸುತ್ತೇವೆನ್ನುವುದು ಅಸಾಧ್ಯ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದು ಬೆಂಗಳೂರಿನ ರಾಜಾಜಿನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಶಿವನಹಳ್ಳಿ ಬಳಿ ನಿರ್ಮಿಸಲಾಗಿರುವ ಇಂಟಿಗ್ರೇಟೆಡ್ ರಸ್ತೆ ಮೇಲ್ಸೇತುವೆ ಲೋಕಾರ್ಪಣೆಯನ್ನು ಗೋಪೂಜೆ ಮಾಡುವ ಮೂಲಕ ನೆರವೇರಿಸಿದರು. ವೇದಿಕೆ ಕಾರ್ಯಕ್ರಮದಲ್ಲಿ ಬೆಂಗಳೂರಿನಲ್ಲಾದ ಮಳೆ ಅನಾಹುತ ಸಂಬAಧ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಸಿಎಂ, ಮಳೆ ಅನಾಹುತ ಬಗ್ಗೆ ನಾನೇ ಖುದ್ದು ಗಮನಿಸುತ್ತಿದ್ದು, ಬಿಬಿಎಂಪಿ ಕಮಿಷನರ್ ಜೊತೆ ನಿರಂತರ ಸಂಪರ್ಕದಲ್ಲಿದ್ದೇನೆ. ಆದಷ್ಟು ಬೇಗ ನೀರನ್ನು ಹೊರಗೆ ತೆಗೆದು ವಾಹನ ಚಾಲನೆಗೆ ಸುಗಮ ಅವಕಾಶ ಮಾಡಿಕೊಡಲಾಗುವುದು. ಎಲ್ಲವನ್ನು ಪರಿವೀಕ್ಷಣೆ ಮಾಡಲಾಗುವುದು. ಕೆಲವು ಗಿಡಮರಗಳು ಬಿದ್ದು ವಾಹನಗಳು ಜಖಂ ಆಗಿವೆ. ಹಸುಗಳಿಗೆ ತೊಂದರೆಯಾಗಿವೆ. ಹಳೆ ಕಟ್ಟಡಗಳಿಗೆ ತೊಂದರೆಯಾಗಿವೆ. ವಿಳಂಭ ಮಾಡದೇ ಆದಷ್ಟು ಬೇಗ ಸರಿಪಡಿಸಲಾಗುವುದು. ಜನರ ಸಮಸ್ಯೆಗಳನ್ನು ಅರ್ಥ ಮಾಡಿಕೊಂಡು ನಾವು ಆಡಳಿತ ಮಾಡಬೇಕು. ಸಮಸ್ಯೆಗಳ ಬಗ್ಗೆ ಚರ್ಚೆ ಮಾಡೋದು ಸುಲಭ, ಆದರೆ ಸಮಸ್ಯೆ ಬಗೆಹರಿಸುವುದು ಪ್ರಮುಖ ಆಗುತ್ತದೆ. ಸರ್ಕಾರ ಜನರ ಬಳಿಯೇ ಹೋಗಿ ಅವರ ಸಮಸ್ಯೆ ಕೇಳಬೇಕು. ಎಲ್ಲೋ ಎಸಿ ರೂಮ್ನಲ್ಲಿ ಕೂತ್ಕೊಂಡು, ನಕ್ಷೆ ನೋಡಿ ಜನರ ಸಮಸ್ಯೆ ಬಗೆಹರಿಸುತ್ತೇನೆ ಎಂದರೆ ಅದು ಆಗುವುದಿಲ್ಲ. ನನಗೆ ಹಲವಾರು ಕಲ್ಪನೆ ಇದೆ. ಯೋಜನೆ ಬದ್ದ ಬೆಂಗಳೂರನ್ನು ನಾವು ನಿರ್ಮಿಸುತ್ತೇವೆ. ಎಲ್ಲಿ ಒಳ್ಳೆಯದು ಇದೆಯೋ ಅದನ್ನು ನೋಡಿ, ಇಲ್ಲಿ ಮಾಡುತ್ತೇವೆ ಎಂದರು.