ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ವಿಧ್ಯುಕ್ತ ಚಾಲನೆ
ಮೈಸೂರು, ಅ. ೭: ವಿಶ್ವವಿಖ್ಯಾತ, ನಾಡಿನ ಹೆಮ್ಮೆಯ ಮೈಸೂರು ದಸರಾ -೨೦೨೧ರ ಮಹೋತ್ಸವಕ್ಕೆ ಅಧಿಕೃತ ಚಾಲನೆ ಸಿಕ್ಕಿದೆ. ನಾಡು ಕಂಡ ಧೀಮಂತ ನಾಯಕ, ಮಾಜಿ ಸಿಎಂ ಎಸ್.ಎಂ. ಕೃಷ್ಣ ಅವರು ೪೧೧ನೇ ನಾಡಹಬ್ಬ ದಸರಾ ಹಬ್ಬಕ್ಕೆ ಗುರುವಾರ ಚಾಲನೆ ನೀಡಿದರು. ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ, ಚಾಮುಂಡಿ ಬೆಟ್ಟದಲ್ಲಿ ತಾಯಿ ಚಾಮುಂಡೇಶ್ವರಿಗೆ ದೀಪಾ ಬೆಳಗುವ ಮೂಲಕ ಐತಿಹಾಸಿಕ ದಸರಾ ಮಹೋತ್ಸವಕ್ಕೆ ಚಾಲನೆ ನೀಡಿದರು. ಚಾಮುಂಡಿ ಬೆಟ್ಟದಲ್ಲಿ ಶ್ರೀ ಚಾಮುಂಡೇಶ್ವರಿ ದೇವಿಗೆ ಅಗ್ರಪೂಜೆಯೊಂದಿಗೆ ಬೆಳಿಗ್ಗೆ ೮.೧೫ ರಿಂದ ೮.೪೫ರ ಸಲ್ಲುವ ಶುಭ ಮುಹೂರ್ತದಲ್ಲಿ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರು ದಸರಾಗೆ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ, ಸಚಿವರಾದ ಎಸ್.ಟಿ. ಸೋಮಶೇಖರ್, ಆರ್. ಅಶೋಕ್, ಬಿ.ಸಿ. ಪಾಟೀಲ್, ಶಿವರಾಂ ಹೆಬ್ಬಾರ್, ಸುನಿಲ್ ಕುಮಾರ್, ನಾರಾಯಣ ಗೌಡ, ಭೈರತಿ ಬಸವರಾಜು, ಶಶಿಕಲಾ ಜೊಲ್ಲೆ, ಶಾಸಕರಾದ ಜಿಟಿಡಿ, ರಾಮದಾಸ್, ನಾಗೇಂದ್ರ, ಬೆಲ್ಲದ್, ತನ್ವೀರ್ ಸೇಠ್, ಹೆಚ್.ವಿಶ್ವನಾಥ್, ಸಂಸದ ಪ್ರತಾಪ್ ಸಿಂಹ, ಜಿಲ್ಲಾಧಿಕಾರಿ, ಪೊಲೀಸ್ ಆಯುಕ್ತರು ಸೇರಿ ನಿಗಮ ಮಂಡಳಿ ಅಧ್ಯಕ್ಷರ ಹಲವರ ಉಪಸ್ಥಿತರಿದ್ದರು.
