ಸೋಮವಾರಪೇಟೆ, ಅ.೪: ಕೊಡ್ಲಿಪೇಟೆ-ಮಡಿಕೇರಿ ರಾಜ್ಯ ಹೆದ್ದಾರಿ ಕಾಮಗಾರಿ ಸೇರಿದಂತೆ ಕ್ಷೇತ್ರದಲ್ಲಿ ರೂ. ೬೩ ಕೋಟಿ ವೆಚ್ಚದ ವಿವಿಧ ರಸ್ತೆ ಕಾಮಗಾರಿಗೆ ಶೀಘ್ರದಲ್ಲೇ ಚಾಲನೆ ನೀಡಲಾಗುವುದು. ರಾಜ್ಯ ಹಾಗೂ ಕೇಂದ್ರ ಸರ್ಕಾರ ಕೊರೊನಾ ಸಂಕಷ್ಟದ ನಡುವೆಯೂ ಮೂಲಭೂತ ಸೌಕರ್ಯಗಳಿಗೆ ಹೆಚ್ಚಿನ ಆದ್ಯತೆ ನೀಡುತ್ತಿದೆ ಎಂದು ಮಡಿಕೇರಿ ಕ್ಷೇತ್ರದ ಸೋಮವಾರಪೇಟೆ, ಅ.೪: ಕೊಡ್ಲಿಪೇಟೆ-ಮಡಿಕೇರಿ ರಾಜ್ಯ ಹೆದ್ದಾರಿ ಕಾಮಗಾರಿ ಸೇರಿದಂತೆ ಕ್ಷೇತ್ರದಲ್ಲಿ ರೂ. ೬೩ ಕೋಟಿ ವೆಚ್ಚದ ವಿವಿಧ ರಸ್ತೆ ಕಾಮಗಾರಿಗೆ ಶೀಘ್ರದಲ್ಲೇ ಚಾಲನೆ ನೀಡಲಾಗುವುದು. ರಾಜ್ಯ ಹಾಗೂ ಕೇಂದ್ರ ಸರ್ಕಾರ ಕೊರೊನಾ ಸಂಕಷ್ಟದ ನಡುವೆಯೂ ಮೂಲಭೂತ ಸೌಕರ್ಯಗಳಿಗೆ ಹೆಚ್ಚಿನ ಆದ್ಯತೆ ನೀಡುತ್ತಿದೆ ಎಂದು ಮಡಿಕೇರಿ ಕ್ಷೇತ್ರದ ನೆರವಿಗೆ ಕೇಂದ್ರ ಸರ್ಕಾರ ಬಂದಿದೆ. ಆರ್ಥಿಕತೆಯ ಹೊಡೆತದ ನಡುವೆಯೂ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಅಭಿವೃದ್ಧಿ ಕಾಮಗಾರಿಗೆ ಅನುದಾನ ಬಿಡುಗಡೆ ಮಾಡುತ್ತಿವೆ ಎಂದರು.
ಜಿಲ್ಲೆಯ ಗಡಿ ಕೊಡ್ಲಿಪೇಟೆಯಿಂದ ಜಿಲ್ಲಾಕೇಂದ್ರ ಮಡಿಕೇರಿಗೆ ಸಂಪರ್ಕ ಕಲ್ಪಿಸುವ ರಾಜ್ಯ ಹೆದ್ದಾರಿ ಮರು ಡಾಂಬರೀಕರಣವನ್ನು ಲೋಕೋಪ ಯೋಗಿ ಇಲಾಖೆ ಮೂಲಕ ಕೈಗೊಳ್ಳಲಿದ್ದು, ರೂ. ೧೫ ಕೋಟಿ ಅನುದಾನ ಬಿಡುಗಡೆಯಾಗಿದೆ. ಇದರೊಂದಿಗೆ ರಾಜ್ಯ ಹೆದ್ದಾರಿ ಪ್ರಾಧಿಕಾರದಿಂದ ಪಟ್ಟಣ ಸೇರಿದಂತೆ ಆಯ್ದ ಸ್ಥಳಗಳಲ್ಲಿ ರಸ್ತೆ ಅಗಲೀಕರಣ, ಚರಂಡಿ ನಿರ್ಮಾಣ, ಅಪಘಾತ ತಪ್ಪಿಸಲು ಸುಧಾರಣಾ ಕ್ರಮ ಅಳವಡಿಕೆ ಸೇರಿದಂತೆ ಇನ್ನಿತರ ಕಾಮಗಾರಿಗೆ ರೂ. ೧೭ ಕೋಟಿ ಬಿಡುಗಡೆಯಾಗಿದ್ದು, ಮುಂದಿನ ೧ ವಾರದೊಳಗೆ ಕಾಮಗಾರಿಗಳಿಗೆ ಚಾಲನೆ ನೀಡಲಾಗುವುದು ಎಂದು ಮಾಹಿತಿಯಿತ್ತರು.
(ಮೊದಲ ಪುಟದಿಂದ) ಇದರೊಂದಿಗೆ ಜಿಲ್ಲಾ ಪಂಚಾಯತ್ ಮೂಲಕ ಗ್ರಾಮೀಣ ಭಾಗದ ರಸ್ತೆ ಅಭಿವೃದ್ಧಿಗೆ ರೂ. ೧೦ ಅನುದಾನ ಬಿಡುಗಡೆಯಾಗಿದ್ದು, ಇದರಲ್ಲಿ ಡಾಂಬರೀಕರಣ, ಕಾಂಕ್ರಿಟೀಕರಣ ಕಾಮಗಾರಿ ಕೈಗೊಳ್ಳಲಾಗುವುದು. ಪರಿಶಿಷ್ಟ ಜಾತಿ-ಪಂಗಡ ಕಾಲೋನಿಗಳ ರಸ್ತೆ ಅಭಿವೃದ್ಧಿಗೆ ರೂ. ೪ ಕೋಟಿ ಅನುದಾನ ಬಂದಿದ್ದು ತಕ್ಷಣ ಕಾಮಗಾರಿ ಕೈಗೆತ್ತಿಕೊಳ್ಳಲಾಗುವುದು ಎಂದು ಶಾಸಕ ರಂಜನ್ ಹೇಳಿದರು.
ಹೇಮಾವತಿ ನಿರಾವರಿ ನಿಗಮ ದಿಂದ ಕೊಡ್ಲಿಪೇಟೆ, ಬ್ಯಾಡಗೊಟ್ಟ, ಬೆಸೂರು ಗ್ರಾಮ ಪಂಚಾಯಿತಿಗಳಲ್ಲಿ ರೂ. ೧೭ ಕೋಟಿ ವೆಚ್ಚದ ಕಾಮಗಾರಿ ಗಳಿಗೆ ಅನುದಾನ ಬಿಡುಗಡೆಯಾಗಿದೆ. ಮುಂದಿನ ಒಂದು ವಾರದೊಳಗೆ ಬಹುತೇಕ ಕಾಮಗಾರಿಗಳು ಪ್ರಾರಂಭ ವಾಗಲಿವೆ. ಸರ್ಕಾರದ ಅನುದಾನದಡಿ ಕೈಗೊಳ್ಳಲಾಗುವ ಕಾಮಗಾರಿಗಳು ಕಳಪೆ ಯಾಗದಂತೆ ಸ್ಥಳೀಯರು ಜಾಗ್ರತೆ ವಹಿಸಬೇಕು ಎಂದು ಶಾಸಕರು ಕರೆ ನೀಡಿದರು. ಶರತ್ ಮಾತನಾಡಿ, ಶಾಸಕ ಅಪ್ಪಚ್ಚುರಂಜನ್ ಅವರ ಶ್ರಮ ದಿಂದಾಗಿ ಊರುಗುತ್ತಿ, ಬೆಂಬಳೂರು ವ್ಯಾಪ್ತಿಯಲ್ಲಿ ೨೫ ಕೋಟಿ ವೆಚ್ಚದ ರಸ್ತೆ ಸೇರಿದಂತೆ ಇನ್ನಿತರ ಮೂಲಭೂತ ಸೌಕರ್ಯಗಳ ಕಾಮಗಾರಿ ಪೂರ್ಣಗೊಂಡಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಈ ಸಂದರ್ಭ ಬಿಜೆಪಿ ಮಂಡಲ ಅಧ್ಯಕ್ಷ ಮನುಕುಮಾರ್ ರೈ, ಪಕ್ಷದ ಮುಖಂಡರಾದ ಪ್ರಸಾದ್ ಪಟೇಲ್, ಲಿಂಗರಾಜು, ಮಹೇಶ್, ಸಂದೀಪ್, ಸವಿತಾ ಸತೀಶ್, ಭುವನೇಶ್ವರಿ, ಮೋಕ್ಷಿಕ್, ಯುವ ಮೋರ್ಚಾ ಅಧ್ಯಕ್ಷ ಚಂದ್ರಶೇಖರ್ ಹೇರೂರು, ಜಿ.ಪಂ. ಮಾಜೀ ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ಮಹಿಳಾ ಮೋರ್ಚಾ ಅಧ್ಯಕ್ಷೆ ಮಂಜುಳಾ ಸುಬ್ರಮಣಿ, ಕಾರ್ಯದರ್ಶಿ ತಂಗಮ್ಮ ಸೇರಿದಂತೆ ಇತರರು ಉಪಸ್ಥಿತರಿದ್ದರು.