ಕೂಡಿಗೆ, ಆ.೪: ಇಲ್ಲಿಗೆ ಸಮೀಪದ ಶಿರಂಗಾಲ ಗ್ರಾಮ ಪಂಚಾಯಿತಿಯು ಅಮೃತ ಗ್ರಾಮ ಯೋಜನೆಗೆ ಅಯ್ಕೆಯಾಗಿರುವ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯಿತಿ ಮಟ್ಟದ ವಿಶೇಷ ಗ್ರಾಮ ಸಭೆಯು ಅಧ್ಯಕ್ಷೆ ಭಾಗೀರಥಿ ಅಧ್ಯಕ್ಷತೆಯಲ್ಲಿ ನಡೆಯಿತು.
ಅಮೃತ ಗ್ರಾಮ ಪಂಚಾಯಿತಿ ಯೋಜನೆಯ ನೋಡೆಲ್ ಅಧಿಕಾರಿಯಾಗಿ ಆಗಮಿಸಿದ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಲಕ್ಷಿö್ಮ ಅವರು ಯೋಜನೆಯ ಮುಖೇನ ಕೈಗೊಳ್ಳುವ ಕಾಮಗಾರಿಗಳ ಬಗ್ಗೆ ಸವಿಸ್ತಾರವಾಗಿ ತಿಳಿಸಿದರು. ಅಲ್ಲದೆ ಯೋಜನೆಯು ಫಲಕಾರಿ ಯಾಗಬೇಕಾದರೆ ಜನಪ್ರತಿನಿಧಿಗಳು, ಮತ್ತು ಆಡಳಿತ ಮಂಡಳಿ, ಗ್ರಾಮಸ್ಥರ ಸಹಕಾರ ಮುಖ್ಯವಾಗಿರುತ್ತದೆ ಎಂದು ತಿಳಿಸಿದರು.
ಅಮೃತ ಯೋಜನೆಯ ಅಡಿಯಲ್ಲಿ ಶುಧ್ಧ ಕುಡಿಯುವ ನೀರಿನ ಯೋಜನೆ, ಇಂಗು ಗುಂಡಿಗಳ ನಿರ್ಮಾಣ, ಜಲಜೀವನ ಮಿಷನ್ ವತಿಯಿಂದ ಕಾಮಗಾರಿ ಕೈಗೊಳ್ಳುವ ಬಗ್ಗೆ ಉದ್ಯಾನವನ ನಿರ್ಮಾಣ ಶಾಲಾ ಕಾಲೇಜುಗಳ ಅಟದ ಮೈದಾನ, ಘನ ತ್ಯಾಜ್ಯ ನಿರ್ವಹಣೆ ಘಟಕ ಸ್ಥಾಪನೆಗೆ ಅನುಕೂಲವಾಗುವ ಅನೇಕ ಕಾಮಗಾರಿ ಗಳ ಬಗ್ಗೆ ಚರ್ಚೆಗಳು ನಡೆದವು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಎನ್.ಎನ್. ಧರ್ಮಪ್ಪ ಅಭಿವೃದ್ಧಿ ಅಧಿಕಾರಿ ಹರೀಶ್ ಸೇರಿದಂತೆ ಸರ್ವ ಸದಸ್ಯರು, ಗ್ರಾಮಸ್ಥರು ಹಾಜರಿದ್ದರು.