ಮಡಿಕೇರಿ, ಅ. ೬: ಹಾನಗಲ್ ವಿಧಾನ ಸಭಾ ಕ್ಷೇತ್ರದಲ್ಲಿ ನಡೆಯಲಿರುವ ಉಪ ಚುನಾವಣೆಗೆ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಅವರು ಕಾಂಗ್ರೆಸ್ ಪಕ್ಷದ ಉಸ್ತುವಾರಿಗಳ ನೇಮಕ ಮಾಡಿದ್ದು ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಂ ಅಹಮದ್ ನೇತೃತ್ವದ ತಂಡದಲ್ಲಿ ಕೆಪಿಸಿಸಿ ಸಂಯೋಜಕರಾಗಿರುವ ಮಡಿಕೇರಿ ನಗರ ಸಭೆಯ ಮಾಜಿ ಅಧ್ಯಕ್ಷÀ ಹೆಚ್. ಎಂ. ನಂದಕುಮಾರ್ ಅವರನ್ನು ನಿಯೋಜಿಸಿದ್ದಾರೆ. ಎಂಎಲ್‌ಸಿ ವೀಣಾ ಅಚ್ಚಯ್ಯ ಅವರು ಕೂಡ ಉಸ್ತುವಾರಿ ಹಾಗೂ ವೀಕ್ಷಕರಾಗಿ ನೇಮಕಗೊಂಡಿದ್ದಾರೆ.