ಮಡಿಕೇರಿ, ಅ. ೬: ಕೊಡಗು ಪ್ರೆಸ್ ಕ್ಲಬ್ ಆಶ್ರಯದಲ್ಲಿ ನಾಡಹಬ್ಬ ದಸರಾ ಪ್ರಯುಕ್ತ ತಾ.೧೦ ರಂದು ಮಡಿಕೇರಿಯ ಪತ್ರಿಕಾ ಭವನದಲ್ಲಿ ಒಳಾಂಗಣ ಕ್ರೀಡಾಕೂಟ ಆಯೋಜಿಸಲಾಗಿದೆ ಎಂದು ಕ್ರೀಡಾಕೂಟ ಸಂಚಾಲಕ ನವೀನ್ ಡಿಸೋಜ ಹೇಳಿದ್ದಾರೆ.
ಅಂದು ಬೆಳಗ್ಗೆ ೧೧.೩೦ ಗಂಟೆಗೆ ಆಯೋಜಿಸಿರುವ ಸಭಾ ಕಾರ್ಯಕ್ರಮವನ್ನು ಅಂತಾರಾಷ್ಟಿçÃಯ ರಗ್ಬಿ ಆಟಗಾರರಾಗಿರುವ ವೀರಾಜಪೇಟೆಯ ಪ್ರಗತಿ ವಿದ್ಯಾಸಂಸ್ಥೆ ಮುಖ್ಯಸ್ಥ ಮಾದಂಡ ತಿಮ್ಮಯ್ಯ ಉದ್ಘಾಟಿಸಲಿದ್ದಾರೆ.
ಕೊಡಗು ಪ್ರೆಸ್ಕ್ಲಬ್ ಅಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ ಅಧ್ಯಕ್ಷತೆಯಲ್ಲಿ ಆಯೋಜಿಸಿರುವ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕೊಡಗು ಜಿಲ್ಲಾ ಪತ್ರಕರ್ತರ ಸಂಘ ಅಧ್ಯಕ್ಷೆ ಬಿ.ಆರ್. ಸವಿತಾ ರೈ, ಕೊಡಗು ಜಿಲ್ಲಾ ಪತ್ರಕರ್ತರ ಸಂಘದ ಕ್ರೀಡಾ ಸಮಿತಿ ಸಂಚಾಲಕ ಬಿ.ಪಿ. ಪ್ರದೀಪ್ ಪಾಲ್ಗೊಳ್ಳಲಿದ್ದಾರೆಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟೇಬಲ್ ಟೆನ್ನಿಸ್ ಸಿಂಗಲ್ಸ್ ವಿಭಾಗದಲ್ಲಿ ೧೩, ಡಬಲ್ಸ್ನಲ್ಲಿ ೫, ಕೇರಂ ಸಿಂಗಲ್ಸ್ ವಿಭಾಗದಲ್ಲಿ ೨೩, ಡಬಲ್ಸ್ ವಿಭಾಗದಲ್ಲಿ ೧೨ ಹಾಗೂ ಚೆಸ್ ಸ್ಪರ್ಧೆಯಲ್ಲಿ ೬ ಆಟಗಾರರು ಹೆಸರು ನೋಂದಾಯಿಸಿಕೊAಡಿದ್ದಾರೆ.