ಕುಶಾಲನಗರ, ಅ.೪: ಕೊಡಗು ಅರಣ್ಯ ವೃತ್ತದ ಮಡಿಕೇರಿ ವನ್ಯಜೀವಿ ವಿಭಾಗ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ, ರಾಷ್ಟಿçÃಯ ಹಸಿರು ಪಡೆ ಇಕೋ-ಕ್ಲಬ್ ವತಿಯಿಂದ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಇವರ ಸಹಯೋಗದಲ್ಲಿ ಕುಶಾಲನಗರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ. ನಿಸರ್ಗ ಇಕೋ ಕ್ಲಬ್ ಆಶ್ರಯದಲ್ಲಿ 'ನಮ್ಮ ನಡೆ ವನ್ಯಜೀವಿಗಳ ಸಂರಕ್ಷಣೆ ಕಡೆಗೆ' ಎಂಬ ಘೋಷಣೆಯಡಿ ವನ್ಯಜೀವಿ ಸಪ್ತಾಹ ಅಂಗವಾಗಿ ಪರಿಸರ ಜಾಗೃತಿ ವನ್ಯಜೀವಿಗಳ ಸಂರಕ್ಷಣೆ ಕುರಿತಂತೆ ಹಮ್ಮಿಕೊಂಡಿರುವ ಅಂಚೆ ಕಾರ್ಡ್ ಅಭಿಯಾನಕ್ಕೆ ಚಾಲನೆ ನೀಡಲಾಯಿತು.
ವನ್ಯಜೀವಿಗಳ ಸಂರಕ್ಷಣೆಯ ಮಹತ್ವದೊಂದಿಗೆ ಪರಿಸರ ಪ್ರತಿಜ್ಞಾ ವಿಧಿ ಬೋಧಿಸಿದ ರಾಷ್ಟಿçÃಯ ಹಸಿರು ಪಡೆಯ ಜಿಲ್ಲಾ ನೋಡೆಲ್ ಅಧಿಕಾರಿ ಟಿ.ಜಿ.ಪ್ರೇಮಕುಮಾರ್ ಮಾತನಾಡಿ, ಪರಿಸರ ಸಮತೋಲನ ಕಾಪಾಡಲು ಅರಣ್ಯ ಮತ್ತು ವನ್ಯಜೀವಿಗಳ ಪಾತ್ರ ಮಹತ್ವವಾಗಿದೆ ಎಂದರು.
ಕಾಲೇಜಿನ ಉಪ ಪ್ರಾಂಶುಪಾಲ ವೈ.ಎಸ್. ಪರಮೇಶ್ವರಪ್ಪ ಮಾತನಾಡಿ, ವನ್ಯಜೀವಿ ಸಪ್ತಾಹದ ಮೂಲಕ ಜನರಲ್ಲಿ ವನ್ಯಜೀವಿಗಳ ಸಂರಕ್ಷಣೆ ಕುರಿತು ಜನಜಾಗೃತಿ ಮೂಡಿಸಲು ಸಾಧ್ಯ. ಶಾಲೆಯ ೩೧೦ ವಿದ್ಯಾರ್ಥಿ ಗಳಿಂದ ಅಂಚೆ ಕಾರ್ಡ್ ಮೂಲಕ ವನ್ಯಜೀವಿಗಳ ಚಿತ್ರ ರಚನೆ ಮತ್ತು ಸಂದೇಶಗಳನ್ನು ಬರೆದು ಅಂಚೆ ಕಾರ್ಡ್ ಅಭಿಯಾನ ಕೈಗೊಳ್ಳಲಾಗು ತ್ತಿದೆ ಎಂದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಚಿತ್ರಕಲಾ ಶಿಕ್ಷಕ ಉ.ರಾ.ನಾಗೇಶ್, ವಿದ್ಯಾರ್ಥಿಗಳು ವನ್ಯಜೀವಿಗಳ ಸಂರಕ್ಷಣೆ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದರು.
ತಾಲೂಕು ದೈಹಿಕ ಶಿಕ್ಷಣಾಧಿಕಾರಿ ಡಾ. ಸದಾಶಿವಯ್ಯ ಎಸ್.ಪಲ್ಲೇದ್, ಇಕೋ ಕ್ಲಬ್ನ ಉಸ್ತುವಾರಿ ಶಿಕ್ಷಕಿ ಕೆ.ಎಸ್.ಅನಿತಾ, ಶಿಕ್ಷಕರಾದ ಎ.ಸಿ.ಮಂಜುನಾಥ್, ಟಿ.ಆರ್.ದಿನೇಶ್, ಹೇಮಲತಾ, ಎಂ.ಎಸ್.ಮಹೇAದ್ರ ಸುಜಾತ,ಸಹ ಶಿಕ್ಷಕರು ಇದ್ದರು. ಶಾಲಾ ವಿದ್ಯಾರ್ಥಿಗಳು ವನ್ಯಜೀವಿಗಳ ಸಂರಕ್ಷಣೆ ಕುರಿತಂತೆ ವಿವಿಧ ಘೋಷಣೆಗಳುಳ್ಳ ಭಿತ್ತಿಫಲಕಗಳನ್ನು ಹಿಡಿದು ಮುಂದಿನ ಪೀಳಿಗೆಗೂ ವನ್ಯಜೀವಿ ಹಾಗೂ ಕಾಡನ್ನು ಉಳಿಸಿ ಎಂಬ ಸಂದೇಶ ಸಾರಿದರು. ನಂತರ ವಿದ್ಯಾರ್ಥಿಗಳಿಗೆ ವನ್ಯಜೀವಿ ಸಂರಕ್ಷಣೆ ಕುರಿತಾಗಿ ಚಿತ್ರಕಲೆ ಸ್ಪರ್ಧೆ, ಪ್ರಬಂಧ, ಭಾಷಣ, ರಸಪ್ರಶ್ನೆ ಸ್ಪರ್ಧೆಗಳನ್ನು ನಡೆಸಲಾಯಿತು.