ಶಬರಿಮಲೆ ಅಯ್ಯಪ್ಪ ದರ್ಶನಕ್ಕೆ ೨೫ ಸಾವಿರ ಮಂದಿಗೆ ಅವಕಾಶ
ತಿರುವನಂತಪುರA, ಅ. ೭: ಕೋವಿಡ್ ಸಾಂಕ್ರಾಮಿಕದ ನಡುವೆ, ಮಂಡಲ-ಮಕರವಿಳಕ್ಕು ಉತ್ಸವದ ಸಮಯದಲ್ಲಿ ಶಬರಿಮಲೆಯ ವಿಶ್ವವಿಖ್ಯಾತ ಅಯ್ಯಪ್ಪ ದೇವಸ್ಥಾನದಲ್ಲಿ ಪ್ರತಿದಿನ ಕೇವಲ ೨೫ ಸಾವಿರ ಭಕ್ತರು ದರ್ಶನ ಪಡೆಯಲು ಅನುಮತಿಸಲಾಗುವುದು ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ. ಅಯ್ಯಪ್ಪ ದರ್ಶನಕ್ಕೆ ೧೦ ವರ್ಷಕ್ಕಿಂತ ಕಡಿಮೆ ಮತ್ತು ೬೫ ವರ್ಷಕ್ಕಿಂತ ಮೇಲ್ಪಟ್ಟ ಭಕ್ತರಿಗೆ ಅವಕಾಶ ನೀಡುವ ಕುರಿತು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ನಿರ್ಧಾರ ತೆಗೆದುಕೊಳ್ಳಲಾಗಿದೆ. ಆನ್‌ಲೈನ್ ‘ವರ್ಚುವಲ್ ಕ್ಯೂ' ವ್ಯವಸ್ಥೆಯ ಮೂಲಕ ಬುಕ್ ಮಾಡಿದ ಭಕ್ತರಿಗೆ ಪ್ರತಿದಿನ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ. ಅವರು ಕೋವಿಡ್ ೧೯ ಲಸಿಕೆ ಪಡೆದುಕೊಂಡಿರುವ ಅಥವಾ ಆರ್‌ಟಿ-ಪಿಸಿಆರ್ ಋಣಾತ್ಮಕ ವರದಿಯ ಎರಡು ಪ್ರಮಾಣಗಳ ಪ್ರಮಾಣಪತ್ರವನ್ನು ಒದಗಿಸಬೇಕು. ಆದಾಗ್ಯೂ, ಭಕ್ತರು ಏರುಮಲೆ ಮತ್ತು ಪುಲ್ಮೇಡು ಸಾಂಪ್ರದಾಯಿಕ ಅರಣ್ಯ ಮಾರ್ಗಗಳ ಮೂಲಕ ಹೋಗಲು ಅನುಮತಿಸುವುದಿಲ್ಲ. ಪಂಪಾ ನದಿಯಲ್ಲಿ ಸ್ನಾನ ಮಾಡಲು ಭಕ್ತರಿಗೆ ಅವಕಾಶವಿದೆ. ಕೋವಿಡ್ ನಿರ್ಬಂಧಗಳಿAದಾಗಿ ಶಬರಿಮಲೆಯ ಸನ್ನಿಧಾನದಲ್ಲಿ ಯಾತ್ರಾರ್ಥಿಗಳಿಗೆ ಉಳಿಯಲು ಅವಕಾಶವಿಲ್ಲ ಎಂದು ಮಾಹಿತಿ ದೊರಕಿದೆ.
ಲಖಿಂಪುರ್ ಖೇರಿ ಹಿಂಸಾಚಾರ: ಇಬ್ಬರ ಬಂಧನ
ಲಖನೌ, ಅ. ೭: ಲಖಿಂಪುರ್ ಖೇರಿ ಹಿಂಸಾಚಾರಕ್ಕೆ ಸಂಬAಧಿಸಿದAತೆ ಲವ್ ಕುಶ್ ಮತ್ತು ಆಶಿಶ್ ಪಾಂಡ್ಯ ಎಂಬವರನ್ನು ಬಂಧಿಸಿದ್ದು ಶೀಘ್ರವೇ ಮುಖ್ಯ ಆರೋಪಿ ಕೇಂದ್ರ ಸಚಿವ ಅಜಯ್ ಮಿಶ್ರಾ ಪುತ್ರ ಆಶಿಶ್ ಮಿಶ್ರಾರನ್ನು ಬಂಧಿಸುತ್ತೇವೆ ಎಂದು ಉತ್ತರ ಪ್ರದೇಶ ಪೊಲೀಸರು ತಿಳಿಸಿದ್ದಾರೆ. ಲಖಿಂಪುರ್ ಖೇರಿ ಹಿಂಸಾಚಾರ ಪ್ರಕರಣಕ್ಕೆ ಸಂಬAಧಿಸಿದAತೆ ಯಾವ ಕ್ರಮ ಕೈಗೊಂಡಿದ್ದೀರಾ ಎಂದು ಸುಪ್ರೀಂ ಕೋರ್ಟ್ ಉತ್ತರಪ್ರದೇಶ ಸರ್ಕಾರವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿತ್ತು. ಇದರ ಬೆನ್ನಲ್ಲೇ ಆರೋಪಿಗಳ ಪತ್ತೆಗೆ ಬಲೆ ಬೀಸಿರುವ ಪೊಲೀಸರು ಪ್ರಕರಣ ಸಂಬAಧ ಇಬ್ಬರನ್ನು ಬಂಧಿಸಿದ್ದಾರೆ. ಪ್ರಮುಖ ಆರೋಪಿ ಆಶಿಶ್ ಮಿಶ್ರಾನನ್ನು ಬಂಧಿಸಲಾಗುವುದು. ಆತನ ವಿರುದ್ಧ ಕೊಲೆ, ಗಲಭೆ ಮತ್ತು ಕ್ರಿಮಿನಲ್ ಪಿತೂರಿ ಸೇರಿದಂತೆ ಐಪಿಸಿಯ ಎಂಟು ಸೆಕ್ಷನ್ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದರು. ಉತ್ತರಪ್ರದೇಶ ಪೊಲೀಸ್ ಲಖನೌ ವ್ಯಾಪ್ತಿಯ ಐಜಿ ಲಕ್ಷ್ಮಿಸಿಂಗ್ ಪ್ರಕಾರ, ಲಖಿಂಪುರ್ ಖೇರಿ ಹಿಂಸಾಚಾರಕ್ಕೆ ಸಂಬAಧಿಸಿದAತೆ ಆಶಿಶ್ ಮಿಶ್ರಾ ಅವರನ್ನು ಬಂಧಿಸಲು ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.
ಬಿಎಸ್‌ವೈ ಆಪ್ತನ ಮನೆ ಮೇಲೆ ಐಟಿ ದಾಳಿ
ಬೆಂಗಳೂರು, ಅ. ೭: ಮಹತ್ವದ ಬೆಳವಣಿಗೆಯಲ್ಲಿ ಬೆಂಗಳೂರು ನಗರದಲ್ಲಿ ೫೦ಕ್ಕೂ ಹೆಚ್ಚು ಕಡೆ ಆದಾಯ ತೆರಿಗೆ ಅಧಿಕಾರಿಗಳ ದಾಳಿ ನಡೆಸಿದ್ದು, ಕರ್ನಾಟಕ ಗೋವಾ ಘಟಕದ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ಸುಮಾರು ೩೦೦ ಅಧಿಕಾರಿಗಳ ತಂಡ ಏಕಕಾಲದಲ್ಲಿ ೫೦ಕ್ಕೂ ಹೆಚ್ಚು ಕಡೆಗಳಲ್ಲಿ ದಾಳಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಉದ್ಯಮಿಗಳು ಮತ್ತು ಗುತ್ತಿಗೆದಾರರ ಮನೆಗಳು ಮತ್ತು ಕಚೇರಿಗಳ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ತಂಡೋಪಾದಿಯಲ್ಲಿ ದಾಳಿಗಳನ್ನು ನಡೆಸಿದ್ದಾರೆ. ೧೦ಕ್ಕೂ ಹೆಚ್ಚು ಅಧಿಕಾರಿಗಳ ತಂಡ ೫೦ಕ್ಕೂ ಹೆಚ್ಚು ಕಡೆ ದಾಳಿ ಮಾಡಿದೆ. ಬೆಳಗ್ಗೆ ೫ ಗಂಟೆಯಿAದ ಶೋಧ ಕಾರ್ಯಕಾರ್ಯ ಶುರುವಾಗಿದೆ. ಮೊದಲೇ ನಿರ್ಧರಿಸಿದ್ದಂತೆ ೧೨೦ ಇನೋವಾ ಕಾರುಗಳನ್ನ ಐಟಿ ಅಧಿಕಾರಿಗಳನ್ನು ಬುಕ್ ಮಾಡಿಕೊಂಡಿದ್ದರು, ಅದರಂತೆ ಇಂದು ಬೆಳಗ್ಗೆ ಏಕಕಾಲದಲ್ಲಿ ೫೦ ಕಡೆ ೩೦೦ಕ್ಕೂ ಹೆಚ್ಚು ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕೊಡಿಗೇಹಳ್ಳಿ ಸಹಕಾರ ನಗರದಲ್ಲಿರುವ ರಾಹುಲ್ ಎಂಟರ್‌ಪ್ರೆöÊಸಸ್ ಮೇಲೆ ಐಟಿ ದಾಳಿ ನಡೆದಿದೆ. ರಾಹುಲ್ ಎಂಟರ್‌ಪ್ರೆöÊಸಸ್ ಸಿಮೆಂಟ್, ಸ್ಟೀಲ್ ಡೀಲರ್ ಕಚೇರಿಯಲ್ಲಿ ಐಟಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಮೂರು ಇನ್ನೋವಾ ಕ್ರಿಸ್ಟಾ ಕಾರಿನಲ್ಲಿ ಆಗಮಿಸಿರುವ ಅಧಿಕಾರಿಗಳು ಪರಿಶೀಲನೆ ಮುಂದುವರಿಸಿದ್ದಾರೆ. ಅಂತೆಯೇ ಬೆಂಗಳೂರಿನ ಹೆಗಡೆ ನಗರದಲ್ಲಿರುವ ಎನ್.ಆರ್. ರಾಯಲ್ ಅಪಾರ್ಟ್ಮೆಂಟ್‌ನಲ್ಲಿರುವ ಚಾರ್ಟೆಡ್ ಅಕೌಂಟೆAಟ್ ಅಮಲಾ ಮನೆ ಮೇಲೆ ರೇಡ್ ನಡೆದಿದೆ. ಬೆಂಗಳೂರಿನ ಭಾಷ್ಯಂ ಸರ್ಕಲ್‌ನಲ್ಲಿರುವ ಬಿಎಸ್ ಯಡಿಯೂರಪ್ಪ ಆಪ್ತ ಸಹಾಯಕ ಉಮೇಶ್ ಮನೆ ಮತ್ತು ಕಚೇರಿ ಸೇರಿ ೪ ಕಡೆಗಳಲ್ಲಿ ಐಟಿ ದಾಳಿ ನಡೆದಿದೆ.
ಕಾಶ್ಮೀರ: ಉಗ್ರರ ಗುಂಡೇಟಿಗೆ ಇಬ್ಬರು ಶಿಕ್ಷಕರು ಬಲಿ
ಶ್ರೀನಗರ, ಅ. ೭: ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ಉಗ್ರರ ಉಪಟಳ ಹೆಚ್ಚಿದ್ದು, ಮಹಿಳೆ ಸೇರಿದಂತೆ ಇಬ್ಬರು ಶಿಕ್ಷಕರನ್ನು ಹತ್ಯೆ ಮಾಡಿದ್ದಾರೆ ಎಂದು ಅಧಿಕೃತ ಮೂಲಗಳು ಗುರುವಾರ ತಿಳಿಸಿವೆ. ಇಂದು ಬೆಳಿಗ್ಗೆ ಈ ಕುಕೃತ್ಯ ನಡೆದಿದ್ದು, ಭಯೋತ್ಪಾದಕರು ನಗರದ ಈದ್ಗಾ ಪ್ರದೇಶದ ಸಂಗಮದ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯ ಶಿಕ್ಷಕರಾದ ಸತೀಂದರ್ ಕೌರ್ ಮತ್ತು ದೀಪಕ್ ಚಂದ್ ಮೇಲೆ ಅತ್ಯಂತ ಸಮೀಪದಿಂದ ಗುಂಡು ಹಾರಿಸಿದ್ದಾರೆ ಎಂದು ಹೇಳಲಾಗಿದೆ. ಗಾಯಗೊಂಡ ಇಬ್ಬರನ್ನೂ ಆಸ್ಪತ್ರೆಗೆ ಸಾಗಿಸ ಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಕಳೆದ ಮೂರು ದಿನಗಳಲ್ಲಿ ಕಾಶ್ಮೀರ ಕಣಿವೆಯಲ್ಲಿ ನಡೆದ ನಾಲ್ಕನೇ ದಾಳಿ ಇದಾಗಿದೆ. ಅಕ್ಟೋಬರ್ ೫ ರಂದು ಕಾಶ್ಮೀರಿ ಪಂಡಿತ ಎಂ.ಎಲ್. ಬಿಂದ್ರೂ, ಕಾಶ್ಮೀರಿ ಮುಸ್ಲಿಂ ಮತ್ತು ಬಿಹಾರ ನಿವಾಸಿ ಶ್ರೀನಗರ ಹಾಗೂ ಬಂಡಿಪೋರಾದಲ್ಲಿ ಅಪರಿಚಿತ ಬಂದೂಕುಧಾರಿಗಳಿAದ ಹತರಾಗಿದ್ದರು. ಇತ್ತೀಚೆಗೆ ಉಗ್ರರ ನಾಗರಿಕರನ್ನು, ವಿಶೇಷವಾಗಿ ಕಾಶ್ಮೀರ ಕಣಿವೆಯ ಅಲ್ಪಸಂಖ್ಯಾತ ಸಮುದಾ ಯದವರನ್ನು ಗುರಿಯಾಗಿಸಿಕೊಂಡು ಗುಂಡಿನ ದಾಳಿ ನಡೆಸಲಾಗುತ್ತಿದ್ದು, ಇದು ಭಯದ ವಾತಾವರಣ ಸೃಷ್ಟಿಸುವ ಮತ್ತು ಕೋಮು ಸೌಹಾರ್ದವನ್ನು ಹಾಳು ಮಾಡುವ ಗುರಿ ಹೊಂದಿದೆ ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಮಹಾ ನಿರ್ದೇಶಕ ದಿಲ್ಬಾಗ್ ಸಿಂಗ್ ಅವರು ಹೇಳಿದ್ದಾರೆ.
ಬೆಳಗಾವಿ ಮನೆ ಕುಸಿತ ಪ್ರಕರಣ: ರೂ. ೨ ಲಕ್ಷ ಪರಿಹಾರ ಘೋಷಣೆ
ಬೆಳಗಾವಿ, ಅ. ೭: ಬೆಳಗಾವಿ ತಾಲೂಕಿನ ಬಡಾಲ ಅಂಕಲಗಿ ಗ್ರಾಮದಲ್ಲಿ ಸುರಿದ ಭಾರಿ ಮಳೆಯಿಂದಾಗಿ ಬುಧವಾರ ರಾತ್ರಿ ಮನೆಗೋಡೆ ಕುಸಿದು ಒಂದೇ ಕುಟುಂಬದ ಏಳು ಮಂದಿ ದುರ್ಮರಣ ಹೊಂದಿದ ಪ್ರಕರಣಕ್ಕೆ ಸಂಬAಧಿಸಿದAತೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಗುರುವಾರ ತಲಾ ರೂ. ೨ ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಟ್ವಿಟರ್‌ನಲ್ಲಿ ಟ್ವೀಟ್ ಮಾಡಿರುವ ಪ್ರಧಾನಮಂತ್ರಿಗಳ ಕಚೇರಿ, ಬೆಳಗಾವಿಯಲ್ಲಿ ಮನೆ ಕುಸಿತದಿಂದ ಜೀವಹಾನಿಯಾಗಿರುವುದು ನೋವು ತಂದಿದೆ. ಏತನ್ಮಧ್ಯೆ, ಜಲಸಂಪನ್ಮೂಲ ಸಚಿವ ಗೋವಿಂದ್ ಕಾರಜೋಳ ಅವರು, ರಾಜ್ಯ ಸರ್ಕಾರದಿಂದ ಪರಿಹಾರವಾಗಿ ಮನೆ ಕುಸಿತದಲ್ಲಿ ಮೃತಪಟ್ಟ ಎಲ್ಲಾ ಏಳು ಮಂದಿಯ ಸಂಬAಧಿಕರಿಗೆ ತಲಾ ೫ ಲಕ್ಷ ರೂ.ಗಳ ಚೆಕ್ ವಿತರಿಸಿದರು. ಸಚಿವರು ಗುರುವಾರ ಬೆಳಿಗ್ಗೆ ಬದಲಂಕಲಗಿಯಲ್ಲಿರುವ ದುಃಖಿತ ಕುಟುಂಬಗಳಿಗೆ ಭೇಟಿ ನೀಡಿ ಚೆಕ್‌ಗಳನ್ನು ನೀಡಿದರು. ಘಟನೆಯಲ್ಲಿ ಸಾವನ್ನಪ್ಪಿದ ಮೂವರು ಮಕ್ಕಳ ಕುಟುಂಬಕ್ಕೆ ಇನ್ನೂ ೧ ಲಕ್ಷ ರೂಪಾಯಿ ಪರಿಹಾರವನ್ನು ಮಕ್ಕಳ ಕಲ್ಯಾಣ ನಿಧಿಯಿಂದ ನೀಡಲಾಗುವುದು ಎಂದು ಕಾರಜೋಳ ಹೇಳಿದರು.