ಗೋಣಿಕೊಪ್ಪಲು, ಅ. ೬: ವೀರಾಜಪೇಟೆ ಬಿಜೆಪಿ ಮಂಡಲವು ಅತ್ಯುತ್ತಮವಾಗಿ ಪಕ್ಷದ ಕಾರ್ಯಕ್ರಮ ಗಳನ್ನು ಸಮಯಕ್ಕೆ ಸರಿಯಾಗಿ ನಡೆಸುತ್ತಿರುವುದರಿಂದ ಪಕ್ಷ ಸಂಘಟನೆ ಉತ್ತಮವಾಗಿದೆ. ಪ್ರತಿ ಬೂತ್ ಮಟ್ಟದಲ್ಲಿ ಬಿಜೆಪಿ ಕಾರ್ಯಕರ್ತರು ಶಕ್ತಿ ಮೀರಿ ಕೆಲಸ ನಿರ್ವಹಿಸುತ್ತಿದ್ದಾರೆ. ಇದರಿಂದಾಗಿ ಕ್ಷೇತ್ರದಲ್ಲಿ ಬಿಜೆಪಿಯ ವಿಜಯ ಪತಾಕೆ ಮತ್ತಷ್ಟು ಎತ್ತರಕ್ಕೆ ಏರುವಂತಾಗಿದೆ ಎಂದು ಕ್ಷೇತ್ರದ ಶಾಸಕ ಕೆ.ಜಿ. ಬೋಪಯ್ಯ ಹೇಳಿದರು.

ಗೋಣಿಕೊಪ್ಪಲುವಿನ ಕೃಷಿ ಉತ್ಪನ್ನ ಮಾರುಕಟ್ಟೆ ಸಭಾಂಗಣದಲ್ಲಿ ದೇಶದ ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟು ಹಬ್ಬದ ಪ್ರಯುಕ್ತ ಆಯೋಜನೆಗೊಂಡಿದ್ದ ಸೇವಾ ಸಮರ್ಪಣ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕ್ಷೇತ್ರದಲ್ಲಿ ಅಭೂತ ಪೂರ್ವಜಯಗಳಿಸಿ ಪಕ್ಷ ಅಧಿಕಾರಕ್ಕೆ ಬಂದಿದೆ. ಪ್ರತಿ ಗ್ರಾ.ಪಂ.ಯಲ್ಲಿಯೂ ಅಧಿಕಾರವನ್ನು ಪಡೆದಿದೆ. ಕೆಲವು ಪಂಚಾಯಿತಿಗಳಲ್ಲಿ ಮುಂದೆ ಅಧಿಕಾರ ಪಡೆಯಬೇಕು. ಕಾರ್ಯಕರ್ತರ ನಿರಂತರ ಶ್ರಮದಿಂದ ಇಂತಹ ಸಾಧನೆ ಮಾಡಲು ಸಾಧ್ಯವಾಗಿದೆ. ಪಕ್ಷದ ಕಾರ್ಯಕರ್ತರು ಪಕ್ಷ ನೀಡುವ ಜವಾಬ್ದಾರಿಯನ್ನು ಉತ್ತಮವಾಗಿ ನಿಭಾಯಿಸುತ್ತಿರುವು ದರಿಂದ ಕ್ಷೇತ್ರದಲ್ಲಿ ದೊಡ್ಡ ಪ್ರಮಾಣದಲ್ಲಿ ಪಕ್ಷ ಸಂಘಟನೆಯಾ ಗುತ್ತಿದೆ. ಸರ್ಕಾರದ ಯೋಜನೆಗಳನ್ನು ಸಕಾಲದಲ್ಲಿ ಅರ್ಹರಿಗೆ ತಲುಪಿಸುವ ಕೆಲಸ ಕಾರ್ಯಕರ್ತರಿಂದ ಆಗಬೇಕಾಗಿದೆ. ಪಕ್ಷಕ್ಕೆ ಹಗಲಿರುಳು ಶ್ರಮಿಸುತ್ತಿರುವ ಪಕ್ಷದ ಪ್ರಮುಖರು ನೀಡುವ ಸೂಚನೆಯನ್ನು ಕಾರ್ಯಕರ್ತರು ತಪ್ಪದೆ ಪಾಲಿಸಬೇಕು. ಒಗ್ಗಟ್ಟಿನಿಂದ ಪಕ್ಷವನ್ನು ಮತ್ತಷ್ಟು ಸದೃಢಗೊಳಿಸಬೇಕು ಎಂದು ಕಾರ್ಯಕರ್ತರಿಗೆ ಕರೆ ನೀಡಿದರು.

ವೀರಾಜಪೇಟೆ ಮಂಡಲ ಅಧ್ಯಕ್ಷ ನೆಲ್ಲೀರ ಚಲನ್‌ಕುಮಾರ್ ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿ ಕ್ಷೇತ್ರದಲ್ಲಿ ಪಕ್ಷ ಸಂಘಟನೆಗೆ ಒತ್ತು ನೀಡಲಾಗಿದೆ. ಪಕ್ಷ ನೀಡುವ ಎಲ್ಲಾ ಕಾರ್ಯಕ್ರಮಗಳನ್ನು ಕಾರ್ಯಕರ್ತರ ಮೂಲಕ ಜನರ ಮನೆಗೆ ತಲುಪಿಸುತ್ತಿದ್ದೇವೆ. ದೇಶದ ಪ್ರಧಾನಿಯವರ ಹುಟ್ಟು ಹಬ್ಬದ ಅಂಗವಾಗಿ ಏರ್ಪಡಿಸಿರುವ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಿಭಾಯಿಸಿದ್ದೇವೆ. ಕಾರ್ಯಕರ್ತರ ನಿರಂತರ ಶ್ರಮದಿಂದ ಇಂತಹ ಸಾಧನೆ ಮಾಡಲು ಸಾಧ್ಯವಾಯಿತು ಎಂದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ರಾಜ್ಯ ಬಿಜೆಪಿ ಪ್ರಮುಖರು, ಸಂಪನ್ಮೂಲವ್ಯಕ್ತಿ ಮೋನಪ್ಪ ಭಂಡಾರಿ ಮಾತನಾಡಿ ಮೋದಿಯವರ ನಿರಂತರ ಕೆಲಸದಿಂದ ದೇಶದ ಜನ ಇಂದು ನೆಮ್ಮದಿಯಾಗಿದ್ದಾರೆ. ಕಾಂಗ್ರೆಸ್ ಪಕ್ಷ ಏನೇ ಟೀಕೆ ಮಾಡಿದರೂ ಬಿಜೆಪಿ ಪಕ್ಷಕ್ಕೆ ಲಾಭವಾಗುತ್ತಿದೆ. ಸಣ್ಣ ಕಾರ್ಯಕರ್ತನಾಗಿ ಗುರುತಿಸಿಕೊಂಡ ಮೋದಿಯವರು ಗುಜರಾತಿನ ಮುಖ್ಯಮಂತ್ರಿಗಳಾಗಿ ಜನಪರ ಸೇವೆ ಸಲ್ಲಿಸಿದ ನಂತರ ದೇಶದ ಪ್ರಧಾನಿ ಗಳಾಗಿ ಜವಾಬ್ದಾರಿ ನಿಭಾಯಿಸುತ್ತಿ ದ್ದಾರೆ. ೮ ಕೋಟಿಗೂ ಅಧಿಕ ಅಡುಗೆ ಅನಿಲವನ್ನು ಉಚಿತವಾಗಿ ವಿತರಿಸಿದ್ದಾರೆ. ಸಕಾಲದಲ್ಲಿ ಅಡುಗೆ ಅನಿಲಗಳು ಜನರಿಗೆ ತಲುಪಲು ಮೋದಿಯವರ ಕೆಲಸಕ್ಕೆ ಸಾಕ್ಷಿಯಾಗಿದೆ. ಈ ನಿಟ್ಟಿನಲ್ಲಿ ಸೇವೆ ಹಾಗೂ ಸಮರ್ಪಣೆ ಕಾರ್ಯಕ್ರಮವು ದೇಶದ ಎಲ್ಲೆಡೆ ನಡೆಯುತ್ತಿದೆ. ಆದರೆ ಕಾಂಗ್ರೆಸ್ ಪಕ್ಷ ನಿರಂತರ ಟೀಕೆ ಮಾಡುತ್ತ ಕಾಲ ಕಳೆಯುತ್ತಿದೆ. ಸ್ವಚ್ಛತಾ ಕಾರ್ಯದಲ್ಲಿ ಜಗತ್ತಿಗೆ ಭಾರತ ಮಾದರಿಯಾಗಿದೆ. ಇದು ಮೋದಿಯವರ ಕನಸಾಗಿತ್ತು. ಮುಂದೆಯೂ ಪಕ್ಷವನ್ನು ಅಧಿಕಾರಕ್ಕೆ ತರಲು ಕಾರ್ಯಕರ್ತರು ಹಗಲಿರುಳೆನ್ನದೆ ದುಡಿದು ಪಕ್ಷವನ್ನು ಅಧಿಕಾರಕ್ಕೆ ತರಲು ಶ್ರಮಿಸಬೇಕೆಂದರು.

ಬಿಜೆಪಿ ಜಿಲ್ಲಾ ಅಧ್ಯಕ್ಷ ರಾಬೀನ್ ದೇವಯ್ಯ ಮಾತನಾಡಿ ಜಿಲ್ಲೆಯಲ್ಲಿ ಪಕ್ಷ ಸಂಘಟನೆ ವೇಗವಾಗಿ ನಡೆಯುತ್ತಿದೆ. ಮುಂದಿನ ಚುನಾವಣೆ ದೃಷ್ಟಿಯಲ್ಲಿಟ್ಟು ಕೊಂಡು ಪಕ್ಷದ ಕಾರ್ಯಕರ್ತರು ಕೆಲಸ ಮಾಡಬೇಕು. ಸರ್ಕಾರದ ಯೋಜನೆಗಳನ್ನು ಜನರ ಬಳಿಗೆ ತಲುಪಿಸಬೇಕು ಎಂದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುಂಞAಗಡ ಅರುಣ್ ಭೀಮಯ್ಯ ಮಾತನಾಡಿ ಮೋದಿಯವರ ರೀತಿಯಲ್ಲಿ ಕಾರ್ಯಕರ್ತರು ಕೆಲಸ ಮಾಡಬೇಕು. ಇದರಿಂದ ಜನತೆಗೆ ಸರ್ಕಾರದ ಯೋಜನೆಗಳನ್ನು ಸಕಾಲದಲ್ಲಿ ತಲುಪಿಸಲು ಸಹಾಯವಾಗುತ್ತದೆ ಎಂದರು.

ವೇದಿಕೆಯಲ್ಲಿ ರಾಜ್ಯ ಶಿಸ್ತು ಸಮಿತಿಯ ಸದಸ್ಯೆ ರೀನಾಪ್ರಕಾಶ್, ರಾಜ್ಯ ಸಮಿತಿ ಸದಸ್ಯ ಮನು ಮುತ್ತಪ್ಪ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಅಚ್ಚಪಂಡ ಮಹೇಶ್, ವೀರಾಜಪೇಟೆ ಮಂಡಲ ಉಪಾಧ್ಯಕ್ಷ ಚೋಡುಮಾಡ ಶ್ಯಾಂ ಪೂಣಚ್ಚ, ವಾಟೇರಿರ ಬೋಪಣ್ಣ, ಅಪ್ಪಂಡೇರAಡ ಭವ್ಯ, ಪಕ್ಷದ ಮುಖಂಡರಾದ ಸಿ.ಕೆ.ಬೋಪಣ್ಣ, ಗುಮ್ಮಟ್ಟೀರ ಕಿಲನ್ ಗಣಪತಿ, ಚೆಪ್ಪುಡೀರ ಮಾಚು, ಚೋಡುಮಾಡ ಶರೀನ್ ಸುಬ್ಬಯ್ಯ, ರಾಣಿ ನಾರಾಯಣ, ಕೆ. ರಾಜೇಶ್, ಕಟ್ಟೇರ ಈಶ್ವರ್, ಬೊಟ್ಟಂಗಡ ದಶಮಿ, ಚೈತ್ರ, ವಿಜಯ, ಮುಂತಾದವರು ಉಪಸ್ಥಿತರಿದ್ದರು. ಮಂಡಲ ಪ್ರಧಾನ ಕಾರ್ಯದರ್ಶಿ ಅಜ್ಜಿಕುಟ್ಟೀರ ಪ್ರವೀಣ್ ಸ್ವಾಗತಿಸಿ, ವಂದಿಸಿದರು.

ವೀರಾಜಪೇಟೆ ಮಂಡಲದ ಬಿಜೆಪಿ ಯುವ ಮೋರ್ಚಾ, ಕೃಷಿ ಮೋರ್ಚಾ, ಒಬಿಸಿ ಮೋರ್ಚಾ, ಮಹಿಳಾ ಮೋರ್ಚಾ ಸೇರಿದಂತೆ ಇನ್ನಿತರ ಮೋರ್ಚಾಗಳ ಅಧ್ಯಕ್ಷರು, ಪದಾಧಿಕಾರಿಗಳು, ಗ್ರಾ.ಪಂ. ಅಧ್ಯಕ್ಷರು, ಉಪಾಧ್ಯಕ್ಷರು ಭಾಗವಹಿಸಿದ್ದರು.

- ಹೆಚ್.ಕೆ. ಜಗದೀಶ್