ಸಿದ್ದಾಪುರ, ಅ. ೭: ಸ್ವಚ್ಛ ಭಾರತದ ಕನಸು ನನಸು ಮಾಡಲು ಪ್ರತಿಯೊಬ್ಬರೂ ಕೈಜೋಡಿಸುವ ಮೂಲಕ ಸ್ವಚ್ಛತೆಗೆ ಆದ್ಯತೆ ನೀಡಿ ಸುಂದರ ಸಮಾಜ ನಿರ್ಮಾಣ ಮಾಡಲು ಮುಂದಾಗಬೇಕು ಎಂದು ಶಾಸಕ ಕೆ. ಜಿ ಬೋಪಯ್ಯ ಸಲಹೆ ನೀಡಿದರು.
ಕಣ್ಣಂಗಾಲ ಗ್ರಾಮ ಪಂಚಾಯಿತಿ ಕಟ್ಟಡದ ಹಿಂಬದಿಯಲ್ಲಿ ಅಂದಾಜು ೫ಲಕ್ಷ ರೂ ವೆಚ್ಚದಲ್ಲಿ ನಿರ್ಮಿಸಲಾಗಿರುವ ಘನತ್ಯಾಜ್ಯ ವಿಲೇವಾರಿ ಘಟಕವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿಯವರು ಸ್ವಚ್ಛ ಭಾರತ ನಿರ್ಮಾಣ ಮಾಡಲು ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು ಆ ಮೂಲಕ ಸ್ವಚ್ಛ ಗ್ರಾಮವನ್ನಾಗಿಸಲು ಪ್ರತಿಯೊಬ್ಬರು ಕೈಜೋಡಿಸಬೇಕೆಂದರು.
ತಾಲೂಕು ಕಾರ್ಯನಿರ್ವಹಣಾಧಿಕಾರಿ ಅಪ್ಪಣ್ಣ ಮಾತನಾಡಿ ವೀರಾಜಪೇಟೆ, ಪೊನ್ನಂಪೇಟೆ ತಾಲೂಕಿನಲ್ಲಿ ಒಟ್ಟು ೩೮ ಗ್ರಾಮ ಪಂಚಾಯಿತಿಗಳಲ್ಲಿ ೧೮ ಖಾಯಂ ಘಟಕ ಹಾಗೂ ೨೦ ತಾತ್ಕಾಲಿಕ ಘಟಕಗಳು ಕಾರ್ಯನಿರ್ವಹಿಸುತ್ತಿವೆ.
ಮುಂದಿನ ದಿನಗಳಲ್ಲಿ ಇತರ ಗ್ರಾಮ ಪಂಚಾಯಿತಿಗಳಲ್ಲಿ ಘನತ್ಯಾಜ್ಯ ವಿಲೇವಾರಿ ಘಟಕ ಪ್ರಾರಂಭವಾಗಲಿದೆ ಎಂದರು. ಸ್ವಚ್ಛ ಭಾರತ್ ಯೋಜನೆಯ ನೋಡಲ್ ಅಧಿಕಾರಿ ಸೂರಜ್, ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಗ್ರೀಷ್ಮ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಧರಣಿ' ಸದಸ್ಯರಾದ ಪೂಣಚ್ಚ, ಕಲ್ಪೇಶ್, ಜೀವನ್, ವನಿತಾ, ಮಾಜಿ ಸದಸ್ಯರುಗಳಾದ ರಂಜಿ ಮಹೇಂದ್ರ, ರಮೇಶ್, ರೇಖಾ, ತನುಜಾ, ನಿತಿನ್ ಸೇರಿದಂತೆ ಮತ್ತಿತರರಿದ್ದರು