ಭಾಗಮಂಡಲ, ಅ. ೬: ಮಹಾಲಯ ಅಮಾವಾಸ್ಯೆ ಪ್ರಯುಕ್ತ ಇಂದು ಭಾಗಮಂಡಲ ಹಾಗೂ ತಲಕಾವೇರಿಯಲ್ಲಿ ಹೆಚ್ಚಿನ ಭಕ್ತಾದಿಗಳು ಕಂಡುಬAದರು. ಪಿತೃ ಪಕ್ಷದ ಕೊನೆಯ ದಿನ ಮಹಾಲಯ ಅಮಾವಾಸ್ಯೆ ಯಾಗಿದ್ದು, ಅತ್ಯಂತ ಮಹತ್ವದ ದಿನವಾಗಿದೆ. ಭಕ್ತರು ಭಾಗಮಂಡಲದ ತ್ರಿವೇಣಿ ಸಂಗಮದಲ್ಲಿ ಶುದ್ಧರಾಗಿ ಭಗಂಡೇಶ್ವರ ದೇವಾಲಯಕ್ಕೆ ತೆರಳಿ ಪೂಜೆ ಸಲ್ಲಿಸಿದರು. ತ್ರಿವೇಣಿ ಸಂಗಮ ದಲ್ಲಿ ಶ್ರಾದ್ಧ ಕಾರ್ಯ ನಡೆಸಿದರು. ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದು ದೇವಾಲಯ ಹಾಗೂ ತಲಕಾವೇರಿಗಳಲ್ಲಿ ಪೂಜೆ ಸಲ್ಲಿಸಿದರು.
ಈ ಪಕ್ಷದ ಒಂದು ದಿನದಲ್ಲಿ ಶ್ರಾದ್ಧವನ್ನು ಮಾಡಬಹುದಾದರೂ ಅಮಾವಾಸ್ಯೆ ಅತ್ಯಂತ ಶ್ರೇಷ್ಠ ಎನ್ನಲಾಗಿದೆ. ಅಂತೆಯೇ ಜಿಲ್ಲೆಯ ವಿವಿಧ ಭಾಗಗಳಿಂದ ಭಕ್ತರು ಆಗಮಿಸಿ ಕಾರ್ಯ ನೆರವೇರಿಸಿದರು.