ಮಡಿಕೇರಿ, ಅ. ೬: ವಿಕ¯ಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಕೊಡಗು ಜಿಲ್ಲೆ, ಸ್ವಾಮಿ ವಿವೇಕಾನಂದ ಯೂತ್ ಮೂವ್‌ಮೆಂಟ್, ಕೊಡಗು ಶಾಖೆ ಹಾಗೂ ಜಿಲ್ಲಾ ದಿವ್ಯಾಂಗರ ಒಕ್ಕೂಟ, ಕೊಡಗು ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಸೋಮವಾರಪೇಟೆಯ ಮಹಿಳಾ ಸಹಕಾರ ಸಮಾಜದಲ್ಲಿ ಸೋಮವಾರಪೇಟೆ ತಾಲೂಕಿನ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರಿಗೆ ತಾಲೂಕು ಮಟ್ಟದ ‘ಕೋವಿಡ್ ಗೃಹಾಧಾರಿತ ಆರೈಕೆ ಮತ್ತು ಬ¯ವರ್ಧನ’ ತರಬೇತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮವನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆರ್.ಸಿ.ಹೆಚ್. ಅಧಿಕಾರಿಗಳಾದ ಡಾ. ಗೋಪಿನಾಥ್ ಎಸ್. ಅವರು ದೀಪ ಬೆಳಗುವ ಮೂಲಕ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ಕೊಡಗು ಜಿಲ್ಲೆಯಾದ್ಯಂತ ¯ಸಿಕಾ ಅಭಿಯಾನ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಎಲ್ಲಾ ವರ್ಗದವರಿಗೂ ¯ಸಿಕೆ ನೀಡಲಾಗುತ್ತಿದೆ. ಅಲ್ಲದೆ ಲಸಿಕೆ ನೀಡುವಿಕೆಯಲ್ಲಿ ಕೊಡಗು ಜಿಲ್ಲೆ ಕರ್ನಾಟಕದಲ್ಲಿ ಎರಡನೇ ಸ್ಥಾನವನ್ನು ಪಡೆದಿದೆಯೆಂದು ತಿಳಿಸಿದರು.

ಸ್ವಾಮಿ ವಿವೇಕಾನಂದ ಯೂತ್ ಮೂವ್‌ಮೆಂಟ್ ಸಂಸ್ಥೆ ಮತ್ತು ವಿಶೇಷಚೇತನರ ಕಲ್ಯಾಣ ಇಲಾಖೆಯ ಸಹಕಾರದೊಂದಿಗೆ ಕೊಡಗು ಜಿಲ್ಲೆಯಲ್ಲಿ ಶೇ. ೮೦ ರಷ್ಟು ವಿಶೇಷಚೇತನರಿಗೆ ಪ್ರಥಮ ಹಂತದ ಲಸಿಕೆಯನ್ನು ನೀಡಲಾಗಿದೆಯೆಂದು ತಿಳಿಸಿದರು. ಎಲ್ಲರೂ ¯ಸಿಕೆಯನ್ನು ಪಡೆದುಕೊಳ್ಳುವ ಮೂ¯ಕ ೩ನೇ ಅಲೆಯನ್ನು ನಿಯಂತ್ರಿಸ¯Ä ಸಾಧ್ಯ ಎಂದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಜಿಲ್ಲಾ ವಿಶೇಷಚೇತನರ ಕಲ್ಯಾಣಾಧಿಕಾರಿಗಳಾದ ವಿಮ¯ ಕೆ.ಜಿ. ಅವರು ಮಾತನಾಡಿ ಈಗಾಗಲೇ ಜಿಲ್ಲೆಯ ವಿಶೇಷಚೇತನರಿಗೆ ಹೆಚ್ಚಿನ ಪ್ರಮಾಣದಲ್ಲಿ ¯ಸಿಕೆ ನೀಡಲಾಗಿದೆ. ಸ್ವಾಮಿ ವಿವೇಕಾನಂದ ಯೂತ್ ಮೂವ್‌ಮೆಂಟ್ ಸಂಸ್ಥೆಯ ಹಾಗೂ ಆರೋಗ್ಯ ಇಲಾಖೆಯ ಸಹಕಾರದೊಂದಿಗೆ ಜಿಲ್ಲೆಯ ಎಲ್ಲಾ ವಿಶೇಷಚೇತನರಿಗೆ ¯ಸಿಕೆಯನ್ನು ನೀಡುತ್ತಿರುವುದಾಗಿ ತಿಳಿಸಿದರು. ತರಬೇತಿ ಕಾರ್ಯಾಗಾರದ ಅಧ್ಯಕ್ಷತೆ ಯನ್ನು ವಹಿಸಿದ್ದ ಸ್ವಾಮಿ ವಿವೇಕಾನಂದ ಯೂತ್ ಮೂವ್‌ಮೆಂಟ್ ಉಪಶಮನ ಆರೈಕೆ ಕೇಂದ್ರದ ವೈದ್ಯಾಧಿಕಾರಿಗಳಾದ ಡಾ. ವಿಧ್ಯಾ ಎನ್. ಅವರು ಮಾತನಾಡಿ ಕೋವಿಡ್-೧೯ ನಿಂದ ತಮ್ಮನ್ನು ತಾವೇ ಹೇಗೆ ರಕ್ಷಿಸಿಕೊಳ್ಳಬೇಕು? ಕೋವಿಡ್-೧೯ ನಿಂದ ಬಳ¯Äತ್ತಿರುವವರಿಗೆ ಹೇಗೆ ಚಿಕಿತ್ಸೆ ನೀಡಬೇಕು? ಎಂಬುವುದರ ಕುರಿತಾಗಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರಿಗೆ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ದಿವ್ಯಾಂಗರ ಒಕ್ಕೂಟದ ಗೌರವ ಅಧ್ಯಕ್ಷ ಪವಸ್ತಿನ್ ಡಿಸೋಜ, ತಾಲೂಕು ವಿಶೇಷಚೇತನರ ಸಂಘದ ಅಧ್ಯಕ್ಷ ಸಂಗಮೇಶ್, ಸ್ವಾಮಿ ವಿವೇಕಾನಂದ ಯೂತ್ ಮೂವ್‌ಮೆಂಟ್ ಸಂಸ್ಥೆಯ ಕೊಡಗು ಜಿಲ್ಲೆಯ ಕಾರ್ಯಕ್ರಮ ವ್ಯವಸ್ಥಾಪಕ ಅಂಕಾಚಾರಿ ಹಾಗೂ ಸಿಬ್ಬಂದಿ ಭಾಗವಹಿಸಿದ್ದರು.