ಭಾಗಮಂಡಲ, ಅ. ೫: ಸೇವಾ ಮತ್ತು ಸಮರ್ಪಣಾ ಅಭಿಯಾನದ ಅಂಗವಾಗಿ ಕೊಡಗು ಜಿಲ್ಲಾ ಬಿಜೆಪಿ ಯುವ ಮೋರ್ಚಾ ಹಾಗೂ ರೈತ ಮೋರ್ಚಾದ ವತಿಯಿಂದ ತಲಕಾವೇರಿಯಿಂದ ಭಾಗಮಂಡಲದವರೆಗೆ ಸ್ವಚ್ಛತಾ ಅಭಿಯಾನವನ್ನು ಇಂದು ಹಮ್ಮಿಕೊಳ್ಳಲಾಯಿತು.
ಯುವ ಮೋರ್ಚಾ ಕಾರ್ಯಕರ್ತರು ರಸ್ತೆ ಬದಿಗಳ ಹಾಗೂ ದೇವಾಲಯದ ಸುತ್ತಮುತ್ತ ಸ್ವಚ್ಚತಾ ಕಾರ್ಯವನ್ನು ಕೈಗೊಂಡರು. ಬಿಜೆಪಿ ಕೊಡಗು ಜಿಲ್ಲಾ ಘಟಕದ ಅಧ್ಯಕ್ಷ ರಾಬಿನ್ ದೇವಯ್ಯ ,ರೈತ ಮೋರ್ಚಾದ ರಾಜ್ಯ ಉಪಾಧ್ಯಕ್ಷ ತೀರ್ಥರಾಮ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ ನೀಡಿದರು. ರೈತಮೋರ್ಚಾ ಕೊಡಗು ಜಿಲ್ಲಾ ಘಟಕದ ಅಧ್ಯಕ್ಷ ನಾಗೇಶ್ ಕುಂದಲ್ಪಾಡಿ ಮಾತನಾಡಿ ಪ್ರಧಾನಿ ನರೇಂದ್ರ ಮೋದಿಯವರ ಸ್ವಚ್ಛ ಭಾರತ ಅಭಿಯಾನ ವನ್ನು ಹಮ್ಮಿಕೊಳ್ಳಲಾಗಿದೆ, ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು ಎಂದರು. ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ದರ್ಶನ್ ಸ್ವಚ್ಛತಾ ಅಭಿಯಾನದ ನೇತೃತ್ವ ವಹಿಸಿದ್ದರು. ತಾಲೂಕು ಬಿಜೆಪಿ ಅಧ್ಯಕ್ಷ ಕಾಂಗಿರ ಸತೀಶ್, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ದರ್ಶನ್ ಜೋಯಪ್ಪ, ರಾಜ್ಯ ಕೃಷಿ ಮೋರ್ಚಾ ಸದಸ್ಯೆ ಯಮುನಾ ಚಂಗಪ್ಪ, ಭಾಗಮಂಡಲ ಶಕ್ತಿಕೇಂದ್ರ ಅಧ್ಯಕ್ಷ ಪಿ.ಎಂ. ರಾಜೀವ್, ಜಿಲ್ಲಾ ಮತ್ತು ತಾಲೂಕು ಯುವ ಮೋರ್ಚಾ ಹಾಗೂ ಬಿಜೆಪಿ ಕಾರ್ಯಕರ್ತರು ಅಧಿಕ ಸಂಖ್ಯೆಯಲ್ಲಿ ಭಾಗವಹಿಸಿದ್ದರು.