ಮಡಿಕೇರಿ, ಅ. ೫ : ತಾ. ೧೭ರಂದು ಜರುಗುವ ಪವಿತ್ರ ಕಾವೇರಿ ತೀರ್ಥೋದ್ಭವ ವೀಕ್ಷಣೆಗೆ ತಲಕಾವೇರಿ ಕ್ಷೇತ್ರಕ್ಕೆ ಭಕ್ತರಿಗೆ ಮುಕ್ತ ಅವಕಾಶ ಕಲ್ಪಿಸಲಾಗುವುದೆಂದು ಶಾಸಕ ಕೆ.ಜಿ. ಬೋಪಯ್ಯ ತಿಳಿಸಿದ್ದಾರೆ.
ಜಿಲ್ಲೆಯ ಅಭಿವೃದ್ಧಿ ವಿಚಾರಕ್ಕೆ ಸಂಬAಧಿಸಿದAತೆ ಬೆಂಗಳೂರಿನ ಲ್ಲಿಂದು ರಾಜ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿದ ಸಂದರ್ಭ ತೀರ್ಥೋದ್ಭವ ಸಂದರ್ಭದಲ್ಲಿ ಭಕ್ತರಿಗೆ ಭಾಗವಹಿಸಲು ಕೋವಿಡ್ ನಿಯಮದಂತೆ ಮುಕ್ತ ಅವಕಾಶ ನೀಡುವಂತೆ ಬೇಡಿಕೆ ಸಲ್ಲಿಸಲಾಗಿದೆ. ಸಮ್ಮತಿಸಿರುವ ಮುಖ್ಯಮಂತ್ರಿಗಳು ಉಸ್ತುವಾರಿ ಸಚಿವರ ಸಮ್ಮುಖದಲ್ಲಿ ತೀರ್ಮಾನ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಹಾಗಾಗಿ ಈ ಬಾರಿ ಅವಕಾಶ ಸಿಗಲಿದೆ ಎಂದು ಹೇಳಿದರು. ಈ ಸಂಬAಧ ನಿನ್ನೆಯೇ ಉಸ್ತುವಾರಿ ಸಚಿವರೊಂದಿಗೆ ಮಾತುಕತೆ ನಡೆಸಿದ್ದು, ಸಚಿವರು ತಾ. ೬ರಂದು (ಇಂದು) ಜಿಲ್ಲೆಗೆ ಭೇಟಿ ನೀಡಿ ಸಭೆ ನಡೆಸಿ ತೀರ್ಮಾನ ಕೈಗೊಳ್ಳುವುದಾಗಿ ಹೇಳಿದ್ದಾರೆಂದು ಬೋಪಯ್ಯ ತಿಳಿಸಿದ್ದಾರೆ.
ಪೂರ್ವ ಸಿದ್ಧತಾ ಸಭೆ
ಪ್ರಸ್ತುತ ತಲಕಾವೇರಿ - ಭಗಂಡೇಶ್ವರ ವ್ಯವಸ್ಥಾಪನಾ ಸಮಿತಿ ಇಲ್ಲದೆ ಇರುವುದರಿಂದ ಸಂಪ್ರದಾಯದAತೆ ತುಲಾ ಸಂಕ್ರಮಣ ಜಾತ್ರೆಯ ಜವಾಬ್ದಾರಿ ವಹಿಸುವ ನಿಟ್ಟಿನಲ್ಲಿ ತಾ. ೭ರಂದು ಭಾಗಮಂಡಲದಲ್ಲಿ ಪೂರ್ವ ಸಿದ್ಧತಾ ಸಭೆ ಏರ್ಪಡಿರುವುದಾಗಿ ಅವರು ಸ್ಪಷ್ಟಪಡಿಸಿದರು.