ಮಡಿಕೇರಿ, ಅ. ೬: ಜೀವನದಿ ಕಾವೇರಿಯ ಉಗಮ ಸ್ಥಾನ ತಲಕಾವೇರಿಯಲ್ಲಿ ತಾ. ೧೭ ರಂದು ಜರುಗಲಿರುವ ಕಾವೇರಿ ಪವಿತ್ರ ತೀರ್ಥೋದ್ಭವ ವೀಕ್ಷಣೆಗೆ ಭಕ್ತಾದಿಗಳಿಗೆ ಕೊರೊನಾ ನಿಯಮಗಳನ್ನು ಸಡಿಲಿಕೆ ಮಾಡುವ ಮುಖಾಂತರ ಮುಕ್ತ ಅವಕಾಶ ನೀಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಸ್ಪಷ್ಟಪಡಿಸಿದರು.

ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋವಿಡ್ ಹಿನ್ನೆಲೆಯಲ್ಲಿ ಸುರಕ್ಷತೆಯ ದೃಷ್ಟಿಯಿಂದ ತೀರ್ಥೋದ್ಭವ ಸಾಮೂಹಿಕ ಆಚರಣೆಯಾದ ಹಿನ್ನೆಲೆಯಲ್ಲಿ ಕೆಲವೊಂದು ಕಟ್ಟುನಿಟ್ಟಿನ ನಿರ್ಧಾರಗಳನ್ನು ಕಳೆದ ಸಭೆಯಲ್ಲಿ ತೆಗೆದುಕೊಳ್ಳಲಾಗಿತ್ತು. ಆದರೆ ಇದರಿಂದ ಕೊಡಗಿನ ಜನರ ಭಾವನೆಗೆ ಧಕ್ಕೆ ಉಂಟಾಗುತ್ತದೆ ಎಂಬ ಹಿನ್ನೆಲೆಯಲ್ಲಿ ನಿರ್ಧಾರಗಳನ್ನು ಕಳೆದ ಸಭೆಯಲ್ಲಿ ತೆಗೆದುಕೊಳ್ಳಲಾಗಿತ್ತು. ಆದರೆ ಇದರಿಂದ ಕೊಡಗಿನ ಜನರ ಭಾವನೆಗೆ ಧಕ್ಕೆ ಉಂಟಾಗುತ್ತದೆ ಎಂಬ ಹಿನ್ನೆಲೆಯಲ್ಲಿ ಕೋರಿಕೆಯಂತೆ ಇಂದು ಸಭೆ ನಡೆಸಿ ಕೊರೊನಾ ನಿಯಮಗಳನ್ನು ಕೊಂಚ ಸಡಿಲಿಕೆ ಮಾಡಿ ತೀರ್ಥೋದ್ಭವ ವೀಕ್ಷಣೆಗೆ ಭಕ್ತರಿಗೆ ಮುಕ್ತ ಅವಕಾಶ ನೀಡಬೇಕೆಂದು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು. ಆ ಮೂಲಕ ಕಾವೇರಿಯೊಂದಿಗೆ ಕೊಡಗಿನ ಜನರಿಗಿರುವ ಭಾವನಾತ್ಮಕ ಸಂಬAಧಕ್ಕೆ ಬೆಲೆ ಕೊಡುವ ಕೆಲಸ ಮಾಡಿದ್ದೇವೆ ಎಂದು ನುಡಿದರು. ಇದರೊಂದಿಗೆ ತಲಕಾವೇರಿವರೆಗೂ ವಾಹನಗಳ ಮೂಲಕ ಬರಲು ಕೂಡ ಅನುವು ಮಾಡಿಕೊಡಲಾಗುವುದು.

ಆದರೆ ಕೋವಿಡ್ ನಿಯಮ ಗಳನ್ನು ಜನ ಪಾಲಿಸಬೇಕು ಎಂದು ಮನವಿ ಮಾಡಿದರು. ಪುಣ್ಯ ಸ್ನಾನಕ್ಕೆ ಅವಕಾಶ ಬಗ್ಗೆ ಇನ್ನೂ ತೀರ್ಮಾನಿಸಿಲ್ಲ. ಪುಣ್ಯಸ್ನಾನ, ತೀರ್ಥ ವಿತರಣೆಗೆ ಅವಕಾಶ ಇತ್ಯಾದಿ ಬಗ್ಗೆ ಜಿಲ್ಲಾಧಿಕಾರಿ ಗಳು ಹಾಗೂ ಶಾಸಕರುಗಳು ಒಟ್ಟಾಗಿ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಲು ಸೂಚಿಸಿದ್ದೇನೆ ಎಂದರಲ್ಲದೆ ಭಕ್ತರು ತೀರ್ಥ ಕೊಂಡೊಯ್ಯಲು ಅವಕಾಶವಿರುತ್ತದೆ ಎಂದು ನುಡಿದರು.

ಶಾಸಕ ಅಪ್ಪಚ್ಚು ರಂಜನ್ ಮಾತನಾಡಿ, ಜನರ ಭಾವನೆಗೆ ಸ್ಪಂದಿಸುವ ಕೆಲಸವನ್ನು ಸರ್ಕಾರ ಮಾಡಿದ್ದು, ಕಾವೇರಿ ಭಕ್ತರಿಗೆ ತೊಂದರೆ ಆಗಬಾರದು ಎಂಬ ಕಾರಣಕ್ಕಾಗಿ ಅವಕಾಶ ನೀಡಲು ನಿರ್ಧರಿಸಲಾಗಿದೆ. ಕೊಡಗಿನ ಜನರ ಆರೋಗ್ಯದ ದೃಷ್ಟಿಯಿಂದ ಈ ಹಿಂದೆ ಆ ರೀತಿಯ ತೀರ್ಮಾನ ತೆಗೆದುಕೊಳ್ಳಲಾಗಿತ್ತು. ಆದರೆ ಇದಕ್ಕೆ ವಿರೋಧ ವ್ಯಕ್ತಗೊಂಡ ಹಿನ್ನೆಲೆಯಲ್ಲಿ ಇದೀಗ ಚರ್ಚಿಸಿ ಅವಕಾಶ ನೀಡಲು ತೀರ್ಮಾನಿಸ ಲಾಗಿದೆ ಎಂದು ಹೇಳಿದರು.

ಪತ್ರಿಕಾಗೋಷ್ಠಿಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಕೆ.ಜಿ. ಬೋಪಯ್ಯ, ತೀರ್ಥ ವ್ಯವಸ್ಥೆ ಎಲ್ಲರಿಗೂ ಇರುತ್ತದೆ ತಲಕಾವೇರಿಯಲ್ಲಿ

(ಮೊದಲ ಪುಟದಿಂದ) ತೀರ್ಥ ಸ್ನಾನಕ್ಕೆ ಅವಕಾಶ ಇಲ್ಲ. ಭಾಗಮಂಡಲದಲ್ಲಿ ಪುಣ್ಯ ಸ್ನಾನಕ್ಕೆ ಸಂಬAಧಿಸಿದAತೆ ತಾ. ೭ ರಂದು (ಇಂದು) ನಡೆಯುವ ಸಭೆಯಲ್ಲಿ ತೀರ್ಮಾನಿಸಲಾಗುವುದು ಎಂದು ಹೇಳಿದರು.

ಗೋಷ್ಠಿಯಲ್ಲಿ ವಿಧಾನಪರಿಷತ್ ಸದಸ್ಯ ಸುನಿಲ್ ಸುಬ್ರಮಣಿ, ಜಿಲ್ಲಾಧಿಕಾರಿ ಚಾರುಲತಾ ಸೋಮಲ್, ಪಶ್ಚಿಮಘಟ್ಟ ಕಾರ್ಯಪಡೆ ಸಮಿತಿ ಅಧ್ಯಕ್ಷ ರವಿಕುಶಾಲಪ್ಪ, ಮೂಡಾ ಅಧ್ಯಕ್ಷ ರಮೇಶ್ ಹೊಳ್ಳ ಉಪಸ್ಥಿತರಿದ್ದರು. ಸುದ್ದಿಗೋಷ್ಠಿಗೂ ಮುನ್ನ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ, ಜಿ.ಪಂ. ಸಿಇಓ ಭಂವರ್‌ಸಿAಗ್ ಮೀನಾ, ಎಸ್‌ಪಿ ಕ್ಷಮಾಮಿಶ್ರಾ, ಉಪವಿಭಾಗಾಧಿಕಾರಿ ಈಶ್ವರ್ ಕುಮಾರ್ ಖಂಡೂ ಇತರರಿದ್ದರು.