ಮಡಿಕೇರಿ, ಅ. ೪ : ಜಿಲ್ಲೆಯಲ್ಲಿ ಸೋಮವಾರ ೨೪ ಹೊಸ ಕೋವಿಡ್-೧೯ ಪ್ರಕರಣಗಳು ದೃಢಪಟ್ಟಿದೆ. ಮಡಿಕೇರಿ ತಾಲೂಕಿನಲ್ಲಿ ೭, ಸೋಮವಾರಪೇಟೆ ತಾಲೂಕಿನಲ್ಲಿ ೧೦, ವೀರಾಜಪೇಟೆ ತಾಲೂಕಿನಲ್ಲಿ ೭ ಹೊಸ ಕೋವಿಡ್-೧೯ ಪ್ರಕರಣಗಳು ಕಂಡುಬAದಿವೆ.
ಜಿಲ್ಲೆಯಲ್ಲಿನ ಒಟ್ಟು ಕೋವಿಡ್-೧೯ ಪ್ರಕರಣಗಳ ಸಂಖ್ಯೆ ೩೫೦೪೯ ಆಗಿದ್ದು, ಕಳೆದ ೨೪ ಗಂಟೆಗಳ ಅವಧಿಯಲ್ಲಿ ೨೦ ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಒಟ್ಟು ೩೪,೨೪೫ ಮಂದಿ ಗುಣಮುಖರಾಗಿದ್ದಾರೆ. ೩೭೮ ಸಕ್ರಿಯ ಪ್ರಕರಣಗಳಿದ್ದು, ಕಳೆದ ೨೪ ಗಂಟೆಗಳ ಅವಧಿಯಲ್ಲಿ ಸಾವು ಉಂಟಾಗಿಲ್ಲ, ಇದುವರೆಗೆ ಒಟ್ಟು ೪೨೬ ಮರಣ ಪ್ರಕರಣಗಳು ವರದಿಯಾಗಿದೆ. ಕಂಟೈನ್‌ಮೆAಟ್ ವಲಯಗಳ ಸಂಖ್ಯೆ ೫೮ ಆಗಿದೆ. ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ದರ ಶೇ.೩.೬೭ ಆಗಿದೆ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ತಿಳಿಸಿದ್ದಾರೆ.