ಮಡಿಕೇರಿ, ಅ. ೪ : ೨೦೨೦-೨೧ ನೇ ಸಾಲಿನಲ್ಲಿ ಸಿಬಿಎಸ್‌ಸಿ, ಐಸಿಎಸ್‌ಸಿ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲಿ ಶೇ.೬೦, ಶೇ.೭೪.೯೯ ಅಂಕ ಪಡೆದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ ೭ ಸಾವಿರ ರೂ. ಮತ್ತು ಶೇ.೭೫ ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ೧೫ ಸಾವಿರ ರೂ. ಪ್ರೋತ್ಸಾಹಧನ ಮಂಜೂರು ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

೨೦೨೦-೨೧ ನೇ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ಸಿಬಿಎಸ್ಸಿ, ಐಸಿಎಸ್‌ಸಿ ವಾರ್ಷಿಕ ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿ ಮತ್ತು ಪ. ವರ್ಗದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ಮಂಜೂರು ಮಾಡಲು ವೆಬ್‌ಸೈಟ್ ತಿತಿತಿ.sತಿ.ಞಚಿಡಿ.ಟಿiಛಿ.iಟಿ ತಂತ್ರಾAಶದಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ಸಿಬಿಎಸ್‌ಸಿ, ಐಸಿಎಸ್‌ಸಿ ವಾರ್ಷಿಕ ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲಿ, ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿ ಶೇ.೬೦ ಕ್ಕಿಂತ ಹೆಚ್ಚು ಅಂಕಗಳಿಸಿರಬೇಕು.

ಆನ್‌ಲೈನ್ ಮೂಲಕ ಸಲ್ಲಿಸಲಾದ ಅರ್ಜಿಯೊಂದಿಗೆ ವ್ಯಾಸಂಗ ಮಾಡಿದ ಶಾಲೆಯಿಂದ ದೃಢೀಕರಿಸಿದ ಅಂಕಪಟ್ಟಿ, ಜಾತಿ ದೃಢೀಕರಣ ಪ್ರಮಾಣ ಪತ್ರ, ವಿದ್ಯಾರ್ಥಿಯ ಬ್ಯಾಂಕ್ ಪಾಸ್ ಪುಸ್ತಕದ ಜೆರಾಕ್ಸ್ ಪ್ರತಿ, ಆಧಾರ್ ಕಾರ್ಡ್ ಜೆರಾಕ್ಸ್ ಪ್ರತಿ ದಾಖಲಾತಿಗಳನ್ನು ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಸಹಾಯಕ ನಿರ್ದೇಶಕರು (ಗ್ರೇಡ್-೧) ಸಮಾಜ ಕಲ್ಯಾಣ ಇಲಾಖೆ, ಮಡಿಕೇರಿ-ದೂ.ಸಂ.೯೪೮೦೮೪೩೧೫೫ ನ್ನು ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು (ಗ್ರೇಡ್-೧) ತಿಳಿಸಿದ್ದಾರೆ